Connect with us

ಜಯಶಾಲಿ ಪ್ರಧಾನಿ ಮೋದಿಗೆ ಶುಭ ಕೋರಿದ ರಾಹುಲ್ ಗಾಂಧಿ

ಜಯಶಾಲಿ ಪ್ರಧಾನಿ ಮೋದಿಗೆ ಶುಭ ಕೋರಿದ ರಾಹುಲ್ ಗಾಂಧಿ

ನವದೆಹಲಿ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಅವರ ಟ್ವೀಟ್‍ಗೆ ಪ್ರತಿಕ್ರಿಯಿಸಿದ ಮೋದಿ ಅವರು, “ಧನ್ಯವಾದಗಳು…ಪ್ರಜಾ ಪ್ರಭುತ್ವ ಚಿರಕಾಲ ಬಾಳಲಿ” ಎಂದು ಟ್ವೀಟ್ ಮಾಡಿದ್ದಾರೆ.

ಉತ್ತರಪ್ರದೇಶ ಹಾಗೂ ಉತ್ತರಾಖಂಡ್ ರಾಜ್ಯಗಳಲ್ಲಿ ಜಯಭೇರಿ ಸಾಧಿಸಿದ್ದಕ್ಕೆ ಶ್ರೀ ನರೇಂದ್ರ ಮೋದಿ ಅವರಿಗೂ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರಿಗೂ ಶುಭಾಶಯಗಳು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಪಂಜಾಬ್ ಮತ್ತು ಮಣಿಪುರ ರಾಜ್ಯಗಳಲ್ಲಿ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ ಪಂಜಾಬ್ ಹೊರತು ಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲು ಮುಂದಾಗಿದೆ.

2017 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಈ ಬಾರಿ ಹೀನಾಯ ಸೋಲು ಕಂಡಿದೆ. ಇನ್ನು ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ರಚಿಸಿದ್ದ ಮಹಾಮೈತ್ರಿ ವೈಫಲ್ಯ ಕಂಡಿದೆ.

 

 

Advertisement
Advertisement