LatestMain PostNational

ಉಜ್ಜಯಿನಿಯ ಮಹಾಕಾಲ ದೇವಸ್ಥಾನದಲ್ಲಿ ರಾಹುಲ್ ಗಾಂಧಿ ವಿಶೇಷ ಪೂಜೆ

ಭೋಪಾಲ್: ಮಧ್ಯಪ್ರದೇಶದ (Madhya Pradesh) ಉಜ್ಜಯಿನಿಯಲ್ಲಿರುವ ಪ್ರಸಿದ್ಧ ಮಹಾಕಾಲ ಶಿವನ ದೇವಾಲಯದಲ್ಲಿ (Mahakal Temple) ಮಂಗಳವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ (Rahul Gandhi) ಅವರು ವಿಶೇಷ ಪೂಜೆ ಸಲ್ಲಿಸಿದರು.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಮಧ್ಯಪ್ರದೇಶದ ಪವಿತ್ರ ನಗರವನ್ನು ಪ್ರವೇಶಿಸಿದೆ. ಈ ವೇಳೆ ಉಜ್ಜಯಿನಿಯ ಶಿವನ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಅವರು ಭೇಟಿ ನೀಡಿದರು. ಬಳಿಕ ಅರ್ಚಕರ ಮಾರ್ಗದರ್ಶನದಲ್ಲಿ ಮಹಾಕಾಲನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಉಜ್ಜಯಿನಿಯ ಮಹಾಕಾಲ ದೇವಸ್ಥಾನದಲ್ಲಿ ರಾಹುಲ್ ಗಾಂಧಿ ವಿಶೇಷ ಪೂಜೆ

ವಿಶೇಷ ಪೂಜೆ ಮುಗಿದ ನಂತರ ರಾಹುಲ್ ಗಾಂಧಿ ದೇವಾಲಯದ ಗರ್ಭಗುಡಿಯ ಮುಂದೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಅದಾದ ಬಳಿಕ ಅವರು ದೇವಾಲಯದ ಆವರಣದಲ್ಲಿರುವ ನಂದಿ ವಿಗ್ರಹದ ಪಕ್ಕದಲ್ಲಿ ಸ್ವಲ್ಪ ಕಾಲ ಕುಳಿತುಕೊಂಡು, ಭಾರತ್‌ ಜೋಡೋ ಯಾತ್ರೆಯನ್ನು ಮುಂದುವರಿಸಿದರು. ಇದನ್ನೂ ಓದಿ: ನರ್ಮದಾ ಘಾಟ್‍ನಲ್ಲಿ ಪ್ರಿಯಾಂಕಾ ಗಾಂಧಿ ಜೊತೆ ಆರತಿ ಬೆಳಗಿದ ರಾಹುಲ್ ಗಾಂಧಿ

ಉಜ್ಜಯಿನಿಯ ಮಹಾಕಾಲ ದೇವಸ್ಥಾನದಲ್ಲಿ ರಾಹುಲ್ ಗಾಂಧಿ ವಿಶೇಷ ಪೂಜೆ

ಶುಕ್ರವಾರ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಬ್ರಹ್ಮಪುರಿ ಘಾಟ್‍ನಲ್ಲಿರುವ ನರ್ಮದಾ ನದಿಗೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಆರತಿ ಬೆಳಗಿ ಬಳಿಕ ಬೆಟ್ಟದ ಮೇಲಿರುವ ಪ್ರಸಿದ್ಧ ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕನನ್ನು ಸೋಲಿಸಲು ಹರಕೆ- ಮೊಣಕಾಲಿನಲ್ಲೇ ತಿರುಪತಿ ಬೆಟ್ಟ ಹತ್ತಿದ BJP ಮುಖಂಡ

Live Tv

Leave a Reply

Your email address will not be published. Required fields are marked *

Back to top button