ಚೆನ್ನೈ: ರಾಜಸ್ಥಾನ, (Rajasthana) ಛತ್ತಿಸ್‌ಗಢದ ನಂತರ ತಮಿಳುನಾಡು (Tamilnadu) ಮತ್ತು ಬಿಹಾರದ ಕಾಂಗ್ರೆಸ್ ಘಟಕಗಳು ರಾಹುಲ್ ಗಾಂಧಿ (Rahul Gandhi) ಅವರೇ ರಾಷ್ಟ್ರೀಯ ಕಾಂಗ್ರೆಸ್ (National Congress) ಅಧ್ಯಕ್ಷರಾಗಬೇಕು ಎಂದು ನಿರ್ಣಯ ತೆಗೆದುಕೊಂಡಿವೆ.
ಸೆಪ್ಟೆಂಬರ್ 22ರಂದು ಕಾಂಗ್ರೆಸ್ ಅಧ್ಯಕ್ಷರ (Congress President) ಚುನಾವಣೆಗೆ (Election) ಅಧಿಸೂಚನೆ ಹೊರಬೀಳಲಿದ್ದು, ಇಂದು ನಡೆದ ಟಿಎನ್‌ಸಿಸಿ (ತಮಿಳುನಾಡು ರಾಜ್ಯ ಕಾಂಗ್ರೆಸ್ ಸಮಿತಿ) ನಡೆದ ಸಾಮಾನ್ಯ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಆರ್ಥಿಕ ಇಲಾಖೆಯೇ ಎಲ್ಲಾ ಮಾಡಬೇಕಾದ್ರೆ ಸಚಿವರು ಯಾಕೆ ಬೇಕು? ಆಯನೂರು ಮಂಜುನಾಥ್ ಆಕ್ರೋಶ
Advertisement
Advertisement
ಕಾಂಗ್ರೆಸ್ ಅಧ್ಯಕ್ಷ (AICC President) ಸ್ಥಾನಕ್ಕೆ ಸೆಪ್ಟೆಂಬರ್ 24 ರಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಸೆ.30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 8ರ ವರೆಗೂ ನಾಮಪತ್ರ ಹಿಂಪಡೆಯಲು ಅವಕಾಶವಿರಲಿದೆ. ಅ.17 ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಧರಿಸಿದ್ದು ಅ.19 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಸ್ನಾನದ ವೀಡಿಯೋ ಲೀಕ್ – ವಾಶ್ ರೂಂ ಅಂದ್ರೆನೇ ಬೆಚ್ಚಿ ಬೀಳ್ತಿದ್ದಾರೆ ವಿದ್ಯಾರ್ಥಿನಿಯರು
Advertisement
Advertisement
ಇಂದು ನಡೆದ ರಾಜ್ಯ ಕಾಂಗ್ರೆಸ್ ಪ್ರತಿನಿಧಿಗಳ ಸಭೆಯಲ್ಲಿ ರಾಹುಲ್ ಗಾಂಧಿ ಮತ್ತೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಹಾಗೂ ಎಐಸಿಸಿ ಅಧ್ಯಕ್ಷರು ಎಐಸಿಸಿ ಪ್ರತಿನಿಧಿ, ಪಿಸಿಸಿ ಅಧ್ಯಕ್ಷರು, ಖಜಾಂಚಿ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ರಚಿಸಲು ಅಧಿಕಾರ ಹೊಂದಿರುತ್ತಾರೆ ಎಂದು ಛತ್ತಿಸ್‌ಗಢ ಘಟಕ ನಿರ್ಣಯ ತೆಗೆದುಕೊಂಡ ಬಳಿಕ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ನಾನು ಕಾಂಗ್ರೆಸ್ ಅಧ್ಯಕ್ಷನಾಗಬೇಕೇ – ಇಲ್ಲವೇ ಎಂಬುದು ಅಧ್ಯಕ್ಷ ಸ್ಥಾನದ ಚುನಾವಣೆ ನಡೆದಾಗ ಸ್ಪಷ್ಟವಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದರು.