ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಬಿಗ್ ರಿಲೀಫ್ ಸಿಕ್ಕಿದ್ದು ಸೂರತ್ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
Rahul Gandhi has been convicted u/s 499 and 500 of IPC. The sentence awarded is for 2 years and against that sentence, he has plead that he may be released on bail till appeal period and as per law, the Court has granted him bail for 30 days and until appeal, the sentence is… pic.twitter.com/d8TFyMcUi2
— ANI (@ANI) March 23, 2023
Advertisement
2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದ್ದು ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ
Advertisement
Advertisement
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ (Kolara) ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ , ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆ – CBIನಿಂದ 3ನೇ ಚಾರ್ಜ್‌ಶೀಟ್ ಸಲ್ಲಿಕೆ
Advertisement
ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣ ಪ್ರಕಟಿಸಿತ್ತು. ತೀರ್ಪು ಪ್ರಕಟವಾಗುವ ಮೊದಲೇ ರಾಹುಲ್ ಗಾಂಧಿ ಕೋರ್ಟ್‌ಗೆ ಹಾಜರಾಗಿದ್ದರು.