ಬೆಂಗಳೂರು: ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಂದು ಜವಾಬ್ದಾರಿಯನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿದೆ.
ಕಾಂಗ್ರೆಸ್ ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೆರೆಯ ರಾಜ್ಯ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದಾರೆ. ಹೀಗಾಗಿ ಪಕ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಲಿದೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಉಸ್ತುವಾರಿ ಹಾಗೂ ಕಾರ್ಯದರ್ಶಿ ನೇಮಕದಲ್ಲಿ ಹೈಕಮಾಂಡ್ ಧೀಡಿರ್ ನಿರ್ಧಾರ ಕೈಕೊಂಡಿದ್ದು, ನಾಲ್ಕು ಜನರ ಪಟ್ಟಿಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಬಿಡುಗಡೆ ಮಾಡಿದ್ದಾರೆ.
ಎಐಸಿಸಿ ಉಸ್ತುವಾರಿಗಳಾಗಿ ಮಹಾರಾಷ್ಟ್ರಕ್ಕೆ ಕರ್ನಾಟಕ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇಮಕಗೊಂಡಿದ್ದು, ಕಾರ್ಯದರ್ಶಿಗಳಾಗಿ ಹರ್ಯಾಣದ ಆಶೀಸ್ ದುವಾ, ಗುಜರಾತಿನ ಸೋನಲ್ ಪಟೇಲ್, ಹಾಗೂ ತೆಲಂಗಾಣದ ಸಂಪತ್ ಕುಮಾರ್ ನೇಮಕಗೊಂಡಿದ್ದಾರೆ. ಈ ಹಿಂದೆ ಮಹಾರಾಷ್ಟ್ರದಲ್ಲಿ ಕಾರ್ಯದರ್ಶಿಗಳಾಗಿ ಶ್ಯರಾಜ್ ಜೀವನ್ ವಾಲ್ಮೀಕಿ, ಬಾಲಾ ಬಚ್ಚನ್ ಜವಾಬ್ದಾರಿ ವಹಿಸಿಕೊಂಡಿದ್ದರು.
INC COMMUNIQUE
Announcement of AICC General Secretary and Secretaries for Maharashtra pic.twitter.com/8Yn2Bg6xzL
— INC Sandesh (@INCSandesh) June 22, 2018