ಬೆಂಗಳೂರು: ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿ ನೇಮಕಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಶನಿವಾರ ಡಿಸಿಎಂ ಪರಮೇಶ್ವರ್ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಸಚಿವ ಸಂಪುಟದಲ್ಲಿ ಎಷ್ಟು ಮಂದಿಗೆ ಸ್ಥಾನ ನೀಡಬೇಕು ಎನ್ನುವುದನ್ನು ಆಮೇಲೆ ನಿರ್ಧರಿಸೋಣ. ಮೊದಲು ನೀವು, ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಕುಳಿತು ಚರ್ಚಿಸಿ. ಚರ್ಚೆ ಬಳಿಕ ತೀರ್ಮಾನ ಮಾಡಿ ಪಟ್ಟಿಯೊಂದಿಗೆ ದೆಹಲಿಗೆ ಬನ್ನಿ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
ನಿಗಮ ಮಂಡಳಿಯಲ್ಲಿ 20 ಸ್ಥಾನ ಶಾಸಕರಿಗೆ ಮೀಸಲಿರಲಿ. ಉಳಿದ 30 ಸ್ಥಾನಗಳು ಕಾರ್ಯಕರ್ತರಿಗೆ ಮೀಸಲಿಡಿ. ಅಧಿವೇಶನ ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿ ನೇಮಕ ಪ್ರಕ್ರಿಯೆ ಪೂರ್ಣವಾಗಬೇಕು ಎಂದು ರಾಹುಲ್ ಗಾಂಧಿ ಸೂಚಿಸಿದ್ದಾರೆ ಎನ್ನಲಾಗಿದೆ.
Advertisement
ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿಯ ಅಧಿವೇಶನ 12 ರಂದು ಮುಗಿಯಲಿದೆ. ಬಳಿಕ ಜುಲೈ 13 ಅಥವಾ 14 ರಂದು ಸಿದ್ದರಾಮಯ್ಯ, ಪರಮೇಶ್ವರ್ ಮತ್ತು ದಿನೇಶ್ ಗುಂಡೂರಾವ್ ಅವರು ದೆಹಲಿಗೆ ಹೋಗುವ ಸಾಧ್ಯತೆ ಇದೆ. ಅಲ್ಲಿಗೆ ಹೋಗಿ ಒಂದೆರಡು ದಿನಗಳ ಕಾಳ ಚರ್ಚೆ ಮಾಡಲಿದ್ದಾರೆ. ಅಧಿವೇಶನ ಮುಗಿದ ಒಂದು ವಾರದ ಬಳಿಕ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿ ಪ್ರಕ್ರಿಯೆ ಮುಗಿಯಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement