ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಫೇಸ್‍ಬುಕ್(ಮೇಟಾ) ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಚುನಾವಣೆ ಸಮಯದಲ್ಲಿ ಮತದಾರರನ್ನು ತಲುಪಲು ಬಿಜೆಪಿಗೆ ಮೇಟಾ ಸಹಾಯ ಮಾಡಿದೆ. ಇದರಿಂದಾಗಿ ಪ್ರಜಾಪ್ರಭುತ್ವಕ್ಕೆ ಫೇಸ್‍ಬುಕ್ ಕೆಟ್ಟದ್ದು ಎಂದು ಆರೋಪಿಸಿದ್ದಾರೆ.
Meta-worse for democracy. pic.twitter.com/61n0wFj6gQ
— Rahul Gandhi (@RahulGandhi) March 16, 2022
ರಾಹುಲ್ ಗಾಂಧಿ ಅವರು ಅಲ್ ಜಜೀರಾ ಮತ್ತು ದಿ ರಿಪೋರ್ಟರ್ಸ್ ಕಲೆಕ್ಟಿವ್‍ನ ವರದಿಯನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಇತರ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ ಫೇಸ್‍ಬುಕ್ ಬಿಜೆಪಿಗೆ ಚುನಾವಣಾ ಜಾಹೀರಾತುಗಳಿಗಾಗಿ ಕಡಿಮೆ ಬೆಲೆಗೆ ಒಪ್ಪಂದ ಮಾಡಿಕೊಂಡಿದೆ ಎಂದು ಹೇಳಿಕೊಂಡಿದೆ. ಇದನ್ನೂ ಓದಿ: ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸೋಶಿಯಲ್ ಮೀಡಿಯಾ ದುರ್ಬಳಕೆ: ಸೋನಿಯಾ ಆತಂಕ
ಇಂದು ಲೋಕಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು.
ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ದೇಶದಲ್ಲಿ ರಾಜಕೀಯ ಕಾರ್ಯಕ್ಕೆ ಬಳಸಲಾಗುತ್ತಿದೆ. ಜಾಗತಿಕ ಸೋಶಿಯಲ್ ಮೀಡಿಯಾ ಕಂಪನಿಗಳು ಎಲ್ಲಾ ಪಕ್ಷಗಳಿಗೆ ಸರಿಯಾದ ವೇದಿಕೆ ಒದಗಿಸುತ್ತಿಲ್ಲ. ಈ ವಿಚಾರ ಪದೇ ಪದೇ ಸಾರ್ವಜನಿಕರ ಗಮನಕ್ಕೆ ಬರುತ್ತಿದೆ. ಫೇಸ್‍ಬುಕ್ ಮೂಲಕ ಸಾಮಾಜಿಕ ಸಾಮರಸ್ಯವನ್ನು ಕದಡುತ್ತಿದೆ ಇದು ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: CFI ಅಧ್ಯಕ್ಷ ಅತಾವುಲ್ಲಾ ಮೇಲೆ ಕೇಸ್ ದಾಖಲಿಸಲು AG ಅನುಮತಿ ಕೇಳಿದ್ದೇನೆ: ಮುತಾಲಿಕ್