ಲಕ್ನೋ: ರಾಹುಲ್ ಗಾಂಧಿ ಸ್ವಂತ ಮನೆಯನ್ನೇ ಸರಿಯಾಗಿ ಕಟ್ಟಿಕೊಳ್ಳಲಾಗ್ತಿಲ್ಲ ಎಂದು ಮಾಯಾವತಿ ವಾಗ್ದಾಳಿ ಮಾಡಿದ್ದಾರೆ.
ಬಿಜೆಪಿಗೆ ಮುಕ್ತ ಅವಕಾಶ ನೀಡಲು ಬಿಎಸ್‍ಪಿ ನಾಯಕಿ ಮಾಯಾವತಿ ನಮ್ಮ ಮೈತ್ರಿ ಪ್ರಸ್ತಾಪವನ್ನು ತಿರಸ್ಕರಿಸಿದ್ದರು ಎಂದಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಮಾಯಾವತಿ ತಿರುಗೇಟು ನೀಡಿದ್ದಾರೆ. ಅವರಿಗೆ ಸ್ವಂತ ಮನೆಯನ್ನೇ ಸರಿಯಾಗಿ ಕಟ್ಟಿಕೊಳ್ಳಲು ಆಗುತ್ತಿಲ್ಲ. ಬಿಎಸ್ ಪಿಯನ್ನು ದೂಷಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
Advertisement
ಮಾಯಾವತಿ ಹೇಳಿದ್ದೇನು?: ರಾಹುಲ್ ಗಾಂಧಿ ಹೇಳಿರುವುದು ಸುಳ್ಳು. ಇಂತಹ ಸಣ್ಣ ವಿಷಯಗಳ ಬದಲಾಗಿ ಯುಪಿ ಚುನಾವಣೆಯ ಸೋಲಿನ ಬಗ್ಗೆ ಗಮನ ಹರಿಸಬೇಕು. ಕಾಂಗ್ರೆಸ್ ಇಂತಹ ಟೀಕೆಗಳನ್ನು ಮಾಡುವ ಮೊದಲು 100 ಬಾರಿ ಯೋಚಿಸಬೇಕು. ಬಿಜೆಪಿ ಎದುರು ಗೆಲ್ಲಲು ಸಾಧ್ಯವಾಗಲಿಲ್ಲ. ಆದ್ದರಿಂದ ಇಂತಹ ಟೀಕೆ, ದೋಷರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೂ, ಇಲ್ಲದಿರುವಾಗಲೂ ಏನನ್ನೂ ಮಾಡಿಲ್ಲ ಎಂದು ಅವರು ಹೇಳಿದರು.
Advertisement
Advertisement
ವಿಧಾನಸಭೆ ಚುನಾವಣೆಯಲ್ಲಿ ನಾವು ಬಿಎಸ್ ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧರಿದ್ದೇವು. ಇದಕ್ಕಾಗಿ ಮಾಯಾವತಿ ಅವರನ್ನು ಸಿಎಂ ಆಗಿ ಮಾಡಲು ಪ್ರಸ್ತಾಪ ಮುಂದಿಟ್ಟಿದ್ದೆವು. ಬಿಜೆಪಿಗೆ ಮುಕ್ತ ಅವಕಾಶ ನೀಡಲು ಅವರು ನಮ್ಮ ಆಫರ್ ತಿರಸ್ಕರಿಸಿದ್ದರು. ಅವರಿಗೆ ಸಿಬಿಐ, ಇಡಿ, ಪೆಗಾಸಸ್ ಭಯವಿದ್ದುದರಿಂದ ನಮ್ಮ ಮನವಿಗೆ ಸ್ಪಂದಿಸಲೇ ಇಲ್ಲ ಎಂದಿದ್ದರು.
Advertisement
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಕೂಡಾ ತಮ್ಮ ಬಹುಜನ ಸಮಾಜ ಪಕ್ಷದ ಮಾನಹಾನಿಗೆ ಪ್ರಯತ್ನಿಸಿದರು. ಈಗ ಪ್ರಿಯಾಂಕಾ ಗಾಂಧಿ ಕೂಡಾ ಅದೇ ರೀತಿ ಮಾಡುತ್ತಿದ್ದಾರೆ. ನಾನು ಇಡಿ ಮತ್ತಿತರ ಸಂಸ್ಥೆಗಳಿಗೆ ಹೆದರುತ್ತೇನೆ. ಇದೆಲ್ಲವೂ ನಿಜವಲ್ಲ ಎಂದಿದ್ದಾರೆ.