ಭಾರತದಲ್ಲಿ ಸರ್ವಾಧಿಕಾರವಿದೆ, ರೈತರ ಮೇಲೆ ದಾಳಿ ನಡೆಯುತ್ತಿದೆ: ರಾಹುಲ್ ಗಾಂಧಿ

Public TV
1 Min Read
rahul gandhi

ನವದೆಹಲಿ: ದೇಶದಲ್ಲಿ ಸರ್ವಾಧಿಕಾರ ಪರಿಸ್ಥಿತಿಯಿದ್ದು, ರೈತರ ಮೇಲೆ ವ್ಯವಸ್ಥಿತವಾಗಿ  ದಾಳಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

UP PROTEST 3

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಖಿಂಪುರ್ ಖೇರಿ ಹಿಂಸಾಚಾರದ ಕುರಿತಾಗಿ ಮಾತನಾಡಿ, ರೈತರ ಹಕ್ಕುಗಳನ್ನು ಕಸಿಯಲಾಗುತ್ತದೆ. ಕೇಂದ್ರ ಸಚಿವ ಮತ್ತು ಅವರ ಪುತ್ರರ ಹೆಸರು ಈ ಪ್ರಕರಣದಲ್ಲಿ ಬಂದರೂ ಕೂಡ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ, ದೇಶದ ರೈತರ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ  ಇಂದು ಬಿಜೆಪಿ  ಸರ್ವಾಧಿಕಾರವಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

UP AJAY SON

ಕಳೆದ ಭಾನುವಾರ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ವೇಳೆ ನಡೆದಿದ್ದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟಿದ್ದು ಅಲ್ಲಿ ಸದ್ಯ ನಿಷೇಧಾಜ್ಞೆ ಜಾರಿಯಲ್ಲಿದೆ. ಸೀತಾಪುರ್‍ದಲ್ಲಿ ಸೋಮವಾರದಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗೃಹಬಂಧನದಲ್ಲಿದ್ದಾರೆ. ನಾನು, ಕಾಂಗ್ರೆಸ್ ಮುಖ್ಯಮಂತ್ರಿಗಳಾದ ಛತ್ತೀಸ್ ಗಢ ಸಿಎಂ ಭೂಪೇಶ್ ಬಗೆಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರೊಂದಿಗೆ ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಸ್ಥರನ್ನು ಭೇಟಿ ಮಾಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಲಖೀಂಪುರ್ ಭೇಟಿಗೆ ಅವಕಾಶವಿಲ್ಲವೆಂದ ಯೋಗಿ ಸರ್ಕಾರ

UP PROTEST 4

ಲಕ್ನೊ ಪೊಲೀಸ್ ಆಯುಕ್ತ ಡಿ ಕೆ ಠಾಕೂರ್ ಪ್ರತಿಕ್ರಿಯೆ ನೀಡಿ ರಾಹುಲ್ ಗಾಂಧಿಯವರ ಭೇಟಿಗೆ ಉತ್ತರ ಪ್ರದೇಶ ಸರ್ಕಾರ ಅನುಮತಿ ನೀಡಿಲ್ಲ, ಹೀಗಾಗಿ ಅವರು ಲಖಿಂಪುರ್ ಅಥವಾ ಸೀತಾಪುರ್ ಹೋಗಲು ಸಾಧ್ಯವಿಲ್ಲ. ಉತ್ತರ ಪ್ರದೇಶ ಸರ್ಕಾರ ರಾಹುಲ್ ಗಾಂಧಿಯವರಿಗೆ ಅನುಮತಿ ನೀಡಿಲ್ಲ, ಹೀಗಾಗಿ ಅವರು ಬರಲು ಸಾಧ್ಯವಿಲ್ಲ ಎಂದು ಠಾಕೂರ್ ತಿಳಿಸಿದ್ದಾರೆ. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ನಮಗೆ ಪತ್ರ ಬರೆದು ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ರಾಹುಲ್ ಗಾಂಧಿಯವರು ಭೇಟಿ ನೀಡಿದರೆ ಸಮಸ್ಯೆಯಾಗಬಹುದು, ಹೀಗಾಗಿ ಅವರಿಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *