ಬೆಂಗಳೂರು: ಸುಳ್ಳು, ವ್ಯವಸ್ಥಿತವಾದ ಅಪಪ್ರಚಾರ, ನಿಂದನೆಗಳ ಮೂಲಕ ರಾಹುಲ್ ಗಾಂಧಿ (Rahul Gandhi) ಅವರ ಚಾರಿತ್ರ್ಯಹರಣ ಮಾಡುತ್ತಾ ಬಂದವರಿಗೆ ರಾಹುಲ್ ಗಾಂಧಿ ಎಂದರೆ ಯಾರು, ಏನು ಎನ್ನುವುದನ್ನು ಭಾರತ ಐಕ್ಯತಾ ಯಾತ್ರೆ (Bharat Jodo Yatra) ಪ್ರತ್ಯಕ್ಷವಾಗಿ ತೋರಿಸಿಕೊಟ್ಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸರಣಿ ಟ್ವೀಟ್‍ಗಳ ಮೂಲಕ ಹಾಡಿ ಹೊಗಳಿದ್ದಾರೆ.
Advertisement
ಟ್ವೀಟ್‍ನಲ್ಲಿ ಏನಿದೆ?
ಜಾತಿ, ಮತ, ಪಂಥ, ಪಕ್ಷಗಳ ಭೇದವನ್ನು ಮರೆತು ನಮ್ಮ ಜೊತೆ ಹೆಜ್ಜೆ ಹಾಕಿ ಭಾರತ ಐಕ್ಯತಾ ಯಾತ್ರೆಯನ್ನು ಯಶಸ್ಸಿಯನ್ನಾಗಿ ಮಾಡಿದ ಕರ್ನಾಟಕದ (Karnataka) ಸಮಸ್ತ ಜನತೆಗೆ ತುಂಬು ಹೃದಯದ ಧನ್ಯವಾದಗಳು. ಪುಟ್ಟಬಾಲಕ-ಬಾಲಕಿಯರು, ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ವೃದ್ಧರು, ಕಾರ್ಮಿಕರು, ರೈತರು, ಕುಶಲಕರ್ಮಿಗಳು, ಸೈನಿಕರು, ಸಾಹಿತಿಗಳು, ಚಿಂತಕರು, ಹೋರಾಟಗಾರರು ಭಾಗವಹಿಸಿ ಭಾರತ ಐಕ್ಯತಾ ಯಾತ್ರೆಯ ಸಂದೇಶವನ್ನು ಅರ್ಥಪೂರ್ಣವಾಗಿಸಿದರು. ಇದನ್ನೂ ಓದಿ: ಮಹಿಳೆಗೆ ಕಪಾಳಮೋಕ್ಷ ಪ್ರಕರಣ- ಸೋಮಣ್ಣ ಕ್ಷಮೆಯಾಚನೆ
Advertisement
Advertisement
ಸಮಾಜವನ್ನು ಒಡೆಯುವ ಮೂಲಕವೇ ರಾಜಕೀಯ ಗೆಲುವನ್ನು ಪಡೆಯುತ್ತಾ ಬಂದ ಬಿಜೆಪಿಯ (BJP) ವಿಚ್ಛಿದ್ರಕಾರಿ ಅಜೆಂಡಾಕ್ಕೆ ಪ್ರತಿಯಾಗಿ ಸಮಾಜವನ್ನು ಕೂಡಿ ಕಟ್ಟಬೇಕೆಂಬ ಸಂಕಲ್ಪದಿಂದ ಭಾರತ ಜೋಡೋ ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಆಭಾರಿಯಾಗಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಹೇಳುತ್ತಾ ಬಂದಂತೆ ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಆಗಿರದೆ ಸಮಸ್ತ ಜನತೆಯ ಕಾರ್ಯಕ್ರಮವನ್ನಾಗಿ ಮಾಡಿದ ಕರ್ನಾಟಕದ ಜನ ಭವಿಷ್ಯದಲ್ಲಿ ಭರವಸೆ ಹುಟ್ಟಿಸಿದ್ದಾರೆ. ಸುಳ್ಳು, ವ್ಯವಸ್ಥಿತವಾದ ಅಪಪ್ರಚಾರ, ನಿಂದನೆಗಳ ಮೂಲಕ ರಾಹುಲ್ ಗಾಂಧಿ ಅವರ ಚಾರಿತ್ರ್ಯಹರಣ ಮಾಡುತ್ತಾ ಬಂದವರಿಗೆ ರಾಹುಲ್ ಗಾಂಧಿ ಎಂದರೆ ಯಾರು, ಏನು ಎನ್ನುವುದನ್ನು ಭಾರತ ಐಕ್ಯತಾ ಯಾತ್ರೆ ಪ್ರತ್ಯಕ್ಷವಾಗಿ ತೋರಿಸಿಕೊಟ್ಟಿದೆ. ಸರ್ವಾಧಿಕಾರ, ದುರಾಡಳಿತ, ಕೋಮು ಧ್ರುವೀಕರಣದ ಅಜೆಂಡಾ ವಿರುದ್ಧದ ಜನತೆಯ ಹೋರಾಟಕ್ಕೆ ಭಾರತ ಐಕ್ಯತಾ ಯಾತ್ರೆ ಸ್ಪೂರ್ತಿ ಕೊಟ್ಟಿದೆ. ಇದನ್ನೂ ಓದಿ: ನಮಗೆ ಶಾಂತಿ, ಸಹೋದರತ್ವ ಬೇಕು – ನಿಜಾಮುದ್ದೀನ್ ದರ್ಗಾಕ್ಕೆ ಆರ್‌ಎಸ್‌ಎಸ್ ನಾಯಕ ಭೇಟಿ
Advertisement
ಸಮಾಜವನ್ನು ಒಡೆಯುವ ಮೂಲಕವೇ ರಾಜಕೀಯ ಗೆಲುವನ್ನು ಪಡೆಯುತ್ತಾ ಬಂದ ಬಿಜೆಪಿಯ ವಿಚ್ಛಿದ್ರಕಾರಿ ಅಜೆಂಡಾಕ್ಕೆ ಪ್ರತಿಯಾಗಿ ಸಮಾಜವನ್ನು ಕೂಡಿ ಕಟ್ಟಬೇಕೆಂಬ ಸಂಕಲ್ಪದಿಂದ ಭಾರತ ಜೋಡೊ ಯಾತ್ರೆ ಕೈಗೊಡಿರುವ @RahulGandhi ಅವರಿಗೆ ಕರ್ನಾಟಕ ಆಭಾರಿಯಾಗಿದೆ. 3/7#BharaJodoYatra pic.twitter.com/B4dkBFMQP1
— Siddaramaiah (@siddaramaiah) October 23, 2022
ನಮ್ಮ ಎಲ್ಲ ನಾಯಕರು ಮತ್ತು ಕಾರ್ಯಕರ್ತರಿಗೆ ಜನಮನವನ್ನು ಇನ್ನಷ್ಟು ಅರ್ಥಮಾಡಿಕೊಳ್ಳಲು ನೆರವಾಗಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ನೇತೃತ್ವದ ಭಾರತ ಐಕ್ಯತಾ ಯಾತ್ರೆ ಕರ್ನಾಟಕದಿಂದ ನಿರ್ಗಮಿಸಿರಬಹುದು. ಆದರೆ ಯಾತ್ರೆ ಮೂಡಿಸಿದ ಜಾಗೃತಿ, ಹುಟ್ಟಿಸಿದ ಭರವಸೆ ಮತ್ತು ಸಾರಿದ ಐಕ್ಯತೆಯ ಸಂದೇಶದಿಂದ ಪ್ರೇರಣೆ ಪಡೆದ ಪ್ರಜಾಪ್ರಭುತ್ವದ ರಕ್ಷಣೆಯ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಟ್ವೀಟ್ ಮಾಡಿದ್ದಾರೆ.