ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಕೈ ನಾಯಕ ರಾಹುಲ್ ಗಾಂಧಿ (Rahul Gandhi), ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಕೈ ಹಿಡಿದುಕೊಂಡು ಅವರೊಂದಿಗೆ ಓಡಿರುವ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಹೌದು, ಭಾರತ್ ಜೋಡೋ ಯಾತ್ರೆ ವೇಳೆ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿರುತ್ತಾರೆ. ಕಾಂಗ್ರೆಸ್ (Congress) ನಾಯಕರ ಸುತ್ತ ಭದ್ರತಾ ಸಿಬ್ಬಂದಿ ಸುತ್ತುವರಿದಿರುತ್ತಾರೆ. ಈ ವೇಳೆ ಇದ್ದಕ್ಕಿದ್ದಂತೆ ಎಲ್ಲರೂ ಆಶ್ಚರ್ಯ ಪಡುವ ರೀತಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರ ಎಡಗೈಯನ್ನು ಹಿಡಿದುಕೊಂಡು ಓಡಲು ಆರಂಭಿಸುತ್ತಾರೆ. ಸಿದ್ದರಾಮಯ್ಯ ಅವರು ಕೂಡ ರಾಹುಲ್ ಗಾಂಧಿ ಸಮವಾಗಿ ಓಡುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ಗಂಡನನ್ನು ಕೊಲೆ ಮಾಡುವುದಾಗಿ ಹೆದರಿಸಿ ವೃದ್ಧೆ ಮೇಲೆ 1 ವರ್ಷ ನಿರಂತರ ಅತ್ಯಾಚಾರ
Fit, Fab & Fun! ????#BharatJodoYatra pic.twitter.com/hb07AMgIfn
— Congress (@INCIndia) October 6, 2022
ಕರ್ನಾಟಕದಲ್ಲಿ (Karnataka) ಸೆಪ್ಟೆಂಬರ್ 30 ರಿಂದ ಆರಂಭವಾಗಿರುವ ಭಾರತ್ ಜೋಡೋ ಯಾತ್ರೆಯು ಅಕ್ಟೋಬರ್ 21 ರವರೆಗೂ ಮುಂದುವರಿಯಲಿದೆ. ರಾಜ್ಯ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಮಧ್ಯೆ ಭಿನ್ನಾಭಿಪ್ರಾಯವಿದ್ದರೂ, ಇಬ್ಬರೂ ಒಟ್ಟಾಗಿ ರಾಹುಲ್ ಗಾಂಧಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಸಾಥ್ ನೀಡುತ್ತಿದ್ದಾರೆ. ಕರ್ನಾಟಕದಲ್ಲಿ ಪಾದಯಾತ್ರೆ ಪ್ರವೇಶಿಸುತ್ತಿದ್ದಂತೆಯೇ ಗುಂಡ್ಲುಪೇಟೆಯಲ್ಲಿ ನಿರ್ಮಿಸಲಾಗಿದ್ದ ಬೃಹತ್ ವೇದಿಕೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಕೈ ಹಿಡಿದುಕೊಂಡು ನಗಾರಿ ಬಾರಿಸುವ ಮೂಲಕ ರಾಹುಲ್ ಗಾಂಧಿ ಒಗ್ಗಟ್ಟಿನ ಜಪ ಮಾಡಿದರು.
ಈ ಹಿಂದೆ ದಾವಣಗೆರೆಯ (Davangere) ಅಮೃತ ಮಹೋತ್ಸವದಲ್ಲೂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪರಸ್ಪರ ಅಪ್ಪಿಕೊಳ್ಳುವಂತೆ ಹೇಳಿ ಒಗ್ಗಟ್ಟು ಪ್ರದರ್ಶಿಸಿದ್ದರು. ಇದನ್ನೂ ಓದಿ: ಜಿಮ್‍ಗಳಲ್ಲಿನ ಪ್ರೊಟೀನ್ ಪೌಡರ್‌ನಿಂದ ಸೈಡ್ ಎಫೆಕ್ಟ್- ಸಾಂಪಲ್ಸ್ ಲ್ಯಾಬ್‍ಗೆ ಕೊಟ್ಟ ಆರೋಗ್ಯ ಇಲಾಖೆ