Connect with us

ಕರ್ಮ ಯಾರನ್ನೂ ಬಿಡುವುದಿಲ್ಲ: ರಾಹುಲ್ ಗಾಂಧಿ

ಕರ್ಮ ಯಾರನ್ನೂ ಬಿಡುವುದಿಲ್ಲ: ರಾಹುಲ್ ಗಾಂಧಿ

ನವದೆಹಲಿ: ಕರ್ಮ ಯಾರನ್ನೂ ಬಿಡುವುದಿಲ್ಲ ಎಂದು ಟ್ವೀಟ್ ಮಾಡುವ ಮೂಲಕವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ವಾಗ್ದಾಳಿ ಮಾಡಿದ್ದಾರೆ.

ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಯಾರೊಬ್ಬರೂ ಅವರ ಕರ್ಮದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಯುದ್ಧ ವಿಮಾನ ಖರೀದಿ ಪ್ರಕ್ರಿಯೆಯಲ್ಲಿ, 1.1 ಮಿಲಿಯನ್ ಯುರೋಗಳನ್ನು ವಿಮಾನ ತಯಾರಕರಿಂದ ಮಧ್ಯವರ್ತಿಗೆ ಪಾವತಿಸಲಾಗಿದೆ ಎಂದು ಫ್ರೆಂಚ್ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಈ ಟ್ವೀಟ್ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ:
ಕರ್ಮ ಲೆಡ್ಜರ್ ನಂತೆ. ಯಾರೂ ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡು ಹ್ಯಾಶ್‍ಟ್ಯಾಗ್ ರಫೇಲ್ ಎಂದು ಟ್ವೀಟ್ ಮಾಡಿದ್ದಾರೆ.

Advertisement
Advertisement