ನವದೆಹಲಿ: ಅಗ್ನಿಪಥ್ ಯೋಜನೆಯನ್ನು ಯುವಕರು ತಿರಸ್ಕರಿಸುತ್ತಿರುವ ಕುರಿತಾಗಿ ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಾಲೆಳೆದರು.
ಟ್ವೀಟ್‍ನಲ್ಲಿ ಏನಿದೆ?: ಕೇಂದ್ರದ ಯೋಜನೆಗಳನ್ನು ದೇಶದ ಜನ ಸ್ವೀಕಾರ ಮಾಡುತ್ತಿಲ್ಲ. ಅಗ್ನಿಪಥ್ ಯೋಜನೆ ಯುವಕರಿಂದ ತಿರಸ್ಕರಿಸಲಾಗಿದೆ. ಕೃಷಿ ಕಾನೂನು – ರೈತರಿಂದ ತಿರಸ್ಕರಿಸಲಾಗಿದೆ. ನೋಟು ಅಮಾನ್ಯೀಕರಣವನ್ನು ಅರ್ಥಶಾಸ್ತ್ರಜ್ಞರು ನಿರಾಕರಿಸಿದ್ದಾರೆ. ಜಿಎಸ್‍ಟಿ – ವ್ಯಾಪಾರಿಗಳಿಂದ ತಿರಸ್ಕರಿಸಲಾಗಿದೆ. ದೇಶದ ಜನತೆಗೆ ಏನು ಬೇಕು ಎಂಬುದು ಪ್ರಧಾನಿಗೆ ಅರ್ಥವಾಗುತ್ತಿಲ್ಲ. ಏಕೆಂದರೆ ಅವರ ಸ್ನೇಹಿತರ ದನಿ ಬಿಟ್ಟು ಬೇರೇನೂ ಕೇಳುವುದಿಲ್ಲ ಎಂದು ವ್ಯಂಗ್ಯವಾಡಿದರು.
Advertisement
अग्निपथ – नौजवानों ने नकारा
कृषि कानून – किसानों ने नकारा
नोटबंदी – अर्थशास्त्रियों ने नकारा
GST – व्यापारियों ने नकारा
देश की जनता क्या चाहती है, ये बात प्रधानमंत्री नहीं समझते क्यूंकि उन्हें अपने ‘मित्रों’ की आवाज़ के अलावा कुछ सुनाई नहीं देता।
— Rahul Gandhi (@RahulGandhi) June 17, 2022
ಗುರುವಾರ ಅಗ್ನಿಪಥ್ ವಿರೋಧಿಸಿ ಬಿಹಾರ, ಉತ್ತರಪ್ರದೇಶ ರಾಜ್ಯಗಳಲ್ಲಿ ಪ್ರತಿಭಟನೆಯ ಕಿಚ್ಚು ಹೆಚ್ಚಿದೆ. ಹಾಗಾಗಿ ಪೂರ್ವ ಮಧ್ಯ ರೈಲ್ವೆಯ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಇದನ್ನೂ ಓದಿ: ಇಡಿಯಿಂದ ರಾಹುಲ್ ಗಾಂಧಿಗೆ 3 ದಿನ ರಿಲೀಫ್
Advertisement
Advertisement
ದೇಶದಲ್ಲಿರುವ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ `ಅಗ್ನಿಪಥ್’ ಅಲ್ಪಾವಧಿಯ ನೇಮಕಾತಿ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಕಳೆದ 2 ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಗುರುವಾರ ಬಿಹಾರದಲ್ಲಿ ನಡೆಯುತ್ತಿರುವ ಸೇನಾಕಾಂಕ್ಷಿಗಳ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ಕಾರವು ಅಗ್ನಿಪಥ್ ನೇಮಕಾತಿಯ ವಯೋಮಿತಿಯನ್ನು 21 ರಿಂದ 23ಕ್ಕೆ ಏರಿಸಿದೆ. ಇದನ್ನೂ ಓದಿ: ‘ಅಗ್ನಿಪಥ್’ ವಿರೋಧ- ಮತ್ತೇ ಪ್ಯಾಸೆಂಜರ್ ರೈಲಿನ 2 ಬೋಗಿಗೆ ಬೆಂಕಿ