ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಕೇರಳ ಪ್ರವಾಸ ರದ್ದುಗೊಳಿಸಿದ್ದಾರೆ.
ಮಂಗಳವಾರ (ಮಾ.24) ರಾತ್ರಿ ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದಾಗಿ ದೆಹಲಿಯ ಸರ್ ಗಂಗಾರಾಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ರಾಹುಲ್ ಗಾಂಧಿ ಅವರು ಕೇರಳದ ಕೋಝಿಕ್ಕೋಡ್ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಅವರ ಬದಲಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೆರಳಲಿದ್ದಾರೆ. ಇದನ್ನೂ ಓದಿ: 24 ಗಂಟೆ ಅಂತರದಲ್ಲಿ ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ – 16 ಆರ್‌ಡಿಎಕ್ಸ್ ಐಇಡಿ ಇರಿಸಲಾಗಿದೆ ಎಂದು ಮೇಲ್
ರಾಹುಲ್ ಗಾಂಧಿ ಅವರು ಇಂದು (ಮಾ.25) ಕೇರಳದ ಕೋಝಿಕ್ಕೋಡ್‌ಗೆ ತೆರಳಬೇಕಿತ್ತು. ಅಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಪಕ್ಷವು ಸಂಜೆ 4:30ರ ಸುಮಾರಿಗೆ ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಚಾರ ಹಮ್ಮಿಕೊಂಡಿದೆ. ಇದೀಗ ರಾಹುಲ್ ಗಾಂಧಿ ಬದಲಿಗೆ ಮಲ್ಲಿಕಾರ್ಜುನ್ ಖರ್ಗೆ ಅವರು ತೆರಳಲಿದ್ದಾರೆ.
ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ:
ಹವಾಮಾನ ಬದಲಾವಣೆಯಿಂದಾಗಿ ಸೋನಿಯಾ ಗಾಂಧಿ ಅವರಿಗೆ ಅಸ್ವಸ್ಥತೆ ಉಂಟಾಗಿದೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.

