ನವದೆಹಲಿ: ಉತ್ತರಪ್ರದೇಶದಲ್ಲಿ ರೈತರ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ಧಾರಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಶಂಸೆ ವ್ಯಕ್ತಪಡಿಸಿದ್ದು ಇದೊಂದು ಸರಿಯಾದ ನಿರ್ಧಾರ ಅಂತಾ ಹೇಳಿದ್ದಾರೆ.
ಇದೇ ವೇಳೆ ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಸಾಲ ಮನ್ನಾದಿಂದ ಉತ್ತರಪ್ರದೇಶದ ರೈತರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ, ಆದರೆ ಈ ಹೆಜ್ಜೆ ಸರಿಯಾದ ಮಾರ್ಗದಲ್ಲಿದೆ. ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡುವುದನ್ನ ಕಾಂಗ್ರೆಸ್ ಯಾವಾಗಲೂ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.
Advertisement
ಉತ್ತರಪ್ರದೇಶದಲ್ಲಿ ಕೊನೆಗೂ ಬಿಜೆಪಿ ರೈತರ ಸಾಲ ಮನ್ನಾ ಮಾಡಿರುವುದು ನನಗೆ ಸಂತಸ ತಂದಿದೆ. ದೇಶದಲ್ಲಿ ಸಂಕಷ್ಟದಲ್ಲಿರೋ ಬಡ ರೈತರೊಂದಿಗೆ ರಾಜಕೀಯ ಮಾಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಸಲಹೆ ನೀಡಿದ್ರು.
Advertisement
ಉತ್ತಪ್ರದೇಶದ ಚುನಾವಣೆಯ ವೇಳೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ರೈತರ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿತ್ತು. ಅದರಂತೆ ಮಂಗಳವಾರ ನಡೆದ ಸಂಪುಟ ಸಭೆಯಲ್ಲಿ ಯೋಗಿ ಆದಿತ್ಯನಾಥ್ ರಾಜ್ಯದ ರೈತರ 36,359 ಕೋಟಿ ರೂ. ಸಾಲ ಮನ್ನಾ ಮಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ.
Advertisement
2.15 ಕೋಟಿ ರೈತರಲ್ಲಿ 1 ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡಿದ್ದಾರೆ. ಇದರ ಜೊತೆಗೆ ಪಾಳು ಬಿದ್ದಿರುವ ಜಮೀನು ಹೊಂದಿರುವ 7 ಲಕ್ಷ ರೈತರ 5,630 ಕೋಟಿ ರೂಪಾಯಿ ಮನ್ನಾ ಮಾಡಿದ್ದಾರೆ.2016ರ ಮಾರ್ಚ್ 31ರವರೆಗೆ ಸಾಲ ಪಡೆದ ರೈತರಿಗೆ ಇದು ಅನ್ವಯವಾಗಲಿದೆ. 2017ರ ಮಾರ್ಚ್‍ಗೆ 31ರವರೆಗೆ ಬಾಕಿಯಿರೋ ಸಾಲವನ್ನ ಸರ್ಕಾರ ಪಾವತಿಸುತ್ತದೆ.