ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ (NEET) ಸೋರಿಕೆ ವಿವಾದದ ನಡುವೆ ಪ್ರಧಾನಿ ನರೇಂದ್ರ ಮೋದಿ (PM Modi) ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ದೇಶದ ಯುವಕರ ಭವಿಷ್ಯಕ್ಕೆ ದೊಡ್ಡ ಹಾನಿ ಮಾಡಿದ್ದು ಕೇಂದ್ರ ಸರ್ಕಾರವೇ ಎಂದು ಅವರು ಆರೋಪಿಸಿದ್ದಾರೆ.
ಪ್ರಧಾನಿ ಮೋದಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಖಚಿತಪಡಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ. ಯುವಕರ ಭವಿಷ್ಯ ಸರ್ಕಾರದ ಮೊದಲ ಆದ್ಯತೆ ಎಂದು ಭರವಸೆ ನೀಡಿದ್ದಾರೆ.
ಪ್ರಧಾನಿ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಯುವಕರ ಭವಿಷ್ಯಕ್ಕೆ ಹೆಚ್ಚು ಹಾನಿ ಮಾಡಿರುವುದು ನೀವೇ. ದೇಶದ ಶಿಕ್ಷಣ ವ್ಯವಸ್ಥೆಯನ್ನು ಹಾಳಾಗಲು ನೀವು ಅವಕಾಶ ನೀಡಿದ್ದೀರಿ. ಇದಕ್ಕೆ ಕಾರಣರಾದವರನ್ನೇ ರಕ್ಷಿಸಿದ್ದೀರಿ ಎಂದು ಸೋಷಿಯಲ್ ಮೀಡಿಯಾ X ನಲ್ಲಿ ಪೋಸ್ಟ್ ಮೂಲಕ ಆರೋಪಿಸಿದ್ದಾರೆ.ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು – ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ
ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಈ ಕೆಳಗಿನ ಮೂರು ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ವಿದ್ಯಾರ್ಥಿಗಳಲ್ಲಿ ಅಧಿಕೃತವಾಗಿ ಕ್ಷಮೆ ಕೇಳಬೇಕು ಎಂಬುದು ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ.
ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
You are the one who has harmed the future of our youth the most.
You allowed and encouraged the total capture and destruction of our education system – and protected every person responsible for it.
The students’ demands are clear:
1. Sack Dharmendra Pradhan.
2. Apologise to… https://t.co/0MK4wPMNiK— Rahul Gandhi (@RahulGandhi) July 23, 2026
ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ದುರ್ಬಲಗೊಳಿಸಲಾಗಿದೆ ಎಂದು ಆರೋಪಿಸಿದ ಅವರು, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ, ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ: ಮೋದಿ
