Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಜೀ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಗುಂಡಿಗೆ ಹೆದರದ ಕಾಂಗ್ರೆಸ್ ನಿಮ್ಮ ಸರ್ಕಾರಕ್ಕೆ ಹೆದರುತ್ತಾ?: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೋದಿಜೀ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಗುಂಡಿಗೆ ಹೆದರದ ಕಾಂಗ್ರೆಸ್ ನಿಮ್ಮ ಸರ್ಕಾರಕ್ಕೆ ಹೆದರುತ್ತಾ?: ಸಿದ್ದರಾಮಯ್ಯ

Bengaluru City

ಮೋದಿಜೀ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಗುಂಡಿಗೆ ಹೆದರದ ಕಾಂಗ್ರೆಸ್ ನಿಮ್ಮ ಸರ್ಕಾರಕ್ಕೆ ಹೆದರುತ್ತಾ?: ಸಿದ್ದರಾಮಯ್ಯ

Public TV
Last updated: June 13, 2022 3:50 pm
Public TV
Share
4 Min Read
CONGRESS PROTEST
SHARE

ನಾ ಖಾವೂಂಗಾ, ನಾ ಖಾನೆದೂಂಗ ಅನ್ನೋದು ಬರೀ ಸುಳ್ಳು

ಬೆಂಗಳೂರು: ಇಡಿ ಮೂಲಕ ಕಾಂಗ್ರೆಸ್ ನಾಯಕರನ್ನು ಹೆದರಿಸಬಹುದು ಎಂದುಕೊಂಡಿದ್ದರೆ ಅದು ಸಾಧ್ಯವಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಗುಂಡಿಗೆ, ಲಾಠಿ ಏಟಿಗೆ ಹೆದರದ ಕಾಂಗ್ರೆಸ್ ಕಾರ್ಯಕರ್ತರು ನಿಮ್ಮ ಸರ್ಕಾರಕ್ಕೆ ಹೆದರುತ್ತಾರ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

CONGRESS PROTEST 2

ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇ.ಡಿ ನೋಟಿಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿಯ ದ್ವೇಷ ರಾಜಕಾರಣ ಖಂಡಿಸಿ ಕೆಪಿಸಿಸಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಸರ್ಕಾರದ ಎಲ್ಲ ಸ್ವತಂತ್ರ ಸಂಸ್ಥೆಗಳನ್ನು ಅವರ ಕೈಗೊಂಬೆಗಳಾಗಿ ಮಾಡಿಕೊಳ್ಳುತ್ತಿದ್ದಾರೆ. ಅದು ರಿಸರ್ವ್ ಬ್ಯಾಂಕ್, ಸಿಎಜಿ, ಸಿಬಿಐ, ಇ.ಡಿ, ಎನ್‍ಎಸ್‍ಎಸ್‍ಒ ಇವು ಯಾವುದೇ ಇರಬಹುದು. ಈ ಎಲ್ಲಾ ಸಂಸ್ಥೆಗಳು ತಮ್ಮ ತಾಳಕ್ಕೆ ತಕ್ಕಂತೆ ಕುಣಿಯುವಂತೆ ಮಾಡಿಕೊಂಡಿದ್ದಾರೆ. ಇ.ಡಿ ಹಾಗೂ ಆದಾಯ ತೆರಿಗೆ ಇಲಾಖೆಗಳನ್ನು ವಿರೋಧ ಪಕ್ಷದವರ ಮೇಲೆ ಛೂ ಬಿಡುವ ಕೆಲಸ ಮಾಡುತ್ತಿದ್ದಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವತ್ತೂ ಕೂಡ ಸ್ವಾಯತ್ತ ಸಂಸ್ಥೆಗಳನ್ನು ಈ ರೀತಿ ದುರುಪಯೋಗ ಮಾಡಿಕೊಂಡ ಉದಾಹರಣೆಗಳಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಅಂಗಿ ಹರಿದ ಪೊಲೀಸರು: ಪ್ರತಿಭಟನೆ ವೇಳೆ ವೇಣುಗೋಪಾಲ್ ಅಸ್ವಸ್ಥ

