ಚಿಕ್ಕಮಗಳೂರು: ತಲತಲಾಂತರದಿಂದ ಮೀಸಲಾತಿ ಮೂಲಕ ಏಳಿಗೆ ಕಂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯವು ಮೀಸಲಾತಿ ರದ್ದತಿ ಕುರಿತ ರಾಹುಲ್ ಗಾಂಧಿಯವರ (Rahul Gandhi) ಹೇಳಿಕೆಯಿಂದ ಗಾಬರಿಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ (Sunil Kumar) ತಿಳಿಸಿದರು.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದಿದ್ದರೆ ಮೀಸಲಾತಿಯನ್ನು ರದ್ದು ಮಾಡುತ್ತಿತ್ತೋ ಎಂಬಷ್ಟು ಆತಂಕ ನಿರ್ಮಾಣವಾಗಿದೆ. ಈ ಹೇಳಿಕೆಯನ್ನು ಖಂಡಿಸುತ್ತೇವೆ. ಮೀಸಲಾತಿಯನ್ನು ರದ್ದು ಮಾಡಲು ಬಿಜೆಪಿ (BJP) ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: ಶಿಮ್ಲಾದಲ್ಲಿ ಅಕ್ರಮ ಮಸೀದಿ ನಿರ್ಮಾಣ ವಿಚಾರ – ಸ್ಥಳೀಯರು, ಪೊಲೀಸರ ನಡುವೆ ಗಲಾಟೆ
Advertisement
Advertisement
ಮೀಸಲಾತಿಗೆ ನಾವು ಇವತ್ತು ಕೂಡ ಬದ್ಧರಿದ್ದೇವೆ. ಅದು ಮುಂದುವರೆಯಲಿದೆ. ರಾಹುಲ್ ಗಾಂಧಿಯವರ ಹೇಳಿಕೆಯನ್ನು ಈ ದೇಶದ ಜನರು ಸಮರ್ಥಿಸಲು ಸಾಧ್ಯವಿಲ್ಲ. ರಾಹುಲ್ ಅವರು ದೇಶದ ಜನರಿಗೆ ಕ್ಷಮೆಯಾಚಿಸಬೇಕು. ಕಾಂಗ್ರೆಸ್ ಮೀಸಲಾತಿ ವಿರೋಧಿ ಎಂಬ ವಿಷಯವನ್ನು ಇಟ್ಟುಕೊಂಡು ನಾಳೆಯಿಂದ ಇಡೀ ರಾಜ್ಯಾದ್ಯಂತ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆಯನ್ನು ಮಾಡಲು ಕರೆ ಕೊಡಲಾಗಿದೆ ಎಂದು ತಿಳಿಸಿದರು.
Advertisement
ರಾಹುಲ್ ಗಾಂಧಿಯವರು ಅಮೆರಿಕದಿಂದ ವಾಪಸ್ ಬರುವುದರ ಒಳಗೆ ಕಾಂಗ್ರೆಸ್ ಇದಕ್ಕೆ ಪಶ್ಚಾತ್ತಾಪದ ಹೇಳಿಕೆ ಬಿಡುಗಡೆ ಮಾಡಬೇಕು. ಮೀಸಲಾತಿಗೆ ಸಂಬಂಧಿಸಿ ಕಾಂಗ್ರೆಸ್ ಇಲ್ಲಿಯವರೆಗೆ ಕೇವಲ ಮೊಸಳೆ ಕಣ್ಣೀರನ್ನು ಸುರಿಸಿದೆ. ಸಂವಿಧಾನದ ಕುರಿತು ಕಾಂಗ್ರೆಸ್ ಕೇವಲ ಭಾಷಣ ಮಾಡಿದೆ. ಕೈಯಲ್ಲಿ ಸಂವಿಧಾನದ ಪುಸ್ತಕ ಮಾತ್ರ ಹಿಡಿದುಕೊಂಡಿದ್ದರು. ಆದರೆ ಮನಸ್ಸಿನಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಯನ್ನೇ ಮಾಡಿದ್ದಾರೆ ಎಂದು ಆಕ್ಷೇಪಿಸಿದ್ದಾರೆ.ಇದನ್ನೂ ಓದಿ: ಟಾಟಾ ನೆಕ್ಸಾನ್ EV ಬೆಲೆ 3 ಲಕ್ಷ ರೂಪಾಯಿ ಕಡಿತ