ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇಂದು ನೀಟ್ ಪ್ರತಿಭಟನೆಯ (NEET Protest) ವೇಳೆ ನಡೆದ ಪೆಲೆಟ್ ದಾಳಿಯಲ್ಲಿ ಗಾಯಗೊಂಡ ಸಂತ್ರಸ್ತ ವಿದ್ಯಾರ್ಥಿಯೊಂದಿಗೆ ಸಂಸತ್ ರಸ್ತೆಯ ಪೊಲೀಸ್ ಠಾಣೆಗೆ ತೆರಳಿ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಧರಣಿ ಕುಳಿತಿದ್ದಾರೆ.
ಪೊಲೀಸರು ಎಫ್‌ಐಆರ್ (FIR) ದಾಖಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಸಂತ್ರಸ್ತ ವಿದ್ಯಾರ್ಥಿ ಸಾಹಿಲ್ ಲೋಚಬ್ ಮತ್ತು ಆತನ ತಾಯಿಯೊಂದಿಗೆ ಪೊಲೀಸ್ ಠಾಣೆಯ ಹೊರಭಾಗದಲ್ಲೇ ಕುಳಿತು ಪ್ರತಿಭಟನೆ ಆರಂಭಿಸಿದರು. ಬಳಿಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ (Priyanka Vadra) ಸ್ಥಳಕ್ಕೆ ಆಗಮಿಸಿ ಧರಣಿಯಲ್ಲಿ ಭಾಗಿಯಾದರು.
ರಾಹುಲ್ ಗಾಂಧಿ ಬೇಡಿಕೆಗೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈಗಾಗಲೇ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದು ಮನವರಿಕೆ ಮಾಡಿದರು. ಪೊಲೀಸರ ಪ್ರತಿಕ್ರಿಯೆಗೆ ಜಗ್ಗದ ರಾಹುಲ್ ಗಾಂಧಿ ಎಫ್‌ಐಆರ್ ದಾಖಲಾಗುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ರಾಹುಲ್ ಪಟ್ಟು ಹಿಡಿದಿದ್ದಾರೆ.
अमित शाह और उनकी दिल्ली पुलिस
दोषियों को बचा नहीं सकतीFIR दर्ज करो
साहिल को न्याय दो pic.twitter.com/0Phw8cWdDx— Congress (@INCIndia) August 21, 2026
“ನಾವು ವಿದ್ಯಾರ್ಥಿಗಳ ಪರ ನಿಲ್ಲುತ್ತೇವೆ. ನ್ಯಾಯಕ್ಕಾಗಿ ನಿಲ್ಲುತ್ತೇವೆ. ನಾವು ಸುಮ್ಮನಿರುವುದಿಲ್ಲ. ಎಫ್‌ಐಆರ್ ದಾಖಲಾಗುವವರೆಗೂ ಡಿಸಿಪಿ ಕಚೇರಿ ಮುಂದೆ ಧರಣಿ ಮುಂದುವರಿಯಲಿದೆ” ಎಂದು ಕಾಂಗ್ರೆಸ್ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಧರಣಿ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಜುಲೈ 20 ರಂದು ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಾಹಿಲ್ ಮೇಲೆ ಪೊಲೀಸರು ಪೆಲೆಟ್ ಗನ್‌ನಿಂದ ದಾಳಿ ನಡೆಸಿದ್ದಾರೆ. ಇದರಿಂದಾಗಿ ಆತನ ಒಂದು ಕಣ್ಣಿನ ದೃಷ್ಟಿ ಕಳೆದುಕೊಳ್ಳುವ ಭೀತಿ ಎದುರಾಗಿದೆ” ಎಂದರು. ಇದನ್ನೂ ಓದಿ: ರಾಜಸ್ಥಾನ ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ ಸಿಜೆಪಿ ನಾಯಕರಿಗೆ ಹೊಡೆದು ಬೆನ್ನಟ್ಟಿ ಓಡಿಸಿದ ಗ್ರಾಮಸ್ಥರು
20 जुलाई को छात्रों पर पैलेट गन से हमला किया गया, जिसमें साहिल को गंभीर चोटें आईं।
अस्पताल की रिपोर्ट कहती है कि साहिल के शरीर में 200 से ज़्यादा छर्रे हैं, जिसमें 3 छर्रे उसकी आंख में हैं।
साहिल के आंख की रोशनी चली गई है। उसके दिल के पास भी छर्रे हैं, जिन्हें निकाला नहीं जा… pic.twitter.com/Z6vkUIvJku
— Congress (@INCIndia) August 21, 2026
ಪೊಲೀಸರು ಗುಂಡು ಹಾರಿಸಿಲ್ಲ ಎಂದಾದರೆ, ಬೇರೆ ಯಾರೋ ಹಾರಿಸಿರಬೇಕು. ಇಲ್ಲಿ ಅಪರಾಧ ನಡೆದಿರುವುದು ಸ್ಪಷ್ಟ. ನಾವು ಕೇವಲ ಎಫ್‌ಐಆರ್ ದಾಖಲಿಸಿ ಈ ಕುಟುಂಬಕ್ಕೆ ನ್ಯಾಯ ನೀಡಬೇಕೆಂದು ಕೇಳುತ್ತಿದ್ದೇವೆ ಎಂದು ಅವರು ಹೇಳಿದರು.
ರಾಹುಲ್ ಗಾಂಧಿ ಅವರ ಪ್ರತಿಭಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್, ರಾಹುಲ್ ಅರಾಜಕತೆಯ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಷ್ಟ್ರಗೀತೆ ‘ವಂದೇ ಮಾತರಂ’ ವಿವಾದದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಈ ತಂತ್ರ ರೂಪಿಸಿದೆ. ಯಾವುದೇ ಅನುಮತಿ ಇಲ್ಲದೆ ಪೊಲೀಸ್ ಠಾಣೆ ಮುಂದೆ ಧರಣಿ ಕುಳಿತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ ಮತ್ತು ಸುಪ್ರೀಂ ಕೋರ್ಟ್ ಸಮಿತಿ ರಚಿಸಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದರೂ, ರಾಹುಲ್ ಗಾಂಧಿ ದೇಶದ ಕಾನೂನಿಗೆ ಗೌರವ ನೀಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
