ಪಣಜಿ: ಗೋವಾಕ್ಕೆ (Goa) ಖಾಸಗಿ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಜಾಕ್ ರಸೆಲ್ ಟೆರಿಯರ್ ನಾಯಿ ಮರಿಯೊಂದಿಗೆ ದೆಹಲಿಗೆ (New Delhi) ವಾಪಸ್ ಆಗಿದ್ದಾರೆ.
ಶಿವಾನಿ ಪಿತ್ರೆ ಅವರು ತನ್ನ ಪತಿ ಸ್ಟಾನ್ಲಿ ಬ್ರಗಾಂಕಾ ಅವರೊಂದಿಗೆ ಉತ್ತರ ಗೋವಾದ ಮಾಪುಸಾ ಪಟ್ಟಣದಲ್ಲಿ ವಿವಿಧ ತಳಿಯ ಶ್ವಾನಗಳ ಮಾರಾಟ ಅಂಗಡಿ ನಡೆಸುತ್ತಿದ್ದಾರೆ. ‘ಗೋವಾಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಅವರು ಒಂದು ನಾಯಿ ಮರಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಮತ್ತೊಂದನ್ನು ಕೆಲ ದಿನಗಳ ನಂತರ ಅವರಿಗೆ ಕಳುಹಿಸಲಾಗುವುದು’ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರ ಸಂಘರ್ಷ – ಪೊಲೀಸ್ ಅಧಿಕಾರಿಯನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿದ ಕಿಡಿಗೇಡಿಗಳು
ರಾಹುಲ್ ಗಾಂಧಿ ಅವರು ಗುರುವಾರ ರಾತ್ರಿ ಗೋವಾಗೆ ಭೇಟಿ ಕೊಟ್ಟಿದ್ದರು. ಪಪ್ಪಿಯೊಂದಿಗೆ ಶುಕ್ರವಾರ ಬೆಳಗ್ಗೆ ದೆಹಲಿಗೆ ವಾಪಸ್ ಆಗಿದ್ದಾರೆ. ಗುರುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಉತ್ತರ ಗೋವಾದ ಮೋಪಾದಲ್ಲಿರುವ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಕಾಂಗ್ರೆಸ್ ನಾಯಕ ಮಾಪುಸಾದಲ್ಲಿ ಶ್ವಾನಗಳಿಗೆ ಶೆಲ್ಟರ್‌ಗೆ ಭೇಟಿ ನೀಡಿದ್ದರು.
ಗೋವಾ ಶಾಸಕರು ಮತ್ತು ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಮಿತ್ ಪಾಟ್ಕರ್ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ಬುಧವಾರ ರಾತ್ರಿ ಹೋಟೆಲ್‌ನಲ್ಲಿ ಗಾಂಧಿ ಭೇಟಿ ಮಾಡಿದ್ದರು. ಇದನ್ನೂ ಓದಿ: ಕೇದಾರನಾಥ ಮಾರ್ಗದಲ್ಲಿ ಭಾರಿ ಭೂಕುಸಿತ – ಹಲವರ ಸಮಾಧಿ ಶಂಕೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]