ನವದೆದಲಿ: ಹಿಂದೂಗಳು ಪ್ರತಿಯೊಬ್ಬರ ಡಿಎನ್‍ಎ ವಿಶಿಷ್ಟ ಮತ್ತು ವಿಭಿನ್ನ ಎಂದು ನಂಬುತ್ತಾರೆ ಎಂದು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
40,000 ವರ್ಷಗಳಿಂದ ಎಲ್ಲಾ ಭಾರತೀಯರ ಡಿಎನ್ಎ ಒಂದೇ ಆಗಿದೆ ಎಂದು ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಹೇಳಿದ್ದರು. ಮೋಹನ್ ಭಾಗವತ್ ಅವರ ಹೇಳಿಕೆಗೆ ರಾಹುಲ್ ಪ್ರತಿಕ್ರಿಯಿಸಿದ್ದಾರೆ. ಹಿಂದುತ್ವದಲ್ಲಿ ನಂಬಿಕೆಯುಳ್ಳವರು ಎಲ್ಲಾ ಭಾರತೀಯರ ಡಿಎನ್ಎ ಒಂದೇ ಎಂದು ಭಾವಿಸುತ್ತಾರೆ. ಹಿಂದೂಗಳಾದವರು ಮಾತ್ರ ಪ್ರತಿಯೊಬ್ಬ ವ್ಯಕ್ತಿಯೂ ವಿಶಿಷ್ಟವಾದ ಡಿಎನ್‍ಎ ಹೊಂದಿರುವುದಾಗಿ ನಂಬುತ್ತಾರೆ ಎಂದು ಸೋಶಿಯಲ್ ಮೀಡಿಯಾ ಮೂಲಕವಾಗಿ ಹೇಳಿದ್ದಾರೆ. ಇದನ್ನೂ ಓದಿ: 40 ಸಾವಿರ ವರ್ಷಗಳಿಂದ ಭಾರತೀಯರ ಡಿಎನ್ಎ ಒಂದೇ ಆಗಿದೆ: ಆರ್‌ಎಸ್‌ಎಸ್ ಮುಖ್ಯಸ್ಥ
Advertisement
Advertisement
ಟ್ವೀಟ್‍ನಲ್ಲಿ ಏನಿದೆ?: ಪ್ರತಿಯೊಬ್ಬ ವ್ಯಕ್ತಿಯ ಡಿಎನ್‍ಎ ವಿಭಿನ್ನ ಮತ್ತು ವಿಶಿಷ್ಟವಾಗಿದೆ ಎಂದು ಹಿಂದೂಗಳು ನಂಬುತ್ತಾರೆ. ಹಿಂದುತ್ವದಲ್ಲಿ ನಂಬಿಕೆ ಇರುವವರು ಎಲ್ಲಾ ಭಾರತೀಯರ ಡಿಎನ್ಎ ಒಂದೇ ಎಂದು ನಂಬುತ್ತಾರೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
Advertisement
हिंदू मानते हैं कि हर व्यक्ति का DNA अलग और अनन्य होता है।
हिंदुत्ववादी मानते हैं कि सब भारतीयों का DNA समान है।
— Rahul Gandhi (@RahulGandhi) December 19, 2021
Advertisement
ಮೋಹನ್ ಭಾಗವತ್ ಹೇಳಿದ್ದೇನು?: ಹಿಮಾಚಲ ಪ್ರದೇಶದ ಧರ್ಮಶಾಲದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, 40 ಸಾವಿರ ವರ್ಷಗಳಿಂದಲೂ ಭಾರತೀಯರ ಡಿಎನ್ಎ ಒಂದೇ ಆಗಿದೆ. ಪೂರ್ವಜರೆಲ್ಲ ನಮ್ಮ ಕುಲದವರು. ಆ ಪೂರ್ವಜರಿಂದಾಗಿ ನಮ್ಮ ದೇಶ ಅಭಿವೃದ್ಧಿ ಸಾಧಿಸಿದೆ. ನಮ್ಮ ಸಂಸ್ಕ್ರತಿ ಮುಂದುವರಿದಿದೆ ಎಂದು ತಿಳಿಸಿದರು. ಈ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಇದನ್ನೂ ಓದಿ: ಉಪಯೋಗಿ ಅಲ್ಲ, ನಿರುಪಯೋಗಿ: ಮೋದಿ ಬಣ್ಣನೆಗೆ ಅಖಿಲೇಶ್ ಯಾದವ್ ಲೇವಡಿ