ಲಕ್ನೋ: ನಿಮ್ಮ ಧೈರ್ಯಕ್ಕೆ ಅವರು ಹೆದರುತ್ತಾರೆ ಎಂದು ಹೇಳುವ ಮೂಲಕ ಪೊಲೀಸರ ವಶವಾಗಿರುವ ಎಐಸಿಸಿ ಪ್ರಧಾಕ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ಸಹೋದರ ರಾಹುಲ್ ಗಾಂಧಿ ಧೈರ್ಯ ತುಂಬಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ರಾಹುಲ್, ಈ ಪ್ರಕರಣದಿಂದ ನೀವು ಹಿಂದೆ ಸರಿಯಲ್ಲ ಎಂದು ನನಗೆ ಗೊತ್ತು. ಈ ನಿಮ್ಮ ಧೈರ್ಯಕ್ಕೆ ಅವರೇ ಹೆದರುತ್ತಾರೆ. ಈ ಅಹಿಂಸಾತ್ಮಕ ಹೋರಾಟದ ನ್ಯಾಯಕ್ಕಾಗಿ ನಾವು ದೇಶದ ರೈತರನ್ನು ಗೆಲ್ಲುವಂತೆ ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರೈತರ ಮೇಲೆ ಕಾರು ಹತ್ತಿಸಿದ ಕೇಂದ್ರ ಸಚಿವನ ಮಗ – ನಾಲ್ವರು ರೈತರು ಸೇರಿ 8 ಮಂದಿ ಸಾವು
Advertisement
प्रियंका, मैं जानता हूँ तुम पीछे नहीं हटोगी- तुम्हारी हिम्मत से वे डर गए हैं।
न्याय की इस अहिंसक लड़ाई में हम देश के अन्नदाता को जिता कर रहेंगे। #NoFear #लखीमपुर_किसान_नरसंहार
— Rahul Gandhi (@RahulGandhi) October 4, 2021
Advertisement
ಘಟನೆಯೇನು..?
ಲಖೀಂಪುರ್‍ನಲ್ಲಿ ಉಪ ಮುಖ್ಯಮಂತ್ರಿ ಕೇಶವ್‍ಪ್ರಸಾದ್ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ನೀಡುವ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬೆಂಗಾವಲು ವಾಹನಗಳ ಸಾಲಿನಲ್ಲಿ ಬರುತ್ತಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾನ ಪುತ್ರ ಇದ್ದ ರೈತರ ಮೇಲೆ ಹರಿದು ನಾಲ್ವರು ರೈತರು ಮೃತಪಟ್ಟಿದ್ದಾರೆ ಎಂದು ರೈತ ಸಂಘಟನೆಗಳು ಆರೋಪಿಸಿವೆ. ಆ ಬಳಿಕ ಅಲ್ಲಿ ಪ್ರತಿಭಟನೆ ಉದ್ರಿಕ್ತಗೊಂಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದನ್ನೂ ಓದಿ: ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊಲೆ ಪ್ರಕರಣ ದಾಖಲು
Advertisement
Advertisement
ಲಂಖಿಪುರದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟ ರೈತರ ಮನೆಗಳಿಗೆ ಭೇಟಿ ನೀಡಲೆಂದು ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿಯವರನ್ನು ಉತ್ತರಪ್ರದೇಶದ ಪೊಲೀಸರು ತಡೆದಿದ್ದರು. ಈ ವೇಳೆ ಪ್ರಿಯಾಂಕಾ ಗಾಂಧಿ ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಪೊಲೀಸರು ಪ್ರಿಯಾಂಕಾ ಅವರನ್ನು ವಶಕ್ಕೆ ಪಡೆದಿದ್ದರು. ಸದ್ಯ ಪೊಲೀಸರ ವಶದಲ್ಲಿರುವ ಪ್ರಿಯಾಂಕ ಅವರಿಗೆ ರಾಹುಲ್ ಗಾಂಧಿ ಧೈರ್ಯದ ಮಾತುಗಳನ್ನು ಹೇಳಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಸರ್ಕಾರ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.
ಅಲ್ಲದೆ 144 ಸೆಕ್ಷನ್ ಜಾರಿಗೊಳಿಸಿದೆ. ಇತ್ತ ಕರ್ನಾಟದಲ್ಲಿಯೂ ಕಾಂಗ್ರೆಸ್ ನಾಯಕರು ಯುಪಿ ಪೊಲೀಸರ ವರ್ತನೆಗೆ ಖಂಡನೆ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ವೀಡಿಯೋ- ಕೈ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
Today's incident shows that this government is using politics to mow down farmers. This is farmers' country not BJP's… I'm not committing any crime by deciding to meet victims's kin…Why are you stopping us? You should have warrant…?: Priyanka Gandhi Vadra, Congress pic.twitter.com/4kPX9Adnb6
— ANI UP/Uttarakhand (@ANINewsUP) October 3, 2021