ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ (Amit Shah) ವಿರುದ್ಧ 2018ರಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ (Supreme Court) ಸೋಮವಾರ ತಡೆ ನೀಡಿದೆ.
ಇದೇ ವೇಳೆ, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಗಾಂಧಿ ಸಲ್ಲಿಸಿದ ಮನವಿ ಸಂಬಂಧ ಜಾರ್ಖಂಡ್ ಸರ್ಕಾರ (Jharkhand government) ಮತ್ತು ದೂರುದಾರ ಬಿಜೆಪಿ ಕಾರ್ಯಕರ್ತ ನವೀನ್ ಝಾ ಪ್ರತಿಕ್ರಿಯೆಯನ್ನು ಕೇಳಿದೆ. ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ನೋಟಿಸ್ ಜಾರಿಗೊಳಿಸಿದೆ. ಇದನ್ನೂ ಓದಿ: ಬ್ಯಾಂಕ್-ATMಗಳು ಸರ್ಕಾರ ಕೊಟ್ಟ ಮಾರ್ಗಸೂಚಿ ಪಾಲನೆ ಮಾಡಬೇಕು – ಪರಮೇಶ್ವರ್
Advertisement
Advertisement
ಇಂದಿನ ವಿಚಾರಣೆ ವೇಳೆ ರಾಹುಲ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ಪ್ರಕರಣದಲ್ಲಿ 3ನೇ ವ್ಯಕ್ತಿಯಿಂದ ದೂರು ದಾಖಲಿಸಲಾಗಿದೆ. ಮಾನನಷ್ಟ ಅಪರಾಧದ (ಕ್ರಿಮಿನಲ್ ಮಾನನಷ್ಟ ಮೊಕದ್ದಮೆ) ವಿಷಯದಲ್ಲಿ ಈ ರೀತಿ ಮೂರನೇ ವ್ಯಕ್ತಿ ದೂರು ದಾಖಲಿಸುವುದನ್ನು ಅನುಮತಿಸಲಾಗದು ಎಂದು ಪ್ರಬಲ ವಾದ ಮಂಡಿಸಿದರು. ಅಲ್ಲದೇ ನೀವು ಬಾಧಿತ ವ್ಯಕ್ತಿಯಲ್ಲದಿದ್ದರೆ, ನೀವು ಹೇಗೆ ಪ್ರಾಕ್ಸಿ ದೂರು ಸಲ್ಲಿಸಬಹುದು? ಎಂದು ಅರ್ಜಿದಾರರ ಪರ ವಕೀಲರನ್ನು ಸಿಂಘ್ವಿ ಪ್ರಶ್ನಿಸಿದರು.
Advertisement
ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಅಂತಿಮವಾಗಿ ಕೋರ್ಟ್, ಜಾರ್ಖಂಡ್ ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ನೀಡಿದೆ. ಮುಂದಿನ ಆದೇಶದವರೆಗೆ ವಿಚಾರಣೆಯಲ್ಲಿನ ಎಲ್ಲಾ ಪ್ರಕ್ರಿಯೆಗಳು ತಡೆಹಿಡಿಯಲ್ಪಡುತ್ತವೆ ಎಂದಿದೆ. ಇದನ್ನೂ ಓದಿ: Photo Gallery | ಮಹಾ ಕುಂಭಮೇಳದಲ್ಲಿ ಮಹಾಸಂಗಮ – ಸಂಸ್ಕೃತಿಗಳ ಸಮ್ಮಿಳಿತ
Advertisement
ಏನಿದು ಪ್ರಕರಣ?
2018ರ ಮಾರ್ಚ್ 18ರಂದು ಜಾರ್ಖಂಡ್‌ನಲ್ಲಿ ನಡೆದಿದ್ದ ಸಭೆಯೊಂದರಲ್ಲಿ ರಾಹುಲ್ ಗಾಂಧಿ ಭಾಷಣ ಮಾಡುತ್ತಿದ್ದರು, ಈ ವೇಳೆ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಅಮಿತ್ ಶಾ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಅಮಿತ್ ಶಾ ಅವರು ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ರಾಹುಲ್ ಹೇಳಿದ್ದರು. ಈ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಮುಖಂಡ ನವೀನ್ ಝಾ, ರಾಗಾ ವಿರುದ್ಧ ದೂರು ದಾಖಲಿಸಿದ್ದರು.
ಮೊದಲು ರಾಂಚಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನವೀನ್ ಝಾ ಅವರ ದೂರನ್ನು ವಜಾಗೊಳಿಸಿತ್ತು. ನಂತರ 2018ರ ಸೆಪ್ಟೆಂಬರ್ 15 ರಂದು ದೂರಿನ ಅರ್ಜಿ ವಜಾಗೊಳಿಸಿದ ಆದೇಶವನ್ನು ರದ್ದುಗೊಳಿಸಿ, ಹೊಸದಾಗಿ ಪರಿಶೀಲಿಸಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಿಂತಿರುಗಿಸಿತ್ತು. 2018ರ ನವೆಂಬರ್ 28ರಂದು ಹೊಸದಾಗಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 500ರ ಅಡಿಯಲ್ಲಿ ಮಾನನಷ್ಟ ಮೊಕದ್ದಮೆ ಹೂಡಲು ಸಾಕಷ್ಟು ಪುರಾವೆಗಳಿವೆ ಎಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಜಾರ್ಖಂಡ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಪ್ರಕರಣವನ್ನು ಆಲಿಸಿದ ನ್ಯಾಯಮೂರ್ತಿ ಅಂಬುಜ್ ನಾಥ್ ಅವರ ಏಕಸದಸ್ಯ ಪೀಠ, ಐಪಿಸಿ ಸೆಕ್ಷನ್ 499ರ ಅಡಿಯಲ್ಲಿ ರಾಹುಲ್ ಹೇಳಿಕೆಗಳು ಮೇಲ್ನೋಟಕ್ಕೆ ಮಾನಹಾನಿಕರವಾಗಿವೆ ಎಂದು ಅಭಿಪ್ರಾಯಪಟ್ಟಿತ್ತು. ಬಳಿಕ ಹೈಕೋರ್ಟ್‌ನ ಆದೇಶವನ್ನು ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಇದನ್ನೂ ಓದಿ: ಮದ್ಯಪ್ರಿಯರಿಗೆ ಸರ್ಕಾರದಿಂದ ಶಾಕ್ | ಇಂದಿನಿಂದಲೇ ದರ ಏರಿಕೆ – ಯಾವುದು ಎಷ್ಟು?