ನವದೆಹಲಿ: ಕೊರೊನಾ ವೈರಸ್‍ನ ರೂಪಾಂತರ ತಳಿ ಓಮಿಕ್ರಾನ್ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಓಮಿಕ್ರಾನ್ ಆತಂಕಕಾರಿಯಾಗಿದ್ದು, ದೇಶದ ಜನರಿಗೆ ಲಸಿಕೆ ಭದ್ರತೆಯನ್ನು ಒದಗಿಸಲು ಕೇಂದ್ರ ಸರ್ಕಾರಕ್ಕೆ ಅವರು ಒತ್ತಾಯಿಸಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ಹೊಸ ರೂಪಾಂತರವು ಅಪಾಯಕಾರಿಯಾಗಿದೆ. ದೇಶದ ಜನರಿಗೆ ಕೋವಿಡ್ ಲಸಿಕೆಯ ಭದ್ರತೆಯನ್ನು ಒದಗಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರವು ಗಂಭೀರವಾಗಬೇಕು. ಇದು ತುಂಬಾ ಮಹತ್ವದ ಸಮಯವಾಗಿದೆ. ಲಸಿಕೆ ಹಂಚಿಕೆಯ ಬಗೆಗಿನ ಅಂಕಿ ಅಂಶಗಳ ಕುರಿತು ವಾಗ್ದಾಳಿ ನಡೆಸಿರುವ ಅವರು, ಒಬ್ಬ ವ್ಯಕ್ತಿಯ ಫೋಟೋದ ಹಿಂದೆ ಈ ಅಂಕಿ-ಅಂಶಗಳನ್ನು ಹೆಚ್ಚು ಕಾಲ ಮರೆಮಾಚಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಯನ್ನು ಪರೋಕ್ಷವಾಗಿ ಟೀಕಿಸಿ ರಾಹುಲ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕೋವಿಡ್ ಹೊಸ ರೂಪಾಂತರಿ ವೈರಾಣು ನಿಯಂತ್ರಣಕ್ಕೆ ಕ್ರಮ: ಸುಧಾಕರ್
Advertisement
New variant is a serious threat.
High time GOI gets serious about providing vaccine security to our countrymen.
Bad vaccination figures can’t be hidden for long behind one man’s photo. #Omicron pic.twitter.com/3J7E8TEwXT
— Rahul Gandhi (@RahulGandhi) November 27, 2021
Advertisement
ಹೆಚ್ಚು ವೇಗವಾಗಿ ಹರಡುವ ಸಾಮರ್ಥ್ಯವಿರುವ ಡೆಲ್ಟಾ ರೂಪಾಂತರ ತಳಿಗಿಂತಲೂ ವೇಗವಾಗಿ ಹರಡುವ ಸಾಮರ್ಥ್ಯ ಓಮಿಕ್ರಾನ್ ತಳಿಗೆ ಇದೆ ಎಂಬುದು ಅಧ್ಯಯನದಲ್ಲಿ ಪತ್ತೆಯಾಗಿದೆ. ಈ ವರೆಗೆ ದೇಶದಲ್ಲಿ ಕೋವಿಡ್ ಲಸಿಕೆಯ 120.96 ಕೋಟಿ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಓಮಿಕ್ರಾನ್ ಆತಂಕ- ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ ಸಡಿಲಗೊಳಿಸುವ ಯೋಜನೆ ಪರಾಮರ್ಶಿಸಲು ಪ್ರಧಾನಿ ಸೂಚನೆ