LatestLeading NewsMain PostNational

ರಾಹುಲ್‌, ಸೋನಿಯಾ ಗಾಂಧಿ ಅವರ ತ್ಯಾಗ ಬಹಳಷ್ಟಿದೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: 10 ವರ್ಷ ನಡೆಸಿದ್ದರೂ ಸೋನಿಯಾ ಗಾಂಧಿ (Sonia Gandhi), ರಾಹುಲ್‌ ಗಾಂಧಿ (Rahul Gandhi) ಅವರು ಅಧಿಕಾರಕ್ಕಾಗಿ ಹಪಹಪಿಸಲಿಲ್ಲ. ಅವರ ತ್ಯಾಗ ಬಹಳಷ್ಟಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆ (Congress President Polls) ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೊಂಡಾಡಿದರು.

ಚುನಾವಣೆಗೆ ನಾಮಪತ್ರ ಸಲ್ಲಿಕೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು. ಇಂತಹ ಸಂದರ್ಭದಲ್ಲಿ ನನಗೆ ಸ್ಪರ್ಧಿಸುವಂತೆ ಅನೇಕರು ಒತ್ತಾಯಿಸಿದರು. ಹೀಗಾಗಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ನಾನು ಯಾರ ವಿರುದ್ಧವೂ ಸ್ಪರ್ಧೆ ಮಾಡುತ್ತಿಲ್ಲ. ಪಕ್ಷದ ಸಿದ್ಧಾಂತ, ವಿಚಾರಧಾರೆ ಮುಂದಿಟ್ಟುಕೊಂಡು ಸ್ಪರ್ಧೆ ಮಾಡುತ್ತಿದ್ದೇನೆ. ನನ್ನ ಪಕ್ಷದ ಎಲ್ಲರೂ ಸಹಕಾರ ಕೂಡ ಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಮಾವೇಶಕ್ಕೂ ಮುನ್ನವೇ ದೇವರ ಮೊರೆ ಹೋದ ಕಾಂಗ್ರೆಸ್‌ ನಾಯಕರು- ಬಳ್ಳಾರಿಯಲ್ಲಿ ಹೋಮ

ಕೆಪಿಸಿಸಿಗೂ ಕೂಡ ನಾನು ಅಧ್ಯಕ್ಷ ಆಗಿದ್ದೆ. ಬಾಲ್ಯದಿಂದ ಈತನಕ ನಾನು ಹೋರಾಟ ಮಾಡಿಕೊಂಡು ಬಂದಿದ್ದೇನೆ. ಈಗಲೂ ನಾನು ಹೋರಾಟ ಮಾಡುತ್ತೇನೆ. ಕರ್ನಾಟಕದಲ್ಲಿ ವಿಪಕ್ಷ ನಾಯಕ, ಬಹುತೇಕ ಎಲ್ಲಾ ಸಚಿವ ಸ್ಥಾನಗಳನ್ನು ಕೂಡ ಅಲಂಕರಿಸಿದ್ದೇನೆ. ಕೇಂದ್ರದಲ್ಲೂ ಕೂಡ ಸಚಿವನಾಗಿ, ವಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದೇನೆ. ಇದು ಪಾರ್ಟ್ ಟೈಮ್ ಜಾಬ್ ಅಲ್ಲ, ಫುಲ್ ಟೈಮ್ಸ್ ಜಾಬ್. ನಾನು ಯಾವಾಗಲೂ ಫುಲ್ ಟೈಮ್ ಕೆಲಸ ಮಾಡಿದ್ದೇನೆ. ಯಾವಾಗಲೂ ಹೃದಯದಿಂದ ಕೆಲಸ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ನಿರುದ್ಯೋಗ, ಡೀಸೆಲ್-ಪೆಟ್ರೋಲ್ ಬೆಲೆ, ಹಣದುಬ್ಬರ ಹೆಚ್ಚುತ್ತಿದೆ. ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ, ಬಡವರು ಬಡವರಾಗುತ್ತಿದ್ದಾರೆ. ಬಿಜೆಪಿ (BJP) ಎಂಟು ವರ್ಷಗಳಲ್ಲಿ ಅವರು ಹೇಳಿದ ಯಾವುದಕ್ಕೂ ಪರಿಹಾರ ನೀಡಿಲ್ಲ. ಬಿಜೆಪಿ ಯಾವಾಗಲೂ ಕಾಂಗ್ರೆಸ್ ಬಗ್ಗೆ ಕೆಳಮಟ್ಟದಲ್ಲಿಟ್ಟು ಮಾತಾಡುತ್ತೆ. ಬಿಜೆಪಿ ಯಾವಾಗ ಚುನಾವಣೆ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಗಾಂಧಿ ಕೊಂದ ಗೋಡ್ಸೆ ಉತ್ಸವ ಮಾಡುವವರಿಂದ ಗಾಂಧೀಜಿ ಬಗ್ಗೆ ತಿಳಿದುಕೊಳ್ಳಬೇಕಾ – ಬೊಮ್ಮಾಯಿಗೆ ಸಿದ್ದು ತಿರುಗೇಟು

9,300 ಮತದಾರರ ಮುಂದೆ ನನ್ನ ವಿಚಾರ ಮುಂದಿಡುತ್ತೇನೆ. ಸಿದ್ಧಾಂತ, ವಿಚಾರ ಪ್ರಸ್ತಾಪ ಮಾಡುತ್ತೇನೆ. ಹೈಕಮಾಂಡ್ ರಿಮೋಟ್ ಕಂಟ್ರೋಲ್ ಇಲ್ಲ, ಏನು ಇಲ್ಲ ಎಂದು ಟೀಕೆಗಳಿಗೆ ಉತ್ತರ ಕೊಟ್ಟಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button