ವಾಷಿಂಗ್ಟನ್: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕಾ ಪ್ರವಾಸದಲ್ಲಿದ್ದಾರೆ.
ಕಾಂಗ್ರೆಸ್ (Congress) ಸಂಸದರನ್ನು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಮತ್ತು ಭಾರತೀಯ ಡಯಾಸ್ಪೊರಾ ಸದಸ್ಯರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಇದನ್ನೂ ಓದಿ: ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್ ಕಾರ್ಡ್ ಇಲ್ಲ: ಅಸ್ಸಾಂ ಸಿಎಂ ಘೋಷಣೆ
Advertisement
Advertisement
ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯ ಬಲಪಡಿಸಲು ಅರ್ಥಪೂರ್ಣ ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯನ್ನು ರಾಹುಲ್ ಗಾಂಧಿ ವ್ಯಕ್ತಪಡಿಸಿದ್ದಾರೆ. ಯುಎಸ್‌ಗೆ ಆಗಮಿಸಿದ ವಿಪಕ್ಷ ನಾಯಕನಿಗೆ ಹೂಗುಚ್ಛ ನೀಡಿ, ಆರತಿ ಬೆಳಗಿ ಸ್ವಾಗತ ಕೋರಲಾಯಿತು.
Advertisement
ಅಮೆರಿಕದ ಡಲ್ಲಾಸ್‌ನ ಟೆಕ್ಸಾಸ್‌ನಲ್ಲಿ ಭಾರತೀಯ ಡಯಾಸ್ಪೊರಾ ಮತ್ತು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಸದಸ್ಯರಿಂದ ನನಗೆ ದೊರೆತ ಆತ್ಮೀಯ ಸ್ವಾಗತದಿಂದ ನಾನು ನಿಜವಾಗಿಯೂ ಸಂತೋಷಗೊಂಡಿದ್ದೇನೆ ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನ – ಅಮಿತ್ ಶಾ ಆರೋಪ
Advertisement
ಈ ಭೇಟಿಯ ಸಮಯದಲ್ಲಿ ನಮ್ಮ ಎರಡು ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಅರ್ಥಪೂರ್ಣ ಚರ್ಚೆಗಳು ಮತ್ತು ಒಳನೋಟವುಳ್ಳ ಸಂಭಾಷಣೆಗಳಲ್ಲಿ ತೊಡಗಿಸಿಕೊಳ್ಳಲು ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.