LatestLeading NewsMain PostNational

ಪ್ರತಿಭಟನೆ ವೇಳೆ ತಳ್ಳಿದ ಪೊಲೀಸರು – ಮೂಳೆ ಮುರಿತಕ್ಕೊಳಗಾದ ಪಿ.ಚಿದಂಬರಂ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇ.ಡಿ ವಿಚಾರಣೆ ಒಳಪಡಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆ ವೇಳೆ ಪೊಲೀಸರು ಕಾಂಗ್ರೆಸ್ ನಾಯಕ ಪಿ.ಚಿದಂಬರಂರನ್ನು ತಳ್ಳಿದ ವೇಳೆ‌ ಎಡ ಪಕ್ಕೆಲುಬು ಮುರಿತಕ್ಕೊಳಗಾಗಿದ್ದಾರೆ ಎಂದು ಪಕ್ಷದ ವಕ್ತಾರ ರಣ್‍ದೀಪ್ ಸುರ್ಜೇವಾಲಾ ದೂರಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇ.ಡಿ ಮುಂದೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು. ಎಐಸಿಸಿ ಕಚೇರಿಯಿಂದ ಇ.ಡಿ ಕಚೇರಿವರೆಗೂ ಪಾದಯಾತ್ರೆ ಮೂಲಕ ರಾಹುಲ್ ಗಾಂಧಿ ಇ.ಡಿ ಕಚೇರಿಗೆ ಆಗಮಿಸಿದರು. ಈ ವೇಳೆ ಪ್ರಿಯಾಂಕಾ ವಾದ್ರಾ, ಕೆ.ಸಿ ವೇಣುಗೋಪಾಲ್, ಅಶೋಕ್ ಗೆಹ್ಲೋಟ್, ಪಿ.ಚಿದಂಬಂರಂ, ಸುರ್ಜೇವಾಲಾ, ಡಿ.ಕೆ ಸುರೇಶ್ ಅವರಿಗೆ ಸಾಥ್ ನೀಡಿದರು. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದರು. ನಂತರ ಕೆ.ಸಿ ವೇಣುಗೋಲಾಲ್, ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಇ.ಡಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಕಾಂಗ್ರೆಸ್ ಮುಖಂಡರ ನಡುವೆ ವಾಗ್ಯುದ್ಧ, ನೂಕಾಟ ತಳ್ಳಾಟ ನಡೆಯಿತು. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ರಾಹುಲ್ ಗಾಂಧಿಗೆ ಸಂಕಷ್ಟ – ಇಂದು 2 ಹಂತಗಳಲ್ಲಿ ಇ.ಡಿ ಡ್ರಿಲ್

ಈ ವೇಳೆ ಇಡಿ ಕಚೇರಿ ಬಳಿ ಬಂದಿದ್ದ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್ ಮತ್ತು ಡಿ.ಕೆ.ಸುರೇಶ್ ಮತ್ತಿತರನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಈ ವೇಳೆ ಪೊಲೀಸರು ವೇಣುಗೋಪಾಲ್ ಅವರ ಅಂಗಿಯನ್ನು ಹರಿದಿದ್ದು, ಅವರು ಅಸ್ವಸ್ಥರಾದ ಪ್ರಸಂಗವೂ ನಡೆದಿತ್ತು. ಇದನ್ನೂ ಓದಿ: ಪೊಲೀಸರನ್ನು ನೋಡುತ್ತಲೇ ಎದ್ನೋ ಬಿದ್ನೋ ಓಟಕ್ಕಿತ್ತ ಶ್ರೀನಿವಾಸ್ ಬಿವಿ

Leave a Reply

Your email address will not be published.

Back to top button