– ನಾಗರಿಕ ವಿಮಾನಯಾನ ನಿರ್ದೇಶನಾಲಯದಿಂದ ಸ್ಫೋಟಕ ಮಾಹಿತಿ
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಬ್ಬಳ್ಳಿಗೆ ಬಂದಿದ್ದಾಗ ವಿಮಾನ ಅವಘಡ ಸಂಭವಿಸಿದ್ದು, 20 ಸೆಕೆಂಡ್ ತಡವಾಗುತ್ತಿದ್ದರೂ ಅವರ ಜೀವವೇ ಹೋಗುತ್ತಿತ್ತು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದಿಂದ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.
ಏಪ್ರಿಲ್ 26ರಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ ಹುಬ್ಬಳ್ಳಿಗೆ ಬಂದಿದ್ದರು. ಅಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. 20 ಸೆಕೆಂಡ್ ತಡವಾಗಿದ್ದರೂ ರಾಹುಲ್ ಹೋಗುತ್ತಿದ್ದ ವಿಮಾನ ನೆಲಕ್ಕಪ್ಪಳಿಸಿ ಸ್ಫೋಟಗೊಳ್ಳುತ್ತಿತ್ತು. ಆದರೆ ಅದೃಷ್ಟವಶಾತ್ ರಾಹುಲ್ ಗಾಂಧಿ ಅವರು ಕೂದಲೆಳೆ ಅಂತರದಲ್ಲಿ ಭಾರೀ ದುರಂತದಿಂದ ಪಾರಾಗಿದ್ದಾರೆ ಎಂದು ನಿರ್ದೇಶನಾಲಯ ತಿಳಿಸಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಹುಬ್ಬಳ್ಳಿಗೆ ಬಂದಾಗ ನಿಜವಾಗಿಯೂ ಆಗಿದ್ದೇನು?
Advertisement
Advertisement
ರಾಹುಲ್ ಗಾಂಧಿ ಪ್ರಯಾಣ ಮಾಡುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದ್ದಕಿದ್ದಂತೆ ವಿಮಾನ ಒಂದು ಬದಿಗೆ ವಾಲಿತ್ತು. ಇದರಿಂದ 8 ಸಾವಿರ ಅಡಿಯಿಂದಲೇ ವಿಮಾನ ನೆಲಕ್ಕಪ್ಪಳಿಸುವ ಸಾಧ್ಯತೆ ಇತ್ತು. ಈ ವೇಳೆ ವಿಮಾನ ಆಟೋ ಪೈಲಟ್ ಮೂಡ್‍ನಲ್ಲಿತ್ತು. ತಾಂತ್ರಿಕ ದೋಷವನ್ನು 20 ಸೆಕೆಂಡ್‍ನಲ್ಲಿ ಮ್ಯಾನುವಲ್ ಆಗಿ ಸರಿ ಮಾಡಬೇಕಿತ್ತು. ಈ ಹಿನ್ನೆಲೆಯಲ್ಲಿ ಪೈಲಟ್ ತುರ್ತಾಗಿ ವಿಮಾನವನ್ನು ಲ್ಯಾಂಡ್ ಮಾಡಿದ್ದರು. ಒಂದು ವೇಳೆ 20 ಸೆಕೆಂಡಿನಲ್ಲಿ ತಾಂತ್ರಿಕ ದೋಷ ಸರಿ ಹೋಗದೇ ಇದ್ದರೆ ವಿಮಾನ ಪತನ ಆಗುತ್ತಿತ್ತು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
Advertisement
Advertisement
ಅಂದು ನಡೆದಿದ್ದೇನು?
ಏಪ್ರಿಲ್ 26ರಂದು ಕರ್ನಾಟಕ ವಿಧಾನಸಭೆಯ ಪ್ರಚಾರಕ್ಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಬ್ಬಳ್ಳಿಗೆ ಆಗಮಿಸಿದ್ದರು. ರಾಹುಲ್ ಗಾಂಧಿ ಅವರು ವಿಶೇಷ ವಿಮಾನದಲ್ಲಿ ದೆಹಲಿಯಿಂದ ಹುಬ್ಬಳ್ಳಿಗೆ ಹೊರಟಿದ್ದರು. ಆದರೆ ವಿಮಾನದ ಲ್ಯಾಂಡಿಂಗ್ ವೇಳೆ ಸಮಸ್ಯೆ ಕಾಣಿಸಿಕೊಂಡಿತ್ತು. ವಿಮಾನ ದಿಢೀರನೇ ಎಡಭಾಗಕ್ಕೆ ವಾಲಿತ್ತು. ವೇಗವಾಗಿ 8 ಸಾವಿರ ಅಡಿಯಿಂದಲೇ ಆಗಸದಿಂದ ಕೆಳಗಿಳಿಯುತ್ತಿರುವಂತೆ ತೊಂದರೆ ಉಂಟಾಗಿತ್ತು.
ಈ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ವಿಮಾನ ಹಠಾತ್ತನೇ 8 ಸಾವಿರ ಅಡಿ ಕೆಳಗೆ ಕುಸಿದಾಗ ಎಲ್ಲಾ ಮುಗಿದು ಹೋಯ್ತು ಅಂದುಕೊಂಡೆ. ಆ ಕ್ಷಣದಲ್ಲೇ ಕೈಲಾಸ ಮತ್ತು ಮಾನಸ ಸರೋವರ ಯಾತ್ರೆಗೆ ನಿರ್ಧರಿಸಿದ್ದೆ. ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದ ಮೇಲೆ ಯಾತ್ರೆ ಹೋಗುತ್ತೀನಿ ಎಂದು ಅನುಮತಿ ಕೊಡಿ ಅಂತಾ ಕೇಳಿಕೊಂಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv