ನವದೆಹಲಿ: ಅಡುಗೆ ಅನಿಲ (ಎಲ್‍ಪಿಜಿ) ಸಿಲಿಂಡರ್‌ಗಳ ಬೆಲೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ‘ಅಭಿವೃದ್ಧಿ ವಾಹನವು ಹಿಮ್ಮುಖವಾಗಿ ಚಲಿಸುತ್ತಿದೆ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.
ಮೋದಿ ಆಡಳಿತದಲ್ಲಿ ದೇಶ ಅಭಿವೃದ್ಧಿ ಮಾತುಗಳಿಂದ ತುಂಬಾ ದೂರ ಉಳಿದಿದ್ದು, ಲಕ್ಷಾಂತರ ಕುಟುಂಬಗಳು ಒತ್ತಾಯಪೂರ್ವಕವಾಗಿ ಸೌದೆ ಒಲೆಗಳನ್ನು ಹಚ್ಚುವಂತೆ ಮಾಡಿದೆ. ಮೋದಿ ಜೀ ಅವರ ಅಭಿವೃದ್ಧಿ ವಾಹನವು ಹಿಮ್ಮುಖವಾಗಿ ಚಲಿಸುತ್ತಿದೆ ಮತ್ತು ಬ್ರೇಕ್ ಸಹ ತುಂಡಾಗಿದೆ ಎಂದು ರಾಹುಲ್ ಟ್ವೀಟ್ ಮಾಡಿ ಆಡಳಿತ ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರ ನಿದ್ರಿಸುತ್ತಿದೆ- ಲಾರಿ ಚಿತ್ರ ಹಂಚಿಕೊಂಡ ತರೂರ್
Advertisement
विकास के जुमलों से कोसों दूर,
लाखों परिवार चूल्हा फूंकने पर मजबूर।
मोदी जी के विकास की गाड़ी रिवर्स गियर में है और ब्रेक भी फ़ेल हैं।#PriceHike pic.twitter.com/IwEUBUe0un
— Rahul Gandhi (@RahulGandhi) November 6, 2021
Advertisement
ಬೆಲೆ ಏರಿಕೆಯ ಪರಿಣಾಮವಾಗಿ ಗ್ರಾಮೀಣ ಭಾಗದ ಶೇ.42ರಷ್ಟು ಜನರು ಎಲ್‍ಪಿಜಿ ಸಿಲಿಂಡರ್ ಖರೀದಿಸಲಾರದೆ ಅದನ್ನು ಬಳಸುವುದನ್ನೇ ನಿಲ್ಲಿಸಿದ್ದಾರೆ. ಹಾಗೆಯೇ ಅಡುಗೆ ಮಾಡಲು ಸೌದೆ ಒಲೆ ಬಳಸಲಾರಂಭಿಸಿದ್ದಾರೆ ಎಂಬ ಸಮೀಕ್ಷೆಯೊಂದರ ಮಾಹಿತಿ ಆಧರಿಸಿಪ್ರಕಟವಾಗಿರುವ ವರದಿಯೊಂದರ ಚಿತ್ರವನ್ನೂ ತಮ್ಮ ಟ್ವೀಟ್‍ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ
Advertisement
Advertisement
ಪೆಟ್ರೋಲಿಯಂ ಕಂಪೆನಿಗಳು ಎಲ್‍ಪಿಜಿ ಸಿಲಿಂಡರ್‌ಗಳ ಮೇಲಿನ ಬೆಲೆಯನ್ನು ಅಕ್ಟೋಬರ್ 6ರಂದು 15 ಹೆಚ್ಚಿಸಿದ್ದವು. ಅದೇರೀತಿ ನವೆಂಬರ್ 1ರಂದು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 266 ಏರಿಕೆ ಮಾಡಲಾಗಿತ್ತು. ಸಬ್ಸಿಡಿ ರಹಿತ 14.2 ಕೆಜಿ ತೂಕದ ಎಲ್‍ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 899.50 ಆಗಿದೆ. ಇದೇ ವೇಳೆ ಕೆಜಿ ಸಿಲಿಂಡರ್ ಬೆಲೆ 502ಕ್ಕೆ ತಲುಪಿದೆ. 19ಕೆ.ಜಿ.ಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ರಾಷ್ಟ್ರ ರಾಜಧಾನಿಯಲ್ಲಿ ಬರೋಬ್ಬರಿ 2,000.50ಕ್ಕೇರಿದೆ. ಇದನ್ನೂ ಓದಿ: ಪೆಟ್ರೋಲ್ ಬೆಲೆ ಇಳಿಸಿದ್ದು ಭಯದಿಂದ: ಪ್ರಿಯಾಂಕಾ ಗಾಂಧಿ