– ಸತ್ಯಾಗ್ರಹ ನಿಲ್ಲುವುದಿಲ್ಲ
ನವದೆಹಲಿ: ಲಖಿಂಪುರ್ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ರೈತರನ್ನು ಭೇಟಿ ಮಾಡಲು ತೆರಳಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ. ಈ ವೇಳೆ ಸಹೋದರಿಗೆ ಧೈರ್ಯ ತುಂಬಿ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ ಇದೀಗ ಮತ್ತೆ ಸಹೋದರಿ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
Advertisement
ಪ್ರಿಯಾಂಕಾ ಗಾಂಧಿ ವಾದ್ರಾ ನಿರ್ಭೀತ ಮತ್ತು ನೈಜ ಕಾಂಗ್ರೆಸ್ಸಿಗಳು. ಆಕೆ ಎಂದೂ ಸೋಲನ್ನು ಸ್ವೀಕರಿಸುವುದಿಲ್ಲ. ಸತ್ಯಾಗ್ರಹ ನಿಲ್ಲುವುದಿಲ್ಲ, ಫಾರ್ಮರ್ಸ್ ಪ್ರೊಟೆಸ್ಟ್ ಎಂಬ ಹ್ಯಾಶ್‍ಟ್ಯಾಗ್ ಬಳಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: FIR ಇಲ್ಲದೇ ನನ್ನನ್ನು ಗೃಹ ಬಂಧನದಲ್ಲಿರಿಸಿದೆ: ಪ್ರಿಯಾಂಕಾ ಗಾಂಧಿ ಕಿಡಿ
Advertisement
जिसे हिरासत में रखा है, वो डरती नहीं है- सच्ची कांग्रेसी है, हार नहीं मानेगी!
सत्याग्रह रुकेगा नहीं।#FarmersProtest
— Rahul Gandhi (@RahulGandhi) October 5, 2021
Advertisement
ಇತ್ತೀಚೆಗೆ ಹಿಂಸಾಚಾರ ನಡೆದಿದ್ದ ಲಖೀಂಪುರ್ ಜಿಲ್ಲೆಗೆ ತೆರಳುತ್ತಿದ್ದ ಪ್ರಿಯಾಂಕಾ ವಾದ್ರಾ ಅವರನ್ನು ಮಾರ್ಗ ಮಧ್ಯೆ ಪೊಲೀಸರು ವಶಕ್ಕೆ ಪಡೆದುಕೊಂಡು ಗೃಹ ಬಂಧನದಲ್ಲಿ ಇರಿಸಿದ್ದಾರೆ. ಇದನ್ನೂ ಓದಿ: ನೀವು ಹತ್ಯೆ ಮಾಡಿದ ಜನರಿಗಿಂತ ನಾನು ಮುಖ್ಯ ಅಲ್ಲ: ಪ್ರಿಯಾಂಕಾ ಗಾಂಧಿ
Advertisement
Congress supporters continue to protest outside PAC guest house in Sitapur where party leader Priyanka Gandhi Vadra is detained
She was detained yesterday while she was on her way to Lakhimpur Kheri pic.twitter.com/7HuQq5w2ch
— ANI UP (@ANINewsUP) October 5, 2021
ಲಖೀಂಪುರ್‍ನಲ್ಲಿ ಉಪ ಮುಖ್ಯಮಂತ್ರಿ ಕೇಶವ್‍ಪ್ರಸಾದ್ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ನೀಡುವ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬೆಂಗಾವಲು ವಾಹನಗಳ ಸಾಲಿನಲ್ಲಿ ಬರುತ್ತಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾನ ಪುತ್ರ ಇದ್ದ ಕಾರು ರೈತರ ಮೇಲೆ ಹರಿದು ನಾಲ್ವರು ಮೃತಪಟ್ಟಿದ್ದಾರೆ ಎಂದು ರೈತ ಸಂಘಟನೆಗಳು ಆರೋಪಿಸಿವೆ. ಆ ಬಳಿಕ ಅಲ್ಲಿ ಪ್ರತಿಭಟನೆ ಉದ್ರಿಕ್ತಗೊಂಡು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಇದನ್ನೂ ಓದಿ: ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್
प्रियंका, मैं जानता हूँ तुम पीछे नहीं हटोगी- तुम्हारी हिम्मत से वे डर गए हैं।
न्याय की इस अहिंसक लड़ाई में हम देश के अन्नदाता को जिता कर रहेंगे। #NoFear #लखीमपुर_किसान_नरसंहार
— Rahul Gandhi (@RahulGandhi) October 4, 2021
ಲಂಖಿಪುರದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟ ರೈತರ ಮನೆಗಳಿಗೆ ಭೇಟಿ ನೀಡಲೆಂದು ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿಯವರನ್ನು ಉತ್ತರಪ್ರದೇಶದ ಪೊಲೀಸರು ತಡೆದಿದ್ದರು. ಈ ವೇಳೆ ಪ್ರಿಯಾಂಕಾ ಗಾಂಧಿ ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಪೊಲೀಸರು ಪ್ರಿಯಾಂಕಾ ಅವರನ್ನು ವಶಕ್ಕೆ ಪಡೆದಿದ್ದರು. ಸದ್ಯ ಪೊಲೀಸರ ವಶದಲ್ಲಿರುವ ಪ್ರಿಯಾಂಕಾ ಅವರಿಗೆ ರಾಹುಲ್ ಗಾಂಧಿ ಧೈರ್ಯದ ಮಾತುಗಳನ್ನು ಹೇಳಿದ್ದಾರೆ.