ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ (Rahul Gandhi) ಸಂಸತ್ ಸ್ಥಾನದ ಅನರ್ಹತೆಯನ್ನ ಲೋಕಸಭೆಯ ಸ್ಪೀಕರ್ (Lok Sabha Speaker) ಓಂ ಪ್ರಕಾಶ್ ಬಿರ್ಲಾ ವಾಪಸ್ ಪಡೆದಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ಸಂಸದೀಯ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಶುಕ್ರವಾರ ಸುಪ್ರೀಂ ಕೋರ್ಟ್ (Supreme Court) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸ್ಪೀಕರ್ ಈ ನಿರ್ಧಾರ ಕೈಗೊಂಡಿದ್ದಾರೆ.
ಮಾನನಷ್ಟ ಪ್ರಕರಣದಲ್ಲಿ ಸೂರತ್ ಜಿಲ್ಲಾ ನ್ಯಾಯಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಬಳಿಕ ಜನಪ್ರತಿನಿಧಿ ಕಾಯ್ದೆಯಡಿ ಕಳೆದ ಮಾರ್ಚ್ ನಲ್ಲಿ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ (Lok Sabha Membership) ಅನರ್ಹಗೊಳಿಸಲಾಗಿತ್ತು. ಇದನ್ನೂ ಓದಿ: ಭಾರತ ಮಾತೆಯನ್ನು ವಿರೋಧಿಸುವವರ ಪ್ರಾಣ ತೆಗೆಯಲು ನಾವು ಹಿಂಜರಿಯಲ್ಲ: ಬಿಜೆಪಿ ನಾಯಕ
Advertisement
Advertisement
ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‍ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಪಿ.ಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು.
Advertisement
ಸುಪ್ರೀಂ ಆದೇಶ ಬೆನ್ನಲ್ಲೇ ಸೋಮವಾರ ಲೋಕಸಭೆಯ ಸ್ಪೀಕರ್ ಸದಸ್ಯತ್ವವನ್ನ ಮರಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಲೋಕಸಭೆ ಅಧಿವೇಶನಕ್ಕೆ ಹಾಜರಾಗಬಹುದಾಗಿದೆ. ಇದನ್ನೂ ಓದಿ: ಒಳನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ
Advertisement
ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು.
Web Stories