– ನಾನು ಬಡಬಡಿಸುತ್ತಿದ್ದೇನೆ ಅಂತ ನಿಮಗೆ ಅನಿಸುತ್ತಿದೆಯೇ?
– ಮೋದಿ ವಿರುದ್ಧ ಮತ್ತೆ ಕಿಡಿಕಾರಿದ ರಾಹುಲ್ ಗಾಂಧಿ
ನವದೆಹಲಿ: ರಫೇಲ್ ಡಿಲ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 30 ಸಾವಿರ ಕೋಟಿ ರೂ. ಕಳ್ಳತನ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಫೇಲ್ ಹಗರಣದಲ್ಲಿ ಪ್ರಧಾನಿ ಮೋದಿ ಮತ್ತು ಪ್ರಧಾನ ಮಂತ್ರಿ ಕಚೇರಿ ಭಾಗಿಯಾಗಿದೆ ಎಂಬ ಮಾಧ್ಯಮವೊಂದರ ತನಿಖಾ ವರದಿಯನ್ನು ಇಟ್ಟುಕೊಂಡು ಆರೋಪಿಸಿದ್ದಾರೆ. ಇದನ್ನು ಓದಿ: ಸೈನಿಕರಿಗೆ ಬುಲೆಟ್ ಪ್ರೂಫ್ ಜಾಕೆಟ್ ನೀಡಲು ಆಗದವರು ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾತನಾಡುತ್ತಾರೆ: ಮೋದಿ
Advertisement
Congress President Rahul Gandhi: PM Modi himself robbed Air Force's Rs 30,000 crore and gave it to Anil Ambani, we have been raising this since 1 year. Now a report has come where Defence Ministry officials say that PM was holding parallel negotiations with France Govt. #Rafale pic.twitter.com/76OPEVe3Vl
— ANI (@ANI) February 8, 2019
Advertisement
ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಹಗರಣ ನಡೆದಿದೆ ಅಂತ ಸುಮಾರು ದಿನಗಳಿಂದ ಆರೋಪ ಮಾಡುತ್ತಾ ಬಂದಿದ್ದೇವೆ. ಮಾಧ್ಯಮದ ವರದಿಯ ಪ್ರಕಾರ ಪ್ರಧಾನಿ ಮೋದಿ ವಂಚನೆ ಮಾಡಿರುವುದು ಸ್ಪಷ್ಟವಾಗುತ್ತದೆ. ಅದನ್ನು ಉದ್ಯಮಿ ಅನಿಲ್ ಅಂಬಾನಿ ಅವರಿಗೆ ನೀಡಿದ್ದಾರೆ. ಈ ಒಪ್ಪಂದಲ್ಲಿ ಪ್ರಧಾನಿ ಮೋದಿ ಏಕೆ ಭಾಗಿಯಾಗಿದ್ದಾರೆ. ಉದ್ಯಮಿ ಅನಿಲ್ ಅಂಬಾನಿ ಅವರಿಗಾಗಿಯೇ ಭಾಗಿಯಾಗಿದ್ದಾರೇ ಹೊರತು, ದೇಶದ ಜನತೆ, ಸೈನಿಕರಿಗಾಗಿ ಅಲ್ಲ. ಈ ಮೂಲಕ ಚೌಕಿದಾರ ಒಬ್ಬ ಕಳ್ಳ ಎನ್ನುವುದು ಸಾಬೀತಾಗುತ್ತದೆ. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ಮೋದಿ ಅವರು ಸುಳ್ಳು ಹೇಳುತ್ತಲೇ ಇದ್ದಾರೆ ಎಂದು ಕುಟುಕಿದರು.
Advertisement
ಪ್ರಧಾನಿ ಮೋದಿ ಅವರು ಫ್ರಾನ್ಸ್ ಜೊತೆಗೆ ಮಾತುಕತೆ ನಡೆಸಿದ್ದಾರೆ. ಆದರೆ ನಮ್ಮ ದೇಶದ ವಾಯು ಪಡೆಯ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿಲ್ಲ. ಅನಿಲ್ ಅಂಬಾನಿ ಅವರಿಗೆ ಗುತ್ತಿಗೆ ಸಿಗಬೇಕು ಅಂತ ಹೇಳಿದ್ದಾರೆ ಎಂದು ಫ್ರಾನ್ಸ್ ನ ಮಾಜಿ ಅಧ್ಯಕ್ಷರು ಬಹಿರಂಗಪಡಿಸಿದ್ದಾರೆ ಎಂದು ರಾಹುಲ್ ಗಾಂಧಿ ಅಂತಾ ಹೇಳಿದರು.
Advertisement
#WATCH: Congress President Rahul Gandhi responds to PM Modi's allegation that Congress is weakening the Indian Air Force. pic.twitter.com/SglP51RQKN
— ANI (@ANI) February 8, 2019
ಎನ್‍ಡಿಎ ಅಧಿಕಾರ ಅವಧಿಯಲ್ಲಿ ಒಂದೇ ಒಂದು ರಕ್ಷಣಾ ಒಪ್ಪಂದ ಪ್ರಾಮಾಣಿಕವಾಗಿ ನಡೆದಿಲ್ಲ. ಗೋವಾ ಸಿಎಂ ಮನೋಹರ್ ಪರೀಕರ್ ಭೇಟಿ ಮಾಡಿದಾಗ ರಫೆಲ್ ಒಪ್ಪಂದದ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಅವರ ಆರೋಗ್ಯ ವಿಚಾರಿಸಿ ಬಂದೆ. ನಾನು ಬಡಬಡಿಸುತ್ತಿದ್ದೇನೆ ಅಂತ ನಿಮಗೆ ಅನಿಸುತ್ತಿದೆಯೇ? ನನ್ನಲ್ಲಿರುವ ಗುಣಗಳನ್ನು ಹಾಗೂ ಪ್ರಧಾನಿ ಮೋದಿ ಅವರ ಗುಣಗಳನ್ನು ನೋಡಿ. ಯಾರು ಬಡಬಡಿಸುತ್ತಿದ್ದಾರೆ ಎನ್ನುವುದು ಅರ್ಥವಾಗುತ್ತದೆ ಎಂದು ತಿರುಗೇಟು ನೀಡಿದರು.
#WATCH: Rahul Gandhi on PM saying 'Ulta Chor, Chowkidaar ko daante': He's talking about himself?He has got a dual personality?He's now viewing himself as 'Chowkidaar & 'Chor'? He talks to himself at night,one day he becomes 'Chowkidaar' & one day he becomes 'Chor'? Schizophrenia? pic.twitter.com/yhb0GSh4HH
— ANI (@ANI) February 8, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv