ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಉದ್ದೇಶ ಪೂರ್ವಕವಾಗಿ ಕೇಂದ್ರ ಅರ್ಥಿಕ ಸಚಿವ ಅರುಣ್ ಜೇಟ್ಲಿ ಅವರ ಹೆಸರನ್ನು ತಿರುಚಿ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದರು ರಾಜ್ಯಸಭೆಯಲ್ಲಿ ನೋಟಿಸ್ ಜಾರಿ ಮಾಡಿದ್ದಾರೆ.
ಬಿಜೆಪಿ ಸಂಸದ ಭುಪೇಂದ್ರ ಯಾದವ್ ಮಾಡಿರುವ ಆರೋಪವನ್ನು ರಾಜ್ಯಸಭಾ ಸ್ಪೀಕರ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
Advertisement
ಸಂಸದ ಭುಪೇಂದ್ರ ಯಾದವ್ ಅವರು ರಾಹುಲ್ ಗಾಂಧಿ ಅವರು ಉದ್ದೇಶ ಪೂರ್ವಕವಾಗಿ ಆರುಣ್ ಜೇಟ್ಲಿ ಅವರ ಹೆಸರನ್ನು ತಪ್ಪಾಗಿ ತಿರುಚಿದ್ದಾರೆ ಎಂದು ಆರೋಪಿಸಿ ನೋಟಿಸ್ ಜಾರಿ ಮಾಡಿದ್ದರು. ಈ ಕುರಿತು ಸದನಕ್ಕೆ ಪ್ರತಿಕ್ರಿಯೆ ನೀಡಿದ ಸ್ಪೀಕರ್ ಅವರು ಭುಪೇಂದ್ರ ಅವರು ನೀಡಿದ ಸೂಚನೆಯನ್ನು ಪರಿಶೀಲಿಸಿ ನಂತರ ಈ ಕುರಿತು ನೋಟಿಸ್ ಪಡೆಯಲಾಗುವುದು ಎಂದು ಗುರುವಾರ ಹೇಳಿದ್ದರು.
Advertisement
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವುದು ಒಂದು, ಆದರೆ ಮಾಡುವುದು ಮತ್ತೊಂದು. ಈ ಕುರಿತು ನೆನಪಿಸಿದಕ್ಕೆ ಧನ್ಯವಾದಗಳು ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬುಧವಾರ ಟ್ವೀಟ್ ಮಾಡಿದ್ದರು. ಆದರೆ ತಮ್ಮ ಟ್ವೀಟ್ ನಲ್ಲಿ ಅರುಣ್ ಜೇಟ್ಲಿ ಹೆಸರಿಗೆ ಬದಲಾಗಿ Mr Jaitlie ಎಂದು ಟ್ವೀಟ್ ಮಾಡಿದ್ದರು.
Advertisement
Advertisement
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಚುನಾವಣೆಯ ಸಂದರ್ಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಮಾಜಿ ಉಪರಾಷ್ಟ್ರಪತಿ ಹಂಮೀದ್ ಅನ್ಸಾರಿ ಅವರು ಪಾಕಿಸ್ತಾನ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು ಎಂದು ಆರೋಪಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿಗಳ ವಿರುದ್ಧ ಮಾಡಿದ ಆರೋಪ ಆಧಾರ ರಹಿತವಾಗಿದೆ, ಕೂಡಲೇ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕರು ಸದನದಲ್ಲಿ ಬೇಡಿಕೆ ಇಟ್ಟಿದ್ದರು. ಪ್ರತಿ ಪಕ್ಷದ ಒತ್ತಡಕ್ಕೆ ಮಣಿದ ಬಿಜೆಪಿ ಕೇಂದ್ರ ಸಚಿವ ಅರಣ್ ಜೇಟ್ಲಿ ಪ್ರಧಾನಿಗಳ ಹೇಳಿಕೆಗೆ ಸ್ಪಷ್ಟನೆಯನ್ನು ನೀಡಿದ್ದರು. ಈ ವಿಚಾರದ ಬಗ್ಗೆ ರಾಹುಲ್ ಗಾಂಧಿ ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದರು.