ನವದೆಹಲಿ: ದೇಶವನ್ನು ಕಾಡುತ್ತಿರುವ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ನರ್ಸ್‍ಗಳು ನಿಜವಾದ ದೇಶ ಭಕ್ತರು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದೇಶ ಸಂಕಷ್ಟದಲ್ಲಿ ಇರುವಾಗ ನಿಸ್ವಾರ್ಥದಿಂದ ದುಡಿಯುವುದೇ ನಿಜವಾದ ದೇಶಭಕ್ತಿ. ಈ ಕಷ್ಟಕರ ಸಮಯದಲ್ಲೂ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರು, ನರ್ಸ್‍ಗಳು, ಅಂಗನವಾಡಿ ಕಾರ್ಯಕರ್ತರು ನಿಜವಾದ ದೇಶಭಕ್ತರು. ಇವರು ಮುಖ್ಯವಾಹಿನಿಯಿಂದ ದೂರವುಳಿದು ಸಾರ್ವಜನಿಕ ಸುರಕ್ಷತೆಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.
Advertisement
Shri @RahulGandhi's message to Accredited Social Health Activists (ASHA), Auxiliary Nurse & Midwives (ANMs) and Anganwadi Workers. pic.twitter.com/jLkEU8gf0m
— Congress (@INCIndia) April 10, 2020
Advertisement
ಕೊರೊನಾ ವೈರಸ್ ಮೇಲಿರುವ ಭಯ ಹಾಗೂ ತಪ್ಪು, ಸುಳ್ಳಿ ಮಾಹಿತಿಗಳು ವೈರಸ್‍ಗಿಂತ ಅಪಾಯಕಾರಿಯಾಗಿದೆ. ಈ ಪರಿಸ್ಥಿತಿಯಲ್ಲಿ ಸಮುದಾಯ ಕಾರ್ಯಕರ್ತರು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ದೇಶಕ್ಕಾಗಿ ಜನರ ಹಿತಕ್ಕಾಗಿ ದುಡಿಯುತ್ತಿದ್ದಾರೆ ಎಂದರು.
Advertisement
ದೇಶವಾಸಿಗಳಾಗಿ ನಾವು ಅವರಿಗೆ ಆಭಾರಿಯಾಗಿದ್ದೇವೆ. ಈ ಕೊರೊನಾ ವೈರಸ್ ಬಿಕ್ಕಟ್ಟಿಗೆ ಮುಕ್ತಿ ಸಿಕ್ಕ ಬಳಿಕ ಆಶಾ ಕಾರ್ಯಕರ್ತರು, ನರ್ಸ್‍ಗಳು, ಅಂಗನವಾಡಿ ಕಾರ್ಯಕರ್ತರ ಅಪೂರ್ವ ಕೊಡುಗೆಯನ್ನು ಗುರುತಿಸಿ, ಅವರು ಕೆಲಸದ ಪರಿಸ್ಥಿತಿಗಳು ಸುಧಾರಣೆಯಾಗಲಿದೆ ಎಂಬ ವಿಶ್ವಾಸವನ್ನು ರಾಹುಲ್ ಗಾಂಧಿ ವ್ಯಕ್ತಪಡಿಸಿದರು.