ನವದೆಹಲಿ: ಮತದಾರರ ಪಟ್ಟಿಯಲ್ಲಿನ ದೋಷಗಳ ವಿಚಾರಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ವಿರೋಧ ಪಕ್ಷಗಳು ಸಂಸದರು ಆಗ್ರಹಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಾತನಾಡಿದ ಸಂಸದರು, ಈ ಬಗ್ಗೆ ಚರ್ಚೆಗೆ ಅವಕಾಶ ನೀಡಲು ಒತ್ತಾಯಿಸಿ ಗದ್ದಲ ನಡೆಸಿದರು.
ಲೋಕಸಭೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸರ್ಕಾರ ಮತದಾರರ ಪಟ್ಟಿಗಳನ್ನು ಸಿದ್ಧಪಡಿಸುವುದಿಲ್ಲ ಎಂಬ ನಿಮ್ಮ ಹೇಳಿಕೆಯನ್ನು ನಾವು ಸ್ವೀಕರಿಸುತ್ತೇವೆ. ಆದರೆ ಈ ವಿಷಯದ ಬಗ್ಗೆ ಚರ್ಚೆ ನಡೆಯಬೇಕೆಂದು ಮಹಾರಾಷ್ಟ್ರ ಸೇರಿದಂತೆ ಪ್ರತಿಯೊಂದು ರಾಜ್ಯದಲ್ಲೂ ವಿರೋಧ ಪಕ್ಷಗಳು ಒಂದೇ ಧ್ವನಿಯಲ್ಲಿ ಪ್ರಶ್ನೆಗಳನ್ನು ಎತ್ತಿವೆ. ಹೀಗಾಗಿ ಈ ಬಗ್ಗೆ ಚರ್ಚೆಯಾಗಬೇಕು ಎಂದರು. ಇದನ್ನೂ ಓದಿ: ನಟಿ ರನ್ಯಾಗೆ ಸಿದ್ದರಾಮಯ್ಯರಿಂದ ಪರಮೇಶ್ವರ್‌ವರೆಗೆ ಯಾರೂ ಸಪೋರ್ಟ್ ಮಾಡಿಲ್ಲ: ಚಲುವರಾಯಸ್ವಾಮಿ
ಈ ವಿಷಯದಲ್ಲಿ ರಾಜ್ಯಸಭೆಯಲ್ಲಿ ಮಾತನಾಡಿದ ಸಂಸದ ಕಪಿಲ್ ಸಿಬಲ್, ಚುನಾವಣಾ ಆಯೋಗವು ಸರ್ಕಾರದ ಕೈಯಲ್ಲಿದೆ. ಪ್ರಜಾಪ್ರಭುತ್ವ ಹೀಗೆಯೇ ಮುಂದುವರಿದರೆ ಮತ್ತು ಚುನಾವಣಾ ಆಯೋಗವು ಸರ್ಕಾರಕ್ಕಾಗಿ ಲಾಬಿ ಮಾಡುತ್ತಲೇ ಇದ್ದರೆ ಬರುವ ಫಲಿತಾಂಶಗಳು ನಿಮ್ಮ ಮುಂದೆ ಇವೆ. ಈ ವ್ಯವಸ್ಥೆ ಮುಂದುವರಿದರೆ ಇದು ಪ್ರಜಾಪ್ರಭುತ್ವವಲ್ಲ. ನಾವು ಹಲವು ವರ್ಷಗಳಿಂದ ಅನುಮಾನದಿಂದ ಇದ್ದೇವೆ. ನೆಲದ ಮೇಲೆ ಏನಾಗುತ್ತದೆ ಎಂದು ಎಲ್ಲರಿಗೂ ತಿಳಿದಿದೆ, ಆದರೆ ಕೇಳಲು ಯಾರೂ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ – ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನ ಮುಂಬೈಗೆ ವಾಪಸ್
ತೃಣಮೂಲ ಕಾಂಗ್ರೆಸ್ ಸದಸ್ಯ ಸೌಗತ ರಾಯ್ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಕೆಲವು ದೋಷಗಳಿವೆ. ಪಶ್ಚಿಮ ಬಂಗಾಳ ಮುರ್ಷಿದಾಬಾದ್ ಮತ್ತು ಬುರ್ದ್ವಾನ್ ಸಂಸದೀಯ ಕ್ಷೇತ್ರಗಳು ಮತ್ತು ಹರಿಯಾಣದಲ್ಲಿ ಒಂದೇ ರೀತಿಯ ಇಪಿಐಸಿ (ಚುನಾವಣಾ ಫೋಟೋ ಗುರುತಿನ ಚೀಟಿ) ಸಂಖ್ಯೆಯನ್ನು ಹೊಂದಿರುವ ಮತದಾರರಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ರನ್ಯಾ ಕೇಸ್: ಯಾವ ಸಚಿವರು? – ಎಂ.ಬಿ ಪಾಟೀಲ್ ಪ್ರಶ್ನೆ
ಮಹಾರಾಷ್ಟ್ರದ ವಿಷಯದಲ್ಲಿಯೂ ಇದನ್ನು ಹೇಳಲಾಗಿದೆ. ಹರಿಯಾಣದಲ್ಲೂ ಈ ವಿಷಯದ ಬಗ್ಗೆ ಗಮನ ಸೆಳೆಯಲಾಯಿತು. ಈಗ ಅವರು ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ ಮತ್ತು ಅಸ್ಸಾಂಗೂ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಇಡೀ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಆಗಬೇಕು. ಪಟ್ಟಿಗಳಲ್ಲಿ ಕೆಲವು ತಪ್ಪುಗಳು ಏಕೆ ಸಂಭವಿಸಿವೆ ಎಂಬುದಕ್ಕೆ ಚುನಾವಣಾ ಆಯೋಗ ದೇಶಕ್ಕೆ ಉತ್ತರಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಎಫ್‌ಬಿಐ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ ಡ್ರಗ್ ಡೀಲರ್ ಪಂಜಾಬ್ ಪೊಲೀಸರ ವಶಕ್ಕೆ