ಚಂಡೀಗಢ: 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಪಂಜಾಬ್ ಕಾಂಗ್ರೆಸ್ (Punjab Congress) ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು (Navjot Singh Sidhu) 10 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶನಿವಾರ ಜೈಲಿನಿಂದ ಹೊರಬರುತ್ತಿದ್ದಂತೆಯೇ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಧು, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
#WATCH | Patiala: Whenever a dictatorship came to this country a revolution has also come and this time, the name of that revolution is Rahul Gandhi. He will rattle the govt: Navjot Singh Sidhu soon after his release from Patiala jail pic.twitter.com/wkrBrObxDG
— ANI (@ANI) April 1, 2023
Advertisement
ʻʻಪ್ರಜಾಪ್ರಭುತ್ವವು ಸರಪಣಿಯಲ್ಲಿ ಬಂಧಿತವಾಗಿದೆʼʼ ಎಂದು ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಕಿಡಿಕಾರಿದ್ದಾರೆ. ಮುಂದುವರಿದು ಈ ದೇಶದಲ್ಲಿ ಸರ್ವಾಧಿಕಾರ ಬಂದಾಗಲೆಲ್ಲಾ ಒಂದು ಕ್ರಾಂತಿಯೂ ಬಂದಿದೆ. ಈ ಬಾರಿ ರಾಹುಲ್ ಗಾಂಧಿ (Rahul Gandhi) ಅವರ ರೂಪದಲ್ಲಿ ಕ್ರಾಂತಿ ಬಂದಿದೆ, ಅವರು ಸರ್ಕಾರವನ್ನ ಸಮರ್ಥವಾಗಿ ಎದುರಿಸಲಿದ್ದಾರೆ’ ಎಂದು ಹೊಗಳಿದ್ದಾರೆ. ಇದನ್ನೂ ಓದಿ: ಅತ್ಯಂತ ವೇಗದಲ್ಲಿ ಚಲಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಮೋದಿ ಚಾಲನೆ
Advertisement
#WATCH | Punjab: Dhols being played outside the jail in Patiala where Former Punjab Congress president Navjot Singh Sidhu, who was jailed in a road rage case, will be released today. pic.twitter.com/ktALjRs4qG
— ANI (@ANI) April 1, 2023
Advertisement
ಆಮ್ ಆದ್ಮಿ ಪಕ್ಷದ ಸರ್ಕಾರವಿರುವ ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ. ಬಿಜೆಪಿಯವರು ಪಂಜಾಬ್ ಅನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಆದ್ರೆ ನಾನು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಎಲ್ಲ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಗೋಡೆಯಂತೆ ನಿಲ್ಲುತ್ತೇನೆ ಎಂದು ಸಿಧು ಹೇಳಿದ್ದಾರೆ. ಇದನ್ನೂ ಓದಿ: 10 ತಿಂಗಳ ನಂತ್ರ ನವಜೋತ್ ಸಿಂಗ್ ಸಿಧು ಜೈಲಿನಿಂದ ಬಿಡುಗಡೆ – ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ
Advertisement
ನೀವು ಪಂಜಾಬ್‌ನ ಜನತೆಯನ್ನು ಏಕೆ ಮೂರ್ಖರನ್ನಾಗಿ ಮಾಡುತ್ತಿದ್ದೀರಿ? ಎಂದು ನನ್ನ ಕಿರಿಯ ಸಹೋದರ ಭಗವಂತ್ ಮಾನ್ (ಪಂಜಾಬ್ ಸಿಎಂ) ಅವರನ್ನು ಕೇಳಲು ಬಯಸುತ್ತೇನೆ. ಅನೇಕ ದೊಡ್ಡ-ದೊಡ್ಡ ಭರವಸೆಗಳನ್ನು ನೀಡಿದ್ದೀರಿ, ಹಾಸ್ಯ ಚಟಾಕಿಗಳನ್ನ ಸಿಡಿಸಿದ್ದೀರಿ. ಆದರೆ ಇಂದು ನೀವು ಕೇವಲ ಕಾಗದದ ಮೇಲಿನ ಸಿಎಂ ಅಷ್ಟೇ ಎಂದು ಟೀಕಿಸಿದ್ದಾರೆ.
ಸಿಧು ಜೈಲಿಗೆ ಹೋಗಿದ್ದು ಏಕೆ?
1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಗುರ್ನಮ್ ಮೃತಪಟ್ಟಿದ್ದರು. ಸ್ಥಳೀಯ ಕೋರ್ಟ್, ಹೈಕೋರ್ಟ್ ಬಳಿಕ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂ ನ್ಯಾಯಮೂರ್ತಿಗಳಾದ ಜೆ.ಚೆಲಮೇಶ್ವರ ಮತ್ತು ಸಂಜಯ್ ಕಿಶನ್ ಕೌಲ್ ಅವರನ್ನೊಳಗೊಂಡ ನ್ಯಾಯಪೀಠ 2018ರಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 323ರ ಅಡಿಯಲ್ಲಿ ಅಪರಾಧಿ ಎಂದು ತೀರ್ಪು ನೀಡಿ 1,000 ರೂಪಾಯಿ ದಂಡ ವಿಧಿಸಿತ್ತು. ಆದರೆ ಜೈಲು ಶಿಕ್ಷೆಯಿಂದ ಸಿಧುಗೆ ವಿನಾಯಿತಿ ನೀಡಲಾಗಿತ್ತು. ಜೈಲು ಶಿಕ್ಷೆಯಿಂದ ವಿನಾಯಿತಿ ನೀಡಿದ್ದನ್ನು ಪ್ರಶ್ನಿಸಿ ಸಂತ್ರಸ್ತನ ಕುಟುಂಬದ ಸದಸ್ಯರು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ 1 ವರ್ಷ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿತ್ತು. ಆದರೆ ಉತ್ತಮ ನಡವಳಿಕೆ ಕಾರಣದಿಂದಾಗಿ ಸಿಧು 2 ತಿಂಗಳು ಮುಂಚಿತವಾಗಿಯೇ ಬಿಡುಗಡೆಗೊಂಡಿದ್ದಾರೆ.