modi

ಇಡಿ, ಸಿಬಿಐ, ಐಟಿ ಈ ಎಲ್ಲಾ ಸಂಸ್ಥೆಗಳು ಮೋದಿ ಅವರಿಗೆ ವಿರುದ್ಧವಾಗಿರುವವರ ಮೇಲೆ ದಾಳಿ ಮಾಡಬೇಕು, ಅವರ ಮೇಲೆ ಮೊಕದ್ದಮೆಗಳನ್ನು ಹಾಕಬೇಕಿದೆ. ಇಂದು ದೇಶದ ಪ್ರಗತಿಯ ಅಂಕಿ ಅಂಶಗಳು ಯಾರಿಗೂ ಸಿಗಬಾರದು ಎಂದು ಎನ್‍ಎಸ್‍ಎಸ್‍ ಅನ್ನು ನಿಷ್ಕ್ರಿಯಗೊಳಿಸಿದ್ದಾರೆ. ಯೋಜನಾ ಆಯೋಗವನ್ನು ತೆಗೆದು ಹಾಕಿ ತಮಗೆ ಬೇಕಾದಂತೆ ಕುಣಿಯುವ ನೀತಿ ಆಯೋಗವನ್ನು ರಚನೆ ಮಾಡಿದ್ದಾರೆ. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಸಂವಿಧಾನದ ಎಲ್ಲ ಸಂಸ್ಥೆಗಳನ್ನು ತಮ್ಮ ಕೈಗೊಂಬೆ ಮಾಡಿಕೊಂಡು, ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ED ವಿಚಾರಣೆಗೆ ರಾಹುಲ್ ಹಾಜರ್‌ – ಪಾದಯಾತ್ರೆ ಮೂಲಕ ಕಾರ್ಯಕರ್ತರಿಂದ ಬೆಂಬಲ

ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಮೇಲೆ ಇಡಿ ಯನ್ನು ಛೂ ಬಿಟ್ಟು, ಅದರ ಮೂಲಕ ಸಮನ್ಸ್ ನೀಡಿ, ಸುಳ್ಳು ಮೊಕದ್ದಮೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಅವರನ್ನು ಹೆದರಿಸುವ ಕೆಲಸವನ್ನು ಮೋದಿ ಅವರು ಮಾಡುತ್ತಿದ್ದಾರೆ. ಇದಕ್ಕಾಗಿ ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ, ಈ ಪ್ರತಿಭಟನೆ ನಮ್ಮ ನಾಯಕರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಲು ಮಾಡುತ್ತಿರುವುದು. ಕಾನೂನನ್ನು ತಮಗೆ ಬೇಕಾದಂತೆ ಬಳಕೆ ಮಾಡಲು ಬರಲ್ಲ. ನ್ಯಾಯ ಎಲ್ಲರಿಗೂ ಒಂದೇ ಆಗಿರಬೇಕು ಎಂದರು.

soniya gandhi

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ದೇಶದ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹಚ್ಚಲು ಹುಟ್ಟಿಕೊಂಡ ಪತ್ರಿಕೆ. 1925ರಲ್ಲಿ ಆರಂಭವಾದ ಆರ್‍ಎಸ್‍ಎಸ್‍ನ ಹೆಡಗೆವಾರ್, ಗೋಲ್ವಾಲ್ಕರ್ ಅವರು ಯಾವತ್ತಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರ? ನಿಮಗೆ ಯಾವ ನೈತಿಕತೆ ಇದೆ? 1942ರ ಕ್ವಿಟ್ ಇಂಡಿಯಾ ಚಳವಳಿ ಸಂದರ್ಭದಲ್ಲಿ ಆರ್‌ಎಸ್‌ಎಸ್‌ನ ಗೋಲ್ವಾಲ್ಕರ್ ಹಾಗೂ ಇತರೆ ನಾಯಕರು ಬ್ರಿಟಿಷರ ಜೊತೆ ಸೇರಿ ಸಂಚು ಮಾಡಿ ಕ್ವಿಟ್ ಇಂಡಿಯಾ ಚಳವಳಿಯನ್ನು ಹತ್ತಿಕ್ಕಲು ಪ್ರಯತ್ನ ಮಾಡಿದ್ದರು. ದೇಶಕ್ಕೆ ಸ್ವತಂತ್ರ ತಂದು ಕೊಡಲು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಜೊತೆಯಾಗಿ ಕಾಂಗ್ರೆಸ್‍ನ ಅನೇಕ ನಾಯಕರು ತ್ಯಾಗ, ಬಲಿದಾನ ಮಾಡಿದ್ದಾರೆ. ಬಿಜೆಪಿಗೆ ತ್ಯಾಗದ ಅರ್ಥ ಗೊತ್ತಾ? ಬಿಜೆಪಿ, ಆರ್‌ಎಸ್‌ಎಸ್‌ ನೀವು ಎಂದಾದರೂ ತ್ಯಾಗ ಮಾಡಿದ್ದೀರ? ನೀವು ನಮಗೆ ದೇಶಭಕ್ತಿ ಹೇಳಿಕೊಡಲು ಬರ್ತೀರ? ನಿಮಗೆ ನಾಚಿಕೆಯಾಗಲ್ವ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿಧು ಮೂಸೆವಾಲಾ ಹತ್ಯೆ ಪ್ರಕರಣ – ಸಂತೋಷ್ ಜಾಧವ್ ಅರೆಸ್ಟ್

ನರೇಂದ್ರ ಮೋದಿ ಅವರಿಗೆ ರಾಜ್ಯದ ಗುತ್ತಿಗೆದಾರರ ಸಂಘದವರು ಬಿಜೆಪಿ ಸರ್ಕಾರ 40% ಕಮಿಷನ್ ಕೇಳುತ್ತಿದೆ ಎಂದು ಪತ್ರ ಬರೆದಿದ್ದರು, ಈ ಭ್ರಷ್ಟರ ಮೇಲೆ ಇ.ಡಿ ಛೂ ಬಿಟ್ಟಿದ್ದೀರ ಮೋದಿಜೀ? ಯಾರ ಮೇಲಾದರೂ ಕೇಸ್ ಹಾಕಿದ್ದೀರ? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೇನು ಲೂಟಿ ಹೊಡೆದಿದ್ದಾರ? ಮೋದಿ ಅವರು ನಾ ಖಾವೂಂಗಾ, ನಾ ಖಾನೆದೂಂಗ ಅನ್ನೋದು ಬರೀ ಸುಳ್ಳು. ದೇಶದ ಸ್ವಾತಂತ್ರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಟ್ರಸ್ಟಿಗಳ ಮೇಲೆ ಇ.ಡಿ ಛೂ ಬಿಟ್ಟಿದೀರಲ್ಲವೇ ನಾಚಿಕೆಯಾಗಲ್ವ ನಿಮಗೆ ಎಂದು ಪ್ರಶ್ನಿಸಿದರು.

CONGRESS PROTEST 1

ಇಂದು ಸಾಂಕೇತಿಕವಾಗಿ ಮುಷ್ಕರ ಆರಂಭವಾಗಿದೆ. ಕಾಂಗ್ರೆಸ್‍ನ ಕೋಟ್ಯಂತರ ಕಾರ್ಯಕರ್ತರು ಬೀದಿಗೆ ಇಳಿದು ಸರ್ಕಾರ ನಡೆಯದಂತೆ ಹೋರಾಟ ಮಾಡುತ್ತಾರೆ. ಎಲ್ಲ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಬೇಕಾಗುತ್ತದೆ. ಇಂದು ಇಡಿ ಮುತ್ತಿಗೆ ಹಾಕುತ್ತಿದ್ದೇವೆ, ಈ ಹೋರಾಟ ನಿರಂತರವಾಗಿ ನಡೆಯುತ್ತದೆ. ಈಗಾಗಲೇ ಅನೇಕ ಜನರ ಮೇಲೆ ಇ.ಡಿ ದಾಳಿ ಮಾಡಿಸಿದ್ದಾರೆ ಮತ್ತು ಇನ್ನೂ ಯಾರ ಮೇಲೆ ದಾಳಿಗೆ ಬಿಡೋದು ಎಂದು ಹುಡುಕುತ್ತಾ ಇದ್ದಾರೆ. ನಮಗೆ ಸಂವಿಧಾನ, ಸುಪ್ರೀಂಕೋರ್ಟ್, ಹೈಕೋರ್ಟ್ ಇದೆ. ಅಲ್ಲಿ ನ್ಯಾಯ ಕೇಳುತ್ತೇವೆ. ನರೇಂದ್ರ ಮೋದಿ ಅವರೇ ಕಾಂಗ್ರೆಸ್‍ನವರನ್ನು ಹೆದರಿಸುವ ಹುಚ್ಚು ಸಾಹಸ ಬಿಡಿ. ಇಲ್ಲದಿದ್ದರೆ ನಿಮಗೆ ಕಾಂಗ್ರೆಸ್ ಕಾರ್ಯಕರ್ತರು ತಕ್ಕ ಶಾಸ್ತಿ ಮಾಡುತ್ತಾರೆ ಎಂಬ ಎಚ್ಚರಿಕೆ ನೀಡಲು ಬಯಸುತ್ತೇನೆ. ದೇಶದ ಆರ್ಥಿಕತೆ ಪಾತಾಳಕ್ಕಿಳಿದಿದೆ, ಭ್ರಷ್ಟಾಚಾರ ಮುಗಿಲು ಮುಟ್ಟಿದೆ, ಇದನ್ನು ಮುಚ್ಚಿಡಲು ಇ.ಡಿ ಮುಂದೆಬಿಟ್ಟು ನಮ್ಮನ್ನು ಬೆದರಿಸುತ್ತೀರ ಮೋದಿ ಅವರೇ? ನೀವು ಶಾಶ್ವತವಾಗಿ ಅಧಿಕಾರದಲ್ಲಿ ಗೂಟ ಹೊಡೆದುಕೊಂಡ ಕೂರಲು ಆಗಲ್ಲ. ಇದಕ್ಕೆ ಅವಕಾಶವನ್ನು ನಾವು ಕೊಡಲ್ಲ. ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದು ದೇಶದ ಕಾನೂನು, ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತದೆ ಎಂದರು.

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಒಬ್ಬಂಟಿಗರಲ್ಲ, ಅವರ ಜೊತೆ ಪಕ್ಷದ ಕೋಟ್ಯಂತರ ಕಾರ್ಯಕರ್ತರು ಇದ್ದಾರೆ. ಎಲ್ಲರ ಹಕ್ಕುಗಳನ್ನು ಕಿತ್ತುಕೊಳ್ಳಲು ಅಥವಾ ಹತ್ತಿಕ್ಕಲು ನಿಮ್ಮಿಂದ ಸಾಧ್ಯವಿಲ್ಲ. ನರೇಂದ್ರ ಮೋದಿ ಅವರೇ, ನಿಮ್ಮ ಸಂವಿಧಾನ ವಿರೋಧಿ ನಡೆಯನ್ನು ಬಿಡಿ. 2015ರಲ್ಲಿ ಮುಕ್ತಾಯವಾದ ಕೇಸಿಗೆ ಮರು ಚಾಲನೆ ನೀಡಿದ ನಿಮ್ಮ ದ್ವೇಷ ರಾಜಕಾರಣಕ್ಕೆ ನಮ್ಮ ಧಿಕ್ಕಾರವಿದೆ. ನಾವೆಲ್ಲ ಕಲ್ಲು ಬಂಡೆಗಳಂತೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಜೊತೆ ನಿಲ್ಲೋಣ. ಈ ಅನ್ಯಾಯವನ್ನು ಖಂಡಿಸೋಣ ಎಂದು ಕರೆ ನೀಡಿದರು.

TAGGED:congressdelhiEDnational heraldRahul Gandhisiddaramaiahಕಾಂಗ್ರೆಸ್ನರೇಂದ್ರ ಮೋದಿರಾಹುಲ್ ಗಾಂಧಿಸಿದ್ದರಾಮಯ್ಯಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
17 minutes ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
50 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
58 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
60 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
1 hour ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?