ನವದೆಹಲಿ: ನಾಯಿ ತಿನ್ನದ ಬಿಸ್ಕತ್ತನ್ನು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ತನ್ನ ಕಾರ್ಯಕರ್ತನಿಗೆ ನೀಡಿರುವ ವೀಡಿಯೋ ಸಮಾಜಕ ಜಾಲತಾಣಗಳಲ್ಲಿ (Social Media) ವೈರಲ್ ಆಗಿದ್ದು ಭಾರೀ ಟೀಕೆಗೆ ಗುರಿಯಾಗಿದೆ.
अभी कुछ दिन पहले कांग्रेस अध्यक्ष खड़गे जी ने पार्टी के बूथ एजेंटों की तुलना कुत्तों से की और यहाँ राहुल गांधी अपनी यात्रा में एक कुत्ते को बिस्किट खिला रहे हैं और जब कुत्ते ने नहीं खाया तो वही बिस्किट उन्होंने अपने कार्यकर्ता को दे दिया।
जिस पार्टी का अध्यक्ष और युवराज अपने… pic.twitter.com/70Mn2TEHrx
— Amit Malviya (@amitmalviya) February 5, 2024
Advertisement
ಭಾರತ ಜೋಡೋ ನ್ಯಾಯ ಯಾತ್ರೆ (Bharth Jodo Nyay yatra) ಸಂದರ್ಭದಲ್ಲಿ ರಾಹುಲ್ ಗಾಂಧಿ ನಾಯಿಗೆ (Dog) ಬಿಸ್ಕತ್ತನ್ನು (Biscuit )ನೀಡಿದ್ದಾರೆ. ಆದರೆ ನಾಯಿ ತಿನ್ನಲು ನಿರಾಕರಿಸಿದೆ. ಅದೇ ಸಮಯದಲ್ಲಿ ಅವರನ್ನು ಮಾತನಾಡಿಸಲು ಪಕ್ಷದ ಕಾರ್ಯಕರ್ತರು ಬಂದಿದ್ದಾರೆ. ಆಗ ನಾಯಿಗೆ ಹಾಕಿದ ಬಿಸ್ಕತ್ತಲ್ಲೇ ಒಂದು ಬಿಸ್ಕತ್ತನ್ನು ತೆಗೆದು ಕಾರ್ಯಕರ್ತನಿಗೆ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಟೀಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಕೇಂದ್ರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿದರೆ 10 ವರ್ಷ ಜೈಲು, 1 ಕೋಟಿ ದಂಡ – ಮಸೂದೆ ಮಂಡನೆ
Advertisement
Advertisement
ಘಟನೆ ಕುರಿತು ಬಿಜೆಪಿ ನಾಯಕಿ ಪಲ್ಲವಿ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತನಿಗೆ, ನಾಯಿ ತಿರಸ್ಕರಿಸಿದ ಬಿಸ್ಕತ್ತನ್ನು ನೀಡಿದ್ದಾರೆ. ಇದು ಅವರ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮತ್ತು ಮತದಾರರಿಗೆ ನೀಡುವ ಗೌರವವೇ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಪೇಟಿಎಂ ವ್ಯಾಲೆಟ್ ಸೇವೆ ಖರೀದಿ ಮಾತುಕತೆ ನಡೆದಿಲ್ಲ – ಜಿಯೋ ಫೈನಾನ್ಸ್ ಅಧಿಕೃತ ಹೇಳಿಕೆ
Advertisement
ಬಿಜೆಪಿ ಐಟಿ ಸೆಲ್‌ನ ಅಮಿತ್ ಮಾಳವೀಯ ಅವರು ಸಹ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೂತ್ ಏಜೆಂಟರನ್ನು ನಾಯಿಗಳಿಗೆ ಹೋಲಿಸಿದ್ದರು. ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಅಧ್ಯಕ್ಷರು ಕಾರ್ಯಕರ್ತನನ್ನು ನಾಯಿಯಂತೆ ನಡೆಸಿಕೊಂಡರೆ ಅಂತಹ ಪಕ್ಷವು ಕಣ್ಮರೆಯಾಗುವುದು ಪಕ್ಕಾ ಎಂದು ಮಾಳವೀಯ ಬರೆದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಸನ್ನು ಕಾಲೆಳೆದಿದ್ದಾರೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ 10 ಸಾವಿರ ದಂಡ – ಹೈಕೋರ್ಟ್ ಆದೇಶ