ವಾಷಿಂಗ್ಟನ್: ಸಂಸದ ಸ್ಥಾನದಿಂದ ಅನರ್ಹವಾಗಿದ್ದರಿಂದ ನನಗೆ ಜನರ ಸೇವೆ ಮಾಡಲು ದೊಡ್ಡ ಅವಕಾಶ ಸಿಕ್ಕಿದೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.
ಅಮೆರಿಕ ಪ್ರವಾಸದಲ್ಲಿರುವ ಅವರು, ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾಲಯದಲ್ಲಿ (Stanford University Campus in California) ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ರಾಜಕೀಯಕ್ಕೆ ಬಂದಾಗ ಸಂಸದನ ಸ್ಥಾನದಿಂದ ಅನರ್ಹಗೊಳ್ಳುತ್ತೇನೆ ಎಂದು ನಾನು ಊಹಿಸಿರಲಿಲ್ಲ. ಆದರೆ ಅನರ್ಹತೆಯಿಂದಾಗಿ ದೇಶದ ಜನರ ಸೇವೆಯಲ್ಲಿ ತೊಡಗಿಕೊಳ್ಳುವ ಹೊಸ ಅವಕಾಶ ತೆರೆದುಕೊಂಡಿದೆ ಎಂದಿದ್ದಾರೆ. ಇದನ್ನೂ ಓದಿ: ಗುರುತಿನ ಪುರಾವೆಗಳಿಲ್ಲದೇ 2,000 ರೂ. ನೋಟುಗಳ ವಿನಿಮಯ – ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ
Advertisement
ಭಾರತದಲ್ಲಿ ಪ್ರತಿಪಕ್ಷಗಳು ತೊಂದರೆ ಎದುರಿಸುತ್ತಿವೆ. ದೇಶದಲ್ಲಿ ಪ್ರಜಾಸತ್ತಾತ್ಮಕ ಹೋರಾಟವನ್ನು ನಡೆಸಲು ಸಹ ಹೆಣಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು (Bharat Jodo Yatra) ಕೈಗೊಳ್ಳುವ ತೀರ್ಮಾನ ಮಾಡಿತು ಎಂದು ಹೇಳಿದ್ದಾರೆ.
Advertisement
Advertisement
ರಾಹುಲ್ ಗಾಂಧಿಯವರ ಸಂವಾದಕ್ಕೆ ಸಭಾಂಗಣ ಭರ್ತಿಯಾಗಿದ್ದ ಕಾರಣ ಕೆಲ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಲಾಯಿತು. ಕಾರ್ಯಕ್ರಮ ಪ್ರಾರಂಭವಾಗುವ ಎರಡು ಗಂಟೆಗಳ ಮೊದಲು ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.
Advertisement
ಚುನಾವಣಾ ಪ್ರಚಾರದ ವೇಳೆ ಕರ್ನಾಟಕದಲ್ಲಿ ಮೋದಿ ಉಪನಾಮ (Modi Surname) ಬಳಸಿ ನೀಡಿದ್ದ ಹೇಳಿಕೆಗೆ 2019ರಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಪ್ರಕರಣದಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ನಂತರ ಅವರನ್ನು ವಯನಾಡು (Wayanad) ಲೋಕಸಭಾ (Lok Sabha) ಕ್ಷೇತ್ರದ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಇದನ್ನೂ ಓದಿ: ದೇಶದಲ್ಲೇ ಅತ್ಯುತ್ತಮವಾದ ಕಾನೂನು ಸುವ್ಯವಸ್ಥೆ ಕೇರಳದಲ್ಲಿದೆ – ಪಿಣರಾಯಿ ವಿಜಯನ್