ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ನಡೆದ ಸಂಸತ್ ರಾಷ್ಟ್ರಪತಿಗಳ ಭಾಷಣದ ವೇಳೆ ಮೊಬೈಲ್ ನಲ್ಲೇ ಬ್ಯುಸಿಯಾಗಿದ್ದ ದೃಶ್ಯ ಕಂಡು ಬಂದಿತ್ತು.
ಇಂದು ರಾಷ್ಟ್ರಪತಿಗಳು ಸುಮಾರು 1 ಗಂಟೆ ಅವಧಿಯ ಕಾಲ ಸಂಸತ್ ಉದ್ದೇಶಿಸಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಸುಮಾರು 23 ನಿಮಿಷಗಳ ಕಾಲ ಮೊಬೈಲ್ ನಲ್ಲೇ ಬ್ಯುಸಿಯಾಗಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.
Advertisement
Congress President @RahulGandhi caught engrossed on his mobile while President Kovind’s speech is underway. Does he have any respect for anyone at all? pic.twitter.com/FsvmqgDnpD
— Know The Nation (@knowthenation) June 20, 2019
Advertisement
ಭಾಷಣದ ವೇಳೆ ರಾಹುಲ್ ಗಾಂಧಿ ಅವರು ಮೊಬೈಲ್ ಬಳಕೆ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದ್ದು, ಈ ವೇಳೆ ಪಕ್ಕದಲ್ಲೇ ಕುಳಿತಿದ್ದ ಸೋನಿಯಾ ಗಾಂಧಿ ಕೂಡ ಇದನ್ನು ಗಮಿಸಿದ್ದಾರೆ. ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಕೇಂದ್ರ ಸರ್ಕಾರ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ 2.0 ಬಗ್ಗೆ ಉಲ್ಲೇಖಿಸಿ ಪ್ರಶಂಸೆ ವ್ಯಕ್ತಪಡಿಸಿದ್ದರು. ಈ ವೇಳೆ ಹಾಜರಾಗಿದ್ದ ಎಲ್ಲಾ ಸದಸ್ಯರು ಕೂಡ ಮೇಜು ತಟ್ಟುವ ಮೂಲಕ ಬೆಂಬಲ ನೀಡಿದರು. ಸೋನಿಯಾ ಗಾಂಧಿ ಅವರು ಕೂಡ ಪ್ರಶಂಸೆಗೆ ಮುಂದದಾಗ ರಾಹುಲ್ ಅಡ್ಡ ಪಡಿಸಿದ್ದಾರೆ ಎಂದು ಮಾಧ್ಯಮ ವರದಿಯಲ್ಲಿ ಉಲ್ಲೇಖಿಸಲಾಗಿದೆ.
Advertisement
Advertisement
ನಾಲ್ಕು ಬಾರಿ ಸಂಸತ್ ಸದಸ್ಯರಾಗಿ ಆಯ್ಕೆ ಆಗಿರುವ ರಾಹುಲ್ ಗಾಂಧಿ ಅವರು, ರಾಷ್ಟ್ರಪತಿಗಳ ಭಾಷಣದ ವೇಳೆಯೇ ಮೊಬೈಲ್‍ನಲ್ಲಿ ಬ್ಯುಸಿಯಾಗಿದ್ದು ಕಂಡು ಹಲವರು ಅಸಮಾದಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೊದಲ ಸಾಲಿನಲ್ಲೇ ಕುಳಿತ ಎಐಸಿಸಿ ಅಧ್ಯಕ್ಷರು ಆಗಿರುವ ರಾಹುಲ್ ನಡೆಗೆ ಆಕ್ಷೇಪ ವ್ಯಕ್ತವಾಗಿದೆ.
ಲೋಕಸಭಾ ಚುನಾವಣೆಯ ಬಳಿಕ ನಿರಾಸೆಗೊಂಡಿರುವ ರಾಹುಲ್ ಪಕ್ಷದ ಅಧ್ಯಕ್ಷ ಸ್ಥಾನ ತೊರೆಯುವ ನಿರ್ಧಾರ ಮಾಡಿದ್ದರು. ಅಲ್ಲದೇ ಪಕ್ಷದ ಹಿರಿಯ ನಾಯಕರು ರಾಹುಲ್ ಅವರ ಮನವೊಲಿಸಲು ಮುಂದಾಗಿದ್ದರು ಕೂಡ ಇದುವರೆಗೂ ಒಪ್ಪಿಗೆ ನೀಡಿಲ್ಲ ಎಂದಿದ್ದಾರೆ. ಅಲ್ಲದೇ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷವೇ ಆಯ್ಕೆ ಮಾಡಲಾಗುತ್ತದೆ ಎಂದು ರಾಹುಲ್ ಹೇಳಿಕೆ ನೀಡುವುದು ಅವರು ಅಧ್ಯಕ್ಷ ಸ್ಥಾನ ತೊರೆಯುವ ಸ್ಪಷ್ಟ ಸೂಚನೆ ಎನ್ನಲಾಗಿದೆ. ರಾಷ್ಟ್ರಪತಿಗಳ ಭಾಷಣವನ್ನು ಕೇಳಲು ಆಗದ ರಾಹುಲ್ ಅವರು ಮುಂದೇ ಹೇಗೆ ರಾಜಕೀಯ ಮುಂದುವರಿಸುತ್ತಾರೆ ಎಂಬ ಹೊಸ ಚರ್ಚೆ ಇದೇ ವೇಳೆ ಆರಂಭವಾಗಿದೆ.
Is Mr Rahul Gandhi on his phone while the President of India is addressing the parliament? pic.twitter.com/WVVlxgU56H
— Sudhir Chaudhary (@sudhirchaudhary) June 20, 2019
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]