ಬೆಂಗಳೂರು: ಸೋಮವಾರ ರಾಜ್ಯಕ್ಕೆ ಭೇಟಿ ನೀಡಿದ್ದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಹೊಸ ಜವಾಬ್ದಾರಿಯನ್ನು ನೀಡಿದ್ದಾರೆ. ಬೆಂಗಳೂರಿನ ಕಾರ್ಯಕ್ರಮ ಮುಗಿಸಿಕೊಂಡು ಹೊರಡುವ ಮುನ್ನ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯನವರ ಕೈ ಹಿಡಿದು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ಮೈತ್ರಿಯಲ್ಲಿ ಅಪಸ್ವರ ಬರದಂತೆ ನೋಡಿಕೊಳ್ಳಿ ಎಂದು ಹೇಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತುಮಕೂರು ವಿಚಾರವಾಗಿ ಹೆಚ್ಚಿನ ಚರ್ಚೆ ಮಾಡೋದು ಬೇಡ. ಅಭ್ಯರ್ಥಿಗಳ ಘೋಷಣೆ ಬಳಿಕ ಅಸಮಾಧಾನಿತರನ್ನು ನೀವೇ ಸಂಭಾಳಿಸಬೇಕು. ಮೈತ್ರಿ ಅಭ್ಯರ್ಥಿಗಳ ಪರವಾಗಿ ಒಗ್ಗೂಡಿ ಕೆಲಸ ಮಾಡಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
Advertisement
ಡಿಸಿಎಂ ಪರಮೇಶ್ವರ್ ಸಮ್ಮುಖದಲ್ಲಿಯೇ ರಾಹುಲ್ ಗಾಂಧಿ, ಸಿದ್ದರಾಮಯ್ಯರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯನವರೇ ಪವರ್ ಫುಲ್ ಅನ್ನೋದು ಮತ್ತೆ ಸಾಬೀತಾಗುತ್ತಿದೆ.