ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಚುನಾವಣೆ ಅಕ್ರಮದ (Election Irregularities) ಕುರಿತು ಪ್ರತಿಭಟನೆ ಮಾಡಲು ಆಗಸ್ಟ್ 5ಕ್ಕೆ ಬೆಂಗಳೂರಿಗೆ ಬರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು 5ನೇ ತಾರೀಖು ಪ್ರತಿಭಟನೆ ಮಾಡಲು ರಾಜ್ಯಕ್ಕೆ ಬರುತ್ತಿದ್ದಾರೆ. ಇಂದು ಪ್ರತಿಭಟನೆ ರೂಪುರೇಷೆ ಸಂಬಂಧ ಸಭೆ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು. ಎಲ್ಲಿ ಮಾಡಬೇಕು ಎಂದು ಆ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಆಗಸ್ಟ್ 1ರಿಂದ ಆಟೋ ಪ್ರಯಾಣ ದರ ಏರಿಕೆ
ರಾಹುಲ್ ಗಾಂಧಿ ಚುನಾವಣೆ ಆಯೋಗದ ಬಗ್ಗೆ ಮಾಡಿರೋ ಆರೋಪದ ಬಗ್ಗೆ ಅವರ ಬಳಿ ದಾಖಲಾತಿ ಇದೆ. ಹೀಗಾಗಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಮಾಡಲು ಬರುತ್ತಿದ್ದಾರೆ. ಪ್ರತಿಭಟನೆ ಬಳಿಕ ಚುನಾವಣಾ ಆಯೋಗಕ್ಕೆ ಭೇಟಿ ನೀಡಿ ಮನವಿ ಕೊಡುತ್ತಾರೆ. ಮಹದೇವಪುರ, ರಾಜಾಜಿನಗರದಲ್ಲಿ ಚುನಾವಣೆ ಅಕ್ರಮ ಆಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರಳಿದ ಸಾರಿಗೆ ಬಸ್ – ಪ್ರಯಾಣಿಕರು ಸೇಫ್