ಜಿ20 ಅತಿಥಿಗಳಿಗೆ ಭಾರತದ ವಾಸ್ತವತೆ ಮರೆಮಾಡುವ ಅಗತ್ಯವಿಲ್ಲ: ರಾಹುಲ್ ಗಾಂಧಿ

Public TV
2 Min Read
Rahul Gandhi

ಬ್ರಸೆಲ್ಸ್: ಜಿ20 (G20) ಅತಿಥಿಗಳಿಗೆ ಭಾರತದ ವಾಸ್ತವತೆಯನ್ನು ಮರೆಮಾಡುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ (Congress) ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ (Rahul Gandhi) ಟ್ವೀಟ್ ಮಾಡಿದ್ದಾರೆ. ಅಲ್ಲದೇ ನಮ್ಮ ದೇಶದ ಬಡ ಜನರನ್ನು ಮರೆಮಾಚುವ ಅಗತ್ಯ ಇಲ್ಲ ಎಂದು ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಹುಲ್ ಗಾಂಧಿ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಆಯೋಜಿಸಿರುವ ಯೂರೋಪ್ ಪ್ರವಾಸದಲ್ಲಿದ್ದಾರೆ. ಅಲ್ಲಿಂದಲೇ ಭಾರತದಲ್ಲಿ ನಡೆಯುತ್ತಿರುವ ಜಿ2ಂ ಶೃಂಗ ಸಭೆಯನ್ನು ಗಮನಿಸುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಅಮೆರಿಕ ಅಧ್ಯಕ್ಷರನ್ನು ಪತ್ರಕರ್ತರು ಪ್ರಶ್ನಿಸಲು ಅವಕಾಶ ನೀಡದ ವಿಚಾರವಾಗಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ: ಡಿಕೆಶಿ ಟಾಂಗ್

ಅಲ್ಲದೇ ಜಿ20 ಸಭೆಗೂ ಮುನ್ನ ದೆಹಲಿಯ ಬೀದಿಗಳಲ್ಲಿ ನಾಯಿಗಳನ್ನು ಸೆರೆ ಹಿಡಿಯಲಾಗಿತ್ತು, ಅಲ್ಲದೇ ಸ್ಲಂಗಳಿಗೆ ಪರದೆಯ ಮೂಲಕ ಮರೆ ಮಾಡಲಾಗಿತ್ತು. ಈ ಬಗ್ಗೆ ಕಾಂಗ್ರೆಸ್ ವೀಡಿಯೋ ಒಂದನ್ನು ಹಂಚಿಕೊಂಡಿತ್ತು. ಈ ವಿಚಾರವಾಗಿ ನಮ್ಮ ನೆಲದ ಜನರು ಹಾಗೂ ಪ್ರಾಣಿಗಳನ್ನು ಮುಚ್ಚಿಡುವ ಅಗತ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.

ದ್ವಿಪಕ್ಷೀಯ ಸಭೆಯ ಬಳಿಕ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನೆಗಳನ್ನು ಕೇಳಲು ಮಾಧ್ಯಮಗಳಿಗೆ ಅವಕಾಶ ನೀಡಲಿಲ್ಲ. ಬೈಡೆನ್ ಅವರ ತಂಡವು ಹಲವಾರು ವಿನಂತಿಗಳ ಹೊರತಾಗಿಯೂ ಭಾರತವು ಅವರ ದ್ವಿಪಕ್ಷೀಯ ಸಭೆಯ ನಂತರ ಅವರ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನೆಗಳನ್ನು ಕೇಳಲು ಮಾಧ್ಯಮಗಳಿಗೆ ಅವಕಾಶ ನೀಡಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಈ ಬೆಳವಣಿಗೆ ಪ್ರಜಾಪ್ರಭುತ್ವದ ಪ್ರತಿಪಾದನೆ ಹೇಗಾಗುತ್ತದೆ ಎಂದು ಪ್ರಶ್ನಿಸಿದ್ದಾರೆ. ಇದೇ ವಿಚಾರವಾಗಿ ರಾಹುಲ್ ಗಾಂಧಿಯವರು ಸಹ ಜಿ20 ಅತಿಥಿಗಳಿಂದ ಯಾವುದನ್ನು ಮುಚ್ಚಿಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

ಅಲ್ಲದೇ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಜಿ20 ಸಭೆಗೆ ಆಹ್ವಾನ ನೀಡದಿರುವ ಕುರಿತು ಇದು ಕೀಳುಮಟ್ಟದ ರಾಜಕೀಯ ಎಂದು ಅವರು ಟೀಕಿಸಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಮುಖವಾಡ ಕಳಚಿತು.. ಬಿಜೆಪಿಯೊಂದಿಗೆ ಮೈತ್ರಿ ಸ್ವಾಗತಿಸುತ್ತೇನೆ: ಹೆಬ್ಬಾಳ್ಕರ್

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article