ನವದೆಹಲಿ: ಸತತ ಮಳೆ ಮತ್ತು ಪ್ರವಾಹದಿಂದ ಆಂಧ್ರಪ್ರದೇಶದಲ್ಲಿ 25 ಮಂದಿ ಮೃತಪಟ್ಟಿರುವ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂಕಷ್ಟಕ್ಕೆ ಸಿಲುಕಿರುವವರಿಗೆ ಪಕ್ಷದ ಕಾರ್ಯಕರ್ತರು ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಟ್ವೀಟ್ನಲ್ಲಿ ಏನಿದೆ?: ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಭಾರೀ ಹಾನಿಯಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪ. ಆತ್ಮೀಯ ಕಾಂಗ್ರೆಸ್ ಕಾರ್ಯಕರ್ತರೇ, ದಯವಿಟ್ಟು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಅಕಾಲಿಕ ಮಳೆಗೆ ಜನಜೀವನ ಅಸ್ತವ್ಯಸ್ತ – ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಕಟ್ಟೆಚ್ಚರ
Advertisement
Floods have been causing serious damage in Andhra Pradesh. My condolence to those who’ve lost loved ones.
Dear Congress workers, please help in all ways possible.
— Rahul Gandhi (@RahulGandhi) November 21, 2021
ಆಂಧ್ರಪ್ರದೇಶದಲ್ಲಿ ಆಗಿರುವ ಪ್ರವಾಹವು ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಿದೆ. ತೊಂದರೆಯಲ್ಲಿರುವವರಿಗೆ ಪಕ್ಷದ ಕಾರ್ಯಕರ್ತರು ನೆರವಾಗಬೇಕು ಎಂದು ಟ್ವೀಟ್ ಮಾಡಿ ಹೇಳಿದ್ದಾರೆ. ಮಳೆ ಮತ್ತು ಪ್ರವಾಹಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಅನಂತಪುರ ಮತ್ತು ಕಡಪಾ ಜಿಲ್ಲೆಯಲ್ಲಿ ಕನಿಷ್ಠ 25 ಮಂದಿ ಸಾವಿಗೀಡಾಗಿದ್ದು 15 ಮಂದಿ ಕಾಣೆಯಾಗಿದ್ದಾರೆ. ಇದನ್ನೂ ಓದಿ: 1.5 ಕೋಟಿ ರೂ. ಮೌಲ್ಯದ ಹಾವಿನ ವಿಷ ಮಾರಾಟ – ಇಬ್ಬರು ಅರೆಸ್ಟ್