ಕಾಂಗ್ರೆಸ್‍ನ್ನು ನಿಂದಿಸಿ, ನಿಮ್ಮ ಕೆಲಸ ಏನೆಂದು ಮರೆಯಬೇಡಿ: ಮೋದಿಗೆ ರಾಹುಲ್ ಗಾಂಧಿ ತಿರುಗೇಟು

Public TV
1 Min Read
MODI RAHUL

ನವದೆಹಲಿ: ನಮ್ಮನ್ನು ಟೀಕಿಸಿ ಪರವಾಗಿಲ್ಲ, ನಿಮ್ಮ ಕೆಲಸ ಏನೆಂದು ಮರೆಯಬೇಡಿ ಎಂದು ಪ್ರಧಾನಿ ಮೋದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.

ರಾಜ್ಯಸಭೆಯಲ್ಲಿ ಇಂದು ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮೌನ ಮುರಿದಿದ್ದು, ಕಾಂಗ್ರೆಸ್ ಮತ್ತು ನೆಹರು ಅವರನ್ನು ನಿಂದಿಸಿ, ಪರವಾಗಿಲ್ಲ. ಆದರೆ ನಿಮ್ಮ ಕೆಲಸವೇನಿದೆಯೋ ಅದನ್ನು ಸರಿಯಾಗಿ ಮಾಡಿ ಎಂದು ಮೋದಿಗೆ ತಿರುಗೇಟು ನೀಡಿದ್ದಾರೆ.

narendra modi 2

ನನ್ನ ಪ್ರಶ್ನೆಗಳಿಗೆ ನರೇಂದ್ರ ಮೋದಿ ಕೊನೆಗೂ ಉತ್ತರಿಸಲಿಲ್ಲ. ನಾವು ಚೀನಾ ಮತ್ತು ಪಾಕಿಸ್ತಾನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ನನ್ನ ಮುತ್ತಜ್ಜ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ ಎಂಬುದು ನಮಗೆಲ್ಲರಿಗೂ ಗೊತ್ತಿರುವ ಸತ್ಯ. ಅದಕ್ಕೆ ನನಗೆ ಯಾರ ಪ್ರಮಾಣಪತ್ರವೂ ಬೇಕಾಗಿಲ್ಲ. ನಾವು ಸತ್ಯವನ್ನು ಹೇಳುವುದರಿಂದ ಬಿಜೆಪಿಗೆ ಕಾಂಗ್ರೆಸ್ ಕುರಿತು ಭಯವಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಮೋದಿ ಹೇಳಿದ್ದೇನು?: ಕಾಂಗ್ರೆಸ್ ಅಧಿಕಾರದಲ್ಲಿ ಇರದಿದ್ದರೆ ತರ್ತು ಪರಿಸ್ಥಿತಿ, ಕುಟುಂಬ ರಾಜಕಾರಣ, ಸಿಖ್ ದಂಗೆ, ಕಾಶ್ಮೀರಿ ಪಂಡಿತರ ವಲಸೆ ಆಗುತ್ತಿರಲಿಲ್ಲ. ಕಾಂಗ್ರೆಸ್‍ಗೆ ವಂಶಾಡಳಿತದ ರಾಜಕೀಯವನ್ನು ಮೀರಿ ಯೋಚಿಸಲು ಸಾಧ್ಯವಾಗಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು.

pm modi lok sabha

ಇತಿಹಾಸವನ್ನು ಬದಲಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ನಕ್ಸಲ್ ಬಲೆಗೆ ಸಿಲುಕಿದೆ. ನಗರ ನಕ್ಸಲರು ಅವರ ಸಂಪೂರ್ಣ ಆಲೋಚನಾ ವಿಧಾನವನ್ನು ಸೆರೆಹಿಡಿದಿದ್ದಾರೆ. ನಗರ ನಕ್ಸಲರು ಅವರ ದುಃಸ್ಥಿತಿಯ ಲಾಭವನ್ನು ಪಡೆದುಕೊಂಡಿದ್ದಾರೆ. ಭಾರತದ ಉಜ್ವಲ ಭವಿಷ್ಯದಲ್ಲಿ ನಂಬಿಕೆ ಇಡುವಂತೆ ನಾನು ಎಲ್ಲರನ್ನು ವಿನಂತಿಸುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *