ಕಠ್ಮಂಡು: ಇಲ್ಲಿನ ಕಠ್ಮಂಡುವಿನ ವರ್ಲ್ಡ್‌ಕ್ಲಾಸ್ ನೈಟ್‌ಕ್ಲಬ್ ಪಾರ್ಟಿಯೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿದ್ದಾರೆ.
Rahul Gandhi was at a nightclub when Mumbai was under seize. He is at a nightclub at a time when his party is exploding. He is consistent.
Interestingly, soon after the Congress refused to outsource their presidency, hit jobs have begun on their Prime Ministerial candidate… pic.twitter.com/dW9t07YkzC
— Amit Malviya (@amitmalviya) May 3, 2022
Advertisement
ಪ್ರಮುಖ ರಾಜಕೀಯ ವಿದ್ಯಮಾನಗಳ ನಡುವೆ ಸದಾ ಬ್ಯುಸಿ ಶೆಡ್ಯೂಲ್‌ನಲ್ಲಿರುವ ರಾಹುಲ್‌ಗಾಂಧಿ ಈ ನಡುವೆಯೂ ಪಾರ್ಟಿಮೂಡ್‌ನಲ್ಲಿ ಕಾಣಿಸಿಕೊಂಡಿದ್ದು ಟೀಕೆಗೆ ಗುರಿಯಾಗಿದ್ದಾರೆ. ಪಾರ್ಟಿಯಲ್ಲಿ ಸ್ನೇಹಿತರೊಟ್ಟಿಗೆ ಎಂಜಾಯ್ ಮಾಡುತ್ತಿರುವ ವೀಡಿಯೋ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
Advertisement
ಈ ವಿಡಿಯೋವನ್ನು ಬಿಜೆಪಿ ನಾಯಕ ಕಪಿಲ್ ಮಿಶ್ರಾ, `ಯಾರು? ಅವರು ಯಾರು?’ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಬಿಜೆಪಿಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
Advertisement
पहचान कौन ? Who are they ? pic.twitter.com/IDKBkjSg5A
— Kapil Mishra (@KapilMishra_IND) May 3, 2022
Advertisement
ರಾಹುಲ್ ಗಾಂಧಿ ಮುಂಬೈ ಮೇಲೆ ದಾಳಿ ನಡೆದಾಗಲೂ ನೈಟ್‌ಕ್ಲಬ್‌ನಲ್ಲಿದ್ದರು. ಅವರ ಪಕ್ಷ ಸ್ಫೋಟಗೊಳ್ಳುತ್ತಿರುವ ಸಮಯದಲ್ಲೂ ನೈಟ್‌ಕ್ಲಬ್‌ನಲ್ಲಿದ್ದಾರೆ ಎಂದು ಕಾಲೆಳೆದಿದ್ದಾರೆ. ಪತ್ರಕರ್ತೆಯ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಹುಲ್ ಗಾಂಧಿ ನೇಪಾಳಕ್ಕೆ ಆಗಮಿಸಿದ್ದರು.