ಮಂಗಳೂರು: ಮುಂದಿನ ಐದು ವರ್ಷಗಳಿಗೆ ಕಾಂಗ್ರೆಸ್ ನ ಭರವಸೆ ಮತ್ತು ಮುನ್ನೋಟಗಳನ್ನು ಇಂದು ನಗರದ ಟಿಎಂಎಪೈ ಹಾಲ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಹಿರಿಯ ನಾಯಕರು ಸೇರಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರು.
2013ರ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ತಿಳಿಸಿದ ಶೇಕಡಾ 95ರಷ್ಟು ಕೆಲಸಗಳನ್ನು ಮಾಡಿದ್ದೇವೆ. ಎಲ್ಲ ಪಕ್ಷಗಳು ಕೂಡ ಚುನಾವಣೆ ಪೂರ್ವ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತವೆ. ಆದ್ರೆ ಎಲ್ಲ ಪಕ್ಷಗಳಿಗಿಂತೂ ಕಾಂಗ್ರೆಸ್ ಸಂಪೂರ್ಣ ಭಿನ್ನವಾಗಿದೆ. ನಾವು ಬಜೆಟ್ ಮಂಡಿಸುವಾಗ ಪ್ರಣಾಳಿಕೆಯನ್ನು ಪಕ್ಕದಲ್ಲಿಟ್ಟುಕೊಂಡು ರಚಿಸುತ್ತೇವೆ. ಬೇರೆ ಪಕ್ಷಗಳು ಅಧಿಕಾರಕ್ಕೆ ಬಂದ ಮೇಲೆ ಪ್ರಣಾಳಿಕೆಯನ್ನು ಕಸದ ಬುಟ್ಟಿಗೆ ಹಾಕುತ್ತವೆ ಅಂತಹ ಘಟನೆಗಳನ್ನು ನಾನು ನೋಡಿದ್ದೇನೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ರು.
ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಅಂಶಗಳು:
1. ಪ್ರತಿ ಮೂರು ಜಿಲ್ಲೆಗೂಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
2. ಮುಂದಿನ 5 ವರ್ಷಗಳಲ್ಲಿ ಕೃಷಿಗೆ 1.25 ಕೋಟಿ ಹಣ ಮೀಸಲು.
3. ಹುಬ್ಬಳ್ಳಿ-ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ.
4. 75 ಟಿಎಂಸಿ ಕಾವೇರಿ ನೀರು ಸದ್ಬಳಕೆಗೆ ನೀಲ ನಕ್ಷೆ ರಚನೆ.
5. ಭದ್ರ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಒತ್ತು.
6. 2 ಸಾವಿರ ಜನಸಂಖ್ಯೆಯುಳ್ಳ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ.
7. ತಾಲೂಕು, ಗ್ರಾಮ ಪಂಚಾಯತ್ ಅಭಿವೃದ್ಧಿಗೆ ಮುಂದಿನ ಬಜೆಟ್‍ನಲಿ ಹೆಚ್ಚಿನ ಅನುದಾನ ಮೀಸಲು.
8. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಇತರೆ ಜಿಲ್ಲೆಗಳಿಗೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ.
9. ಪ್ರತಿ ಹಳ್ಳಿಗೂ 24 ಗಂಟೆ ವಿದ್ಯುತ್ ಪೂರೈಕೆಯ ಭರವಸೆ.
10. ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ,ಪುನರ್ವಸತಿ ಭರವಸೆ.
11. ಮುಂದಿನ 10 ವರ್ಷಗಳಲ್ಲಿ ಗ್ರಾಮೀಣ ಭಾಗಗಳಲ್ಲಿ 10 ಲಕ್ಷ ಮನೆಗಳ ನಿರ್ಮಾಣದ ಗುರಿ.
12. 2025ರೊಳಗೆ ನವಕರ್ನಾಟಕ ನಿರ್ಮಾಣಕ್ಕೆ ಒತ್ತು.
13. ತಮಿಳುನಾಡು ಮಾದರಿಯಲ್ಲಿಯೇ ಕನ್ನಡಿಗರಿಗೆ ಉಚಿತ ಮಾಂಗಲ್ಯ ಭಾಗ್ಯ.
14. ಚುನಾವಣೆಯಲ್ಲಿ ಗೆದ್ದರೆ 18 ವರ್ಷಗಳ ಕಾಲ ಉಚಿತ ಶಿಕ್ಷಣ ಭಾಗ್ಯ, ಈ ಮೊದಲು 10 ವರ್ಷಗಳಿಗೆ ಮಾತ್ರ ಆಗಿತ್ತು.
15. ರಾಜ್ಯದಲ್ಲಿ ಕೃಷಿ ಕಾರಿಡಾರ್ ನಿರ್ಮಾಣ