ನವದೆಹಲಿ: ಪಂಚ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೇಳಲು ನಿರಾಕರಿಸಿರೋ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಉತ್ತರಪ್ರದೇಶದಲ್ಲಿ ಬಿಜೆಪಿಗೆ ಬಹುಮತ ಸಿಗುತ್ತದೆ ಎಂಬ ಸಮೀಕ್ಷಾ ವರದಿಯನ್ನು ತಳ್ಳಿಹಾಕಿದ್ದು, ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಮೈತ್ರಿಕೂಟವೇ ಗೆಲುವು ಸಾಧಿಸುತ್ತದೆ ಎಂದು ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ನಾವು ಗೆಲ್ಲುತ್ತೇವೆ. ಬಿಹಾರದ ಚುನಾವಣೋತ್ತರ ಸಮೀಕ್ಷೆಗಳು ತಪ್ಪಾಗಿದ್ದವು. ನಾವು ನಾಳೆ ಮಾತನಾಡುತ್ತೇವೆ. ಚುನಾವಣೋತ್ತರ ಸಮೀಕ್ಷೆಯ ಬಗ್ಗೆ ಯವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ ಎಂದು ರಾಹುಲ್ ಗಾಂಧಿ ರಾಷ್ಟ್ರೀಯ ಪತ್ರಿಕೆಯೊಂದಕ್ಕೆ ಹೇಳಿದ್ದಾರೆ.
Advertisement
ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಬಿಎಸ್‍ಪಿ ಜೊತೆ ಮೈತ್ರಿಗೆ ಎಸ್‍ಪಿ ಸಿದ್ಧ: ಅಖಿಲೇಶ್
ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರದಂದು ಹೊರಬೀಳಲಿದೆ.
Advertisement
ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆಯ ಅಂಕಿ-ಅಂಶಗಳು ಬಹಿರಂಗವಾಗಿವೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪಂಜಾಬ್‍ನಲ್ಲಿ ಆಪ್, ಗೋವಾ ಅತಂತ್ರ, ಉತ್ತರಾಖಂಡ್ ಮತ್ತು ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಅಂತ ಸಮೀಕ್ಷೆ ನಡೆಸಿರುವ ರಾಷ್ಟ್ರೀಯ ವಾಹಿನಿಗಳು, ಸುದ್ದಿ ಸಂಸ್ಥೆಗಳು ಹೇಳಿವೆ.
Advertisement
ಇದನ್ನೂ ಓದಿ: ನಾಲ್ಕು ರಾಜ್ಯಗಳಲ್ಲಿ ಮೋದಿ ಭರ್ಜರಿ ಕಮಾಲ್