8 ವರ್ಷದಲ್ಲಿ ಭಾರತ ದುರ್ಬಲವಾಗಿದೆ, ವಸ್ತುಗಳ ಬೆಲೆ ಭಾರೀ ಏರಿಕೆಯಾಗಿದೆ: ರಾಹುಲ್ ಕಿಡಿ

Public TV
2 Min Read
RAHUL GANDHI

ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದಲ್ಲಿ ದ್ವೇಷ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದ್ವೇಷವನ್ನು ಹರಡುತ್ತಾ ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದೆ. 8 ವರ್ಷಗಳಲ್ಲಿ ಭಾರತವನ್ನು ದುರ್ಬಲಗೊಳಿಸಿದ್ದು, ಪಾಕಿಸ್ತಾನ ಮತ್ತು ಚೀನಾ ಇದರ ಲಾಭ ಪಡೆದುಕೊಳ್ಳುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಅವರು ಬೆಲೆ ಏರಿಕೆ ವಿರೋಧಿಸಿ ದೇಶದಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನಾ ರ‍್ಯಾಲಿಯನ್ನುದ್ದೇಶಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಮಾತನಾಡಿದರು. ಇದನ್ನೂ ಓದಿ: ಸುಳಿವು ಕೊಟ್ಟು ಆ ಪದ ನಾನು ಹೇಳಲ್ಲ – ನಾಚಿ ನೀರಾದ ದ್ರಾವಿಡ್, ಬಿದ್ದುಬಿದ್ದು ನಕ್ಕ ಪತ್ರಕರ್ತರು

ದೇಶದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿಂದಲೂ ದ್ವೇಷ ಬೆಳೆಯುತ್ತಿದೆ. ಹಣದುಬ್ಬರ, ನಿರುದ್ಯೋಗ ಸಮಸ್ಯೆ ಬೆಲೆ ಏರಿಕೆ ಮೊದಲಾದ ಸಮಸ್ಯೆಗಳು ಜನರನ್ನು ದ್ವೇಷದ ಕಡೆ ತಿರುಗುವಂತೆ ಮಾಡುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಎರಡೂ ಸೇರಿ ದೇಶವನ್ನು ವಿಭಜನೆ ಮಾಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಭಯ ಮತ್ತು ದ್ವೇಷದಿಂದ ಇಬ್ಬರು ಕೈಗಾರಿಕೋದ್ಯಮಿಗಳಿಗೆ ಲಾಭವಾಗುತ್ತಿದೆ. ವಿಮಾನ ನಿಲ್ದಾಣ, ಬಂದರು ಇದೆಲ್ಲದರ ಪ್ರಯೋಜನವನ್ನೂ ಅವರೇ ಪಡೆಯುತ್ತಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಲು ಬಿಜೆಪಿ ಕೆಲಸ ಮಾಡುತ್ತಿದೆ. ನಮ್ಮ ಸಿದ್ಧಾಂತ ದೇಶದ ಪ್ರಗತಿಯಿಂದ ಪ್ರತಿಯೊಬ್ಬರು ಪ್ರಯೋಜನ ಪಡೆಯಬೇಕು ಎಂದು ಹೇಳಿದರೆ, ಪ್ರಧಾನಿ ಅವರ ವಿಚಾರ ಧಾರೆ ಉದ್ಯಮಿಗಳು ಮಾತ್ರ ಪ್ರಯೋಜನ ಪಡೆಯಬೇಕು ಎಂದು ಹೇಳುತ್ತದೆ. ಇದರಿಂದಾಗಿಯೇ ಮೋದಿ ಸರ್ಕಾರ ಜನರಿಗೆ ಉದ್ಯೋಗ ನೀಡಲು ಸಾಧ್ಯವಾಗುತ್ತಿಲ್ಲ. ದಿನದ 24 ಗಂಟೆಯು ಉದ್ಯಮಿಗಳಿಗಾಗಿಯೇ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

RAHUL

ಮಾಧ್ಯಮ, ನ್ಯಾಯಾಂಗ, ಚುನಾವಣಾ ಆಯೋಗದಂತಹ ಸಂಸ್ಥೆಗಳ ಮೇಲೆ ಈಗಲೂ ಒತ್ತಡವಿದೆ. ಅಲ್ಲದೇ ದೇಶದಲ್ಲಿ ಈಗ ಕಾಣುತ್ತಿರುವ ಬೆಲೆ ಏರಿಕೆ ಹಿಂದೆಂದೂ ನೋಡಿರಲಿಲ್ಲ. ಜನರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಧ್ವನಿ ಎತ್ತಲು ಮುಂದಾದರೆ, ಮೋದಿ ಸರ್ಕಾರ ಅದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: BPL ಕಾರ್ಡ್‌ ಹೊಂದಿರುವ ಎಸ್‌ಸಿ, ಎಸ್‌ಟಿಗಳಿಗೆ ಗೃಹ ಬಳಕೆಗೆ 75 ಯುನಿಟ್‌ ಉಚಿತ ವಿದ್ಯುತ್ – ಆದೇಶ ಹಿಂಪಡೆದ ಸರ್ಕಾರ

Rahul gandhi 4

ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಕೇಂದ್ರೀಯ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು ಇತ್ತೀಚೆಗೆ ನಡೆಸಿದ ಶೋಧ ಕಾರ್ಯಾಚರಣೆಗಳ ಬಗ್ಗೆಯೂ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾರು ಮಾತನಾಡುತ್ತಾರೋ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ. ಇತ್ತೀಚೆಗೆ ನನ್ನನ್ನು 55 ಗಂಟೆ ಕಾಲ ಇ.ಡಿ ಕಚೇರಿಯಲ್ಲಿ ಕುಳಿತುಕೊಳ್ಳುವಂತೆ ಮಾಡಲಾಗಿತ್ತು. ಆದರೆ ನಾನು ನಿಮ್ಮ ಇಡಿಗೆ ಹೆದರುವುದಿಲ್ಲ ಎಂದು ಪ್ರಧಾನಿ ಅವರಿಗೆ ಹೇಳಲು ಬಯಸುತ್ತೇನೆ. ಬೇಕಿದ್ದರೆ ನೂರು ವರ್ಷಗಳವರೆಗೂ ಪ್ರಶ್ನೆಗಳನ್ನು ಕೇಳಲಿ ನಾನು ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *