ಹುಬ್ಬಳ್ಳಿ: ದೇಶದ ಯಾವುದೇ ರಾಜ್ಯದಲ್ಲಿ ಸ್ಪರ್ಧೆ ಮಾಡಿದರೂ, ನಾನು ಗೆಲ್ಲುವುದಿಲ್ಲವೆಂದು ತಿಳಿದ ಕಾಂಗ್ರೆಸ್‍ನ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಯವರು ರಾಜ್ಯದ ಬೀದರ್ ನಿಂದ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ರಾಹುಲ್ ಗಾಂಧಿ ರಾಜ್ಯದಿಂದ ಸ್ಪರ್ಧಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಕಾಂಗ್ರೆಸ್ ಮುಖಂಡರುಗಳು ರಾಹುಲ್ ಗಾಂಧಿಯವರನ್ನು ಕರ್ನಾಟಕ ರಾಜಕೀಯದಲ್ಲಿ ಮಾದರಿಯಂತೆ ಭಾವಿಸಿದ್ದಾರೆ. ಅಲ್ಲದೇ ರಾಹುಲ್ ಗಾಂಧಿಯವರಿಗೆ ನಾನು ದೇಶದ ಯಾವುದೇ ರಾಜ್ಯದಿಂದ ಸ್ಪರ್ಧಿಸಿದರು, ಸೋಲುವುದು ಖಚಿತ ಎಂಬುದು ಮನವರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಅವರು ಬೀದರ್ ನಿಂದ ಸ್ಪರ್ಧಿಸಲು ಮುಂದಾಗಿದ್ದಾರೆ. ಆದರೆ ಕರ್ನಾಟಕದ ಜನರು ಅವರನ್ನು ಖಂಡಿತವಾಗಿಯೂ ತಿರಸ್ಕರಿಸುತ್ತಾರೆ. ಅಲ್ಲದೇ ಕಾಂಗ್ರೆಸ್ ಸದ್ಯ ಮುಳುಗುತ್ತಿದೆ ಎಂದು ಅವರೇ ಹೇಳಿಕೆ ಕೊಟ್ಟಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ದಯನೀಯ ಸ್ಥಿತಿಯಲ್ಲಿದೆ ಎಂದು ವ್ಯಂಗ್ಯವಾಡಿದ್ದಾರೆ.
ಈ ವೇಳೆ ಮಾಜಿ ಪ್ರಧಾನಿ ದೇವೇಗೌಡರು ಲಿಂಗಾಯತ ಮುಖ್ಯಮಂತ್ರಿಗಳು ಏನೂ ಮಾಡಿದ್ದಾರೆಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಮೊದಲು ದೇವೇಗೌಡರು ಉತ್ತರ ಕರ್ನಾಟಕಕ್ಕೆ ಏನು ಮಾಡಿದ್ದಾರೆಂದು ಹೇಳಲಿ, ಈಗ ಅವರ ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಅವರು ಉತ್ತರ ಕರ್ನಾಟಕನ್ನೇ ಮರೆತಿದ್ದಾರೆ. ರಾಜ್ಯದ 13 ಜಿಲ್ಲೆಗಳಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ನೂತನ ತಾಲೂಕುಗಳಿಗೆ ಕೇವಲ ತಹಶೀಲ್ದಾರರ ನೇಮಕ ಬಿಟ್ಟು, ಬೇರೆ ಯಾವ ಕೆಲಸಗಳನ್ನು ಮಾಡಿದ್ದಾರೆ ಎಂದು ಗುಡುಗಿದರು.
ಮೋದಿಯವರು ಮಂಗಳೂರಿನಿಂದ ಸ್ಪರ್ಧೆ ಮಾಡುತ್ತಿದಾರೆ ಎನ್ನುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 100 ಕ್ಕೆ 60 ರಷ್ಟು ಸ್ಥಾನಗಳನ್ನ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv