ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರು ಖಾಸಗಿ ಭೇಟಿಗಾಗಿ ಯುರೋಪ್ ಪ್ರವಾಸ ಕೈಗೊಂಡಿದ್ದು, ರಾಷ್ಟ್ರಪತಿ ಚುನಾವಣೆ ಹಾಗೂ ಸಂಸತ್ ಮುಂಗಾರು ಅಧಿವೇಶನಕ್ಕೂ ಮುನ್ನ ಭಾನುವಾರ ಭಾರತಕ್ಕೆ ಮರಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
Advertisement
ರಾಹುಲ್‌ಗಾಂಧಿ ಆಗಾಗ್ಗೆ ವಿದೇಶಿ ಪ್ರವಾಸ ಕೈಗೊಳ್ಳುವುದು ಸಹಜ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದ ಸಭೆ ನಡೆಯುತ್ತಿರುವ ಸಂದರ್ಭದಲ್ಲಿ ಅವರು ಗೈರಾಗುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: RSS ನಿಮ್ಮ ಜೊತೆ ಇದೆ: ದಲಿತ, ಹಿಂದುಳಿದ ವರ್ಗಗಳ ಮಠಾಧೀಶರೊಂದಿಗೆ ಮೋಹನ್ ಭಾಗವತ್ ಸಂವಾದ
Advertisement
Advertisement
ಪಕ್ಷದ ಅಧ್ಯಕ್ಷರ ಆಯ್ಕೆಯ ಬಗ್ಗೆಯೇ ಕಾಂಗ್ರೆಸ್ ಗುರುವಾರ ಸಭೆ ಆಯೋಜನೆ ಮಾಡಿದೆ. ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಈ ಬೆನ್ನಲ್ಲೇ ಜುಲೈ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಹೇಳಿದೆ. ಈ ಸಂದರ್ಭದಲ್ಲಿ ಪಕ್ಷದ ನಾಯಕತ್ವದ ಬದಲಾವಣೆಗೆ ಒತ್ತಡ ಹೆಚ್ಚಾಗುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಭೆ ಮುಖ್ಯವಾಗಿದೆ. ಆದರೂ ರಾಹುಲ್ ಈ ಸಭೆಗೆ ಗೈರಾಗುತ್ತಿದ್ದಾರೆ. ಅಧ್ಯಕ್ಷೀಯ ಹುದ್ದೆಯನ್ನು 2019ರ ಲೋಕಸಭಾ ಚುನಾವಣೆ ಸೋಲಿನ ಬಳಿಕ ತ್ಯಜಿಸಿದ್ದ ರಾಹುಲ್ ಗಾಂಧಿ, ಮತ್ತೆ ಈ ಹುದ್ದೆಯನ್ನು ಒಪ್ಪಿಕೊಳ್ಳುತ್ತಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ.
Advertisement
11 ಕಾಂಗ್ರೆಸ್ ಸದಸ್ಯರ ಬಲ ಹೊಂದಿರುವ ಗೋವಾದಲ್ಲಿ ಹಿರಿಯ ನಾಯಕರು ಬಂಡಾಯ ಏಳಲು ಮುಂದಾಗಿದ್ದಾರೆ. ಇದರ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಆದರೂ ಈವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಾಗಲಿ, ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯಾಗಲಿ ಈ ಬಗ್ಗೆ ಪ್ರತಿಕ್ರಿಯೆ ನೀಡದಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಆರ್ಥಿಕವಾಗಿ ಸ್ಥಿತಿವಂತರಾಗಿದ್ರೆ ಅನುಕಂಪದ ನೌಕರಿಯಿಲ್ಲ – ಹೊಸ ಮಾರ್ಗಸೂಚಿಯಲ್ಲಿ ಏನಿದೆ?
ಗುರುವಾರ ನಡೆಯಲಿರುವ ಕಾಂಗ್ರೆಸ್ ಸಭೆಯಲ್ಲಿ, ಅಕ್ಟೋಬರ್ 2ರಂದು ಆರಂಭಿಸಲಿರುವ `ಭಾರತ್ ಜೋಡೋ ಯಾತ್ರಾ’ ಅಥವಾ ಭಾರತವನ್ನು ಒಗ್ಗೂಡಿಸುವ ಯಾತ್ರೆಯ ಯೋಜನೆ ರೂಪಿಸುವ ಕುರಿತು ಸಹ ಚರ್ಚಿಸಲಾಗುತ್ತದೆ. ರಾಹುಲ್ ಗಾಂಧಿ ಅವರ ಗೈರು, ನಾಯಕತ್ವದ ಪ್ರಶ್ನೆ ಕುರಿತಾದ ಊಹಾಪೋಹಗಳನ್ನು ಮತ್ತಷ್ಟು ಹೆಚ್ಚಿಸಿದೆ